ಮುಸುರೆ ತೊಳೆಯೋರಿಲ್ಲ ….ಸರ್ವಿಸ್‌ ಮಾಡೋರಿಲ್ಲ …

ಪುಣೆಯಲ್ಲಿ ಹೊಟೇಲಿಗರಿಗೆ ಕಾರ್ಮಿಕರ ವಿಪರೀತ ಸಮಸ್ಯೆ

Team Udayavani, Apr 24, 2019, 3:29 PM IST

3-ab

ಪುಣೆ: ಪ್ರತೀ ವರ್ಷ ಎಪ್ರಿಲ್‌ ಆರಂಭವಾಯಿತೆಂದರೆ ಪುಣೆ ಹೊಟೇಲಿಗರ ಸಮಸ್ಯೆಯೂ ಆರಂಭವಾಯಿತೆನ್ನಬಹುದು. ಎಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಕಾರ್ಮಿಕರೆಲ್ಲ ತಮ್ಮ ತಮ್ಮ ಊರಿಗೆ ಹೋಗುವ ಕಾರಣ ಹೊಟೇಲಿನಲ್ಲಿ ಸಮಸ್ಯೆ ಎದುರಾಗುತ್ತದೆ. ಪುಣೆಯಾದ್ಯಂತ ವೆಜ್‌ ಹಾಗೂ ಪರ್ಮಿಟ್‌ ರೂಮ್‌ಗಳಲ್ಲಿ ಎಲ್ಲ ಕಡೆಯೂ ಇದೀಗ ಕಾರ್ಮಿಕರ ಸಮಸ್ಯೆ ಎದುರಾಗಿದೆ.

ಎಲ್ಲಕ್ಕಿಂತ ಹೆಚ್ಚಾಗಿ ಕ್ಲೀನಿಂಗ್‌ ಸಮಸ್ಯೆಯಾಗಿದೆ. ಮೋರಿ ಹುಡುಗರು ಸಿಗುತ್ತಲೇ ಇಲ್ಲ, ಮಾತ್ರವಲ್ಲ ಸರ್ವಿಸ್‌ ಮಾಡುವ ವೈಟರ್‌ ಸಮಸ್ಯೆ, ಉಳಿದಂತೆ ಮಾಲ್‌ವಾಲಾ, ಹೆಲ್ಪರ್‌ಗಳು. ಇದೀಗ ಹೊಟೇಲಿಗರು ಪರಸ್ಪರ ಭೇಟಿಯಾದಾಗ ಹೇಗೆ ಜನ ಇದ್ದಾರಾ…? ಎಂದಾಗ ಭಾರೀ ಕಷ್ಟ ಮಾರಾಯೆÅà ಜನನೇ ಸಿಗುತ್ತಿಲ್ಲ, 25 ಮಂದಿ ಇದ್ದ ಕಡೆ 10 ಜನರಿಂದ ಸುಧಾರಿಸುತ್ತಿದ್ದೇವೆ ಎಂಬ ಮಾತುಗಳು ಹೊಟೇಲಿಗರಿಂದ ಕೇಳಿ ಬರುತ್ತಿರುವುದು ಸರ್ವೇ ಸಾಮಾನ್ಯವಾಗಿದೆ.

ಪುಣೆಯಲ್ಲಿ ಅಂದಾಜು ಪ್ರಕಾರ ಮೂರು ಸಾವಿರಕ್ಕೂ ಹೆಚ್ಚು ಹೊಟೇಲ್‌ಗ‌ಳಿದ್ದು ಐವತ್ತು ಸಾವಿರಕ್ಕೂ ಹೆಚ್ಚು ಕಾರ್ಮಿಕರಿ¨ªಾರೆ. ಇಂದಿನ ದಿನಗಳಲ್ಲಿ ಹೆಚ್ಚಿನ ಹೊಟೇಲ್‌ ಕಾರ್ಮಿಕರು ಪಶ್ಚಿಮ ಬಂಗಾಳ ಮೂಲದವರು. ಅವರ ಹೊರತಾಗಿ ಸ್ವಲ್ಪ ಕೊಲ್ಹಾಪುರದ ಕಾರ್ಮಿಕರು. ಕೊಲ್ಹಾಪುರದ ಕಾರ್ಮಿಕರು ಹೆಚ್ಚಾಗಿ ತಿಂಗಳ ಸಂಬಳ ಸಿಕ್ಕಿದ ಕೂಡಲೇ ಊರಿಗೆ ಹೋಗುತ್ತಿರುವುದರಿಂದ ಅವರನ್ನು ಹೆಚ್ಚಾಗಿ ನೆಚ್ಚಿಕೊಳ್ಳುವಂತಿಲ್ಲ. ಒಂದಷ್ಟು ಉತ್ತರ ಪ್ರದೇಶ, ಮಧ್ಯಪ್ರದೇಶ ಹಾಗೂ ಬಿಹಾರ ಮೂಲದವರು.

ಹಿಂದೆ ಬಿಹಾರ ಮೂಲದ ಕಾರ್ಮಿಕರು ಹೊಟೇಲ್‌ಗ‌ಳಲ್ಲಿ ಹೆಚ್ಚಾಗಿದ್ದರು. ಆದರೆ ಬಿಹಾರ ಅಭಿವೃದ್ಧಿ ಹೊಂದುತ್ತಿದ್ದಂತೆ ಯಾರೂ ಪುಣೆ ಮುಂಬಯಿಗಳಿಗೆ ಬರುತ್ತಿಲ್ಲ. ಹಿಂದೆ ಬಾಂಗ್ಲಾದೇಶದಿಂದ ವಲಸೆ ಬರುವವರು ನೇರವಾಗಿ ಮುಂಬಯಿ, ಪುಣೆಯಂತಹ ನಗರಗಳಲ್ಲಿ ಹೊಟೇಲ್‌ ಕೆಲಸಕ್ಕೆ ಬರುತ್ತಿದ್ದರು. ಇದೀಗ ವಲಸೆ ಬರುವವರಿಗೆ ಭಾರತ ಸರಕಾರದ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದ್ದರಿಂದ ಹಾಗೂ ಆಧಾರ್‌ ಕಾರ್ಡ್‌, ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಿದ್ದರಿಂದ ಅವರ ಸಂಖ್ಯೆಯೂ ಇಳಿಮುಖವಾಗಿದ್ದು ಕಾರ್ಮಿಕರ ಸಮಸ್ಯೆಗೆ ಕಾರಣವಾಗಿದೆ.

ಸಮಸ್ಯೆಗಳಿಗೆ ಪರಿಹಾರವೆಂಬಂತೆ ಭವಿಷ್ಯದಲ್ಲಿ ಸೆಲ್ಫ್ ಸರ್ವಿಸ್‌ ಹೊಟೇಲ್‌ಗ‌ಳು ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತಿದೆ. ಈ ಸಮಸ್ಯೆಗಳಿಂದ ಹೊರಬರಲು ಕೆಲವೊಂದು ಉದ್ಯಮಿಗಳು ರೆಸ್ಟೋರೆಂಟ್‌ಗಳ ಬದಲಾಗಿ ಲಾಡಿjಂಗ್‌ಗಳಿಗೆ ಮೊರೆ ಹೋಗುತ್ತಿದ್ದಾರೆ. ಲಾಡಿjಂಗ್‌ ಉದ್ಯಮವೆಂದರೆ ಹೆಚ್ಚು ಕಾರ್ಮಿಕರ ಅಗತ್ಯವಿರದೆ ಮೂರು ನಾಲ್ಕು ಜನರು ಸಾಕಾಗುತ್ತದೆ ಎಂಬುದು ಅವರ ಅಭಿಮತವಾಗಿದೆ.

ವರದಿ: ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.