ಪುಣೆ ತುಳುಕೂಟದ ಯುವ ವಿಭಾಗ: ವಿಶ್ವ ಪರಿಸರ ದಿನಾಚರಣೆ
Team Udayavani, Jun 7, 2017, 4:32 PM IST
ಪುಣೆ: ಪುಣೆ ತುಳುಕೂಟದ ಯುವ ವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯು ಜೂ. 4 ರಂದು ಪೌಡ್‌ರೋಡ್‌ನಲ್ಲಿರುವ ವೆತಾಳ್ ಟೆಕಿx ಬೆಟ್ಟದಲ್ಲಿ ಆಚರಿಸಲಾಯಿತು.
ಯುವ ವಿಭಾಗದ ಕಾರ್ಯಾ ಧ್ಯಕ್ಷ ನ್ಯಾಯವಾದಿ ರೋಹನ್ ಪಿ. ಶೆಟ್ಟಿ ಅವರ ನೇತೃತ್ವದಲ್ಲಿ ಸಮಿತಿಯ ಸುಮಾರು 40 ಸದಸ್ಯರು ಬೆಟ್ಟಕ್ಕೆ ತೆರಳಿ ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ನೂರಾರು ಸಂಖ್ಯೆಯಲ್ಲಿ ಗಿಡ ಗಳನ್ನು ನೆಟ್ಟು ನೀರೆರೆದರು. ಈ ಸಂದರ್ಭದಲ್ಲಿ ರೋಹನ್ ಶೆಟ್ಟಿ ಅವರು ಮಾತನಾಡಿ, ವಿಶ್ವ ಪರಿಸರ ದಿನಾಚರಣೆ ಎಂಬುವುದು ಕೇವಲ ಒಂದು ದಿನ ಗಿಡಗಳನ್ನು ನೆಡುವ ಕಾರ್ಯಕ್ರಮವಲ್ಲ ಪ್ರಕೃತಿಯನ್ನು ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ. ಆದ್ದರಿಂದ ಇಂದು ನೆಟ್ಟ ಗಿಡಗಳನ್ನು ನಿರಂತರವಾಗಿ ನೀರೆರೆದು ಪೋಷಿಸುವ ಕಾರ್ಯವನ್ನು ನಮ್ಮ ಸಂಸ್ಥೆ ಮಾಡಲಿದೆ. ಹಾಗೂ ಯುವ ಜನತೆಯಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಕಾಳಜಿ ಮೂಡಿಸುವ ಕಾರ್ಯವನ್ನು ಮಾಡಲಿದೆ. ಈ ಕಾರ್ಯಕ್ಕೆ ಬೆಂಬಲಿಸಿದ ತುಳುಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಹಾಗೂ ತಮ್ಮ ಸಮಿತಿಯ ಪದಾಧಿಕಾರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.
ಯುವ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಬಂಟ ಸಮಾಜದ ಮಕ್ಕಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ವರದಿ -ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ಹೊಸ ಸೇರ್ಪಡೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.