“ಪುಣ್ಯಶ್ಲೋಕ ವಾರದ’ಎಂಬ ಗ್ರಂಥ ಬಿಡುಗಡೆ

ವಾರದ ಮಲ್ಲಪ್ಪನವರು ಇತರರಿಗೆ ಮಾದರಿ: ಕಾಶೀ ಜಗದ್ಗುರು

Team Udayavani, Jun 21, 2019, 5:45 PM IST

2006MUM08

ಸೊಲ್ಲಾಪುರ: ಸೊಲ್ಲಾಪುರದ ವಾರದ ಮಲ್ಲಪ್ಪನವರು ವೀರಶೈವ ಧರ್ಮದ ಒಬ್ಬ ಯುಗಪುರುಷರಾಗಿದ್ದರು. ವಾರದ ಮಲ್ಲಪ್ಪನವರನ್ನು ಸೊಲ್ಲಾಪುರದ ಜನತೆ ಅಪ್ಪಸಾಹೇಬ್‌ ಎಂದು ಕರೆಯುತ್ತಿದ್ದರು ಎಂದು ಕಾಶೀ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಸೊಲ್ಲಾಪುರ ನಗರದ ಹುತಾತ್ಮ ಸೃ¾ತಿ ಭವನದಲ್ಲಿ ಹಮ್ಮಿಕೊಂಡಿದ್ದ ವಾರದ ಮಲ್ಲಪ್ಪನವರ ಚರಿತ್ರೆ ಗ್ರಂಥವಾದ ‘ಪುಣ್ಯಶ್ಲೋಕ ವಾರದ’ ಎಂಬ ಗ್ರಂಥ ಬಿಡುಗಡೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿ, ಬ್ರಿಟಿಷ್‌ ಸರಕಾರವು ಇವರ ಸಾಮಾಜಿಕ ಸೇವೆಯನ್ನು ಪರೀಕ್ಷಿಸಿ ಇವರಿಗೆ ರಾವ್‌ ಬಹದ್ದೂರ್‌ ಎಂಬ ಪ್ರಶಸ್ತಿ ನೀಡಿ ಗೌರವಿಸಿದ್ದರು. ಅಪ್ಪಸಾಹೇಬ್‌ ವಾರದವರು ಸಾಮಾಜಿಕ, ಶೈಕ್ಷಣೀಕ, ಧಾರ್ಮಿಕ, ಔದ್ಯೋಗಿಕ ಮತ್ತು ರಾಜಕೀಯವಾಗಿ ಮಾಡಿದ ಸೇವೆ ಅಪೂರ್ವವಾದದು. ಸೊಲ್ಲಾಪುರದ ಜನತೆ ಇವರನ್ನು ಮಹಾರಾಜ ನೆಂತಲೆ ಕರೆಯುತ್ತಿದ್ದರು. ಇವರು ನರಸಿಂಹ ಗಿರಿಜಿ ಎಂಬ ಮುಂಬಯಿಯ ಮಾರ್ವಾಡಿ ಅವರ ಸಹಭಾಗಿತ್ವದಲ್ಲಿ ನೂಲಿನ ಗಿರಣಿಯನ್ನು ಸ್ಥಾಪಿಸಿದ್ದರು. ಅದರಿಂದ ಸಾವಿರಾರು ಬಡ ಕುಟುಂಬಗಳಿಗೆ ಉದ್ಯೋಗವನ್ನು ಕಲ್ಪಿಸಿಕೊಟ್ಟಿದ್ದರು. ತಮ್ಮ ಸಾವಿರಾರು ಎಕರೆ ಭೂಮಿಯ ಜೊತೆಗೆ ಇತರರ ಭೂಮಿಯನ್ನು ಪಡೆದುಕೊಂಡು 16 ಸಾವಿರ ಎಕರೆ ಭೂಮಿಯನ್ನು ರೈತರಿಗೆ ನೀಡುವುದರ ಮೂಲಕ ಅನೇಕ ರೈತರಿಗೆ ಉದ್ಯೋಗವನ್ನು ಕಲ್ಪಿಸಿಕೊಟ್ಟಿದ್ದರು. ಅಖೀಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿ ಅವರು ಮಾಡಿದ ಕಾರ್ಯ ಅಪೂರ್ವವಾದದ್ದು. ಇಂತಹ ಮಹಾನೀಯರು ತಮ್ಮ ನಿವಾಸಕ್ಕಾಗಿ ಸೊಲ್ಲಾಪುರದಲ್ಲಿ ಇಂದ್ರ ಭವನವನ್ನು ನಿರ್ಮಿಸಿದ್ದರು. ಸೊಲ್ಲಾಪುರದಲ್ಲಿ ಅಷ್ಟು ಸುಂದರವಾದ ವಾಸ್ತುಶಿಲ್ಪವನ್ನು ಮತ್ತೆ ಯಾರಿದಂಲೂ ನಿರ್ಮಿಸಲಿಕ್ಕೆ ಸಾಧ್ಯವಾಗಲಿಲ್ಲ. ಈ ವಾಸ್ತುವಿನಲ್ಲಿ ಇಂದು ಸೊಲ್ಲಾಪುರ ಮಹಾನಗರ ಪಾಲಿಕೆ ಕಾರ್ಯ ನಿರ್ವಹಿಸುತ್ತಿದೆ. ಬ್ರಿಟಿಷರ ವಾಸ್ತುವಿನ ಮಾದರಿಯಲ್ಲಿ ನಿರ್ಮಿಸಿದ ಈ ವಾಸ್ತು ಸೊಲ್ಲಾಪುರಕ್ಕೆ ಒಂದು ಹೆಮ್ಮೆಯ ಗರಿಯನ್ನು ಮೂಡಿಸುವಂತಿದೆ. ಹೀಗೆ ವಾರದ ಮಲ್ಲಪ್ಪನವರು ಬಹು ಪ್ರತಿಭೆಯ ವ್ಯಕ್ತಿತ್ವವನ್ನು ಅಮರಾವತಿ ನಾ. ರಾ. ಬಾಮನ ಗಾವ್ಕರ್‌ ಇವರು ಮರಾಠಿಯಲ್ಲಿ ಅವರ ಚರಿತ್ರೆಯನ್ನು ಪುಣ್ಯಶ್ಲೋಕ ವಾರದ ಎಂಬ ಹೆಸರಿನಿಂದ ರಚಿಸಿದ್ದರು. ಇಂದು ಅದೇ ಗ್ರಂಥವು ಮರು ಮುದ್ರಣಗೊಂಡು ಲೋಕಾರ್ಪಣೆಗೊಳ್ಳುತ್ತಿರುವುದು ಒಂದು ಸಂತೋಷದ ಸಂಗತಿಯಾಗಿದೆ ಎಂದು ಹೇಳಿದರು.

ಕೇಂದ್ರದ ಮಾಜಿ ಗೃಹ ಸಚಿವ ಸುಶೀಲ್‌ ಕುಮಾರ್‌ ಶಿಂಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಸೊಲ್ಲಾಪುರ ವಿವಿ ಕುಲಪತಿ ಮೃಣಾಲಿನಿ ಫಡ್ನವೀಸ್‌ ಉಪಸ್ಥಿತರಿದ್ದರು. ಸೊಲ್ಲಾಪುರದ ಮೇಯರ್‌ ಶೋಭಾ ಬನಶೆಟ್ಟಿ, ರಾಜಶೇಖರ್‌ ಶಿವದಾರೆ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು. ಮರಾಠಿ ವೀರಶೈವ ಸಾಹಿತ್ಯದ ಶ್ರೇಷ್ಠ ಸಂಶೋಧಕರಾದ ಡಾ| ಶೇಷನಾರಾಯಣ ಪಸಾರಕರ ಇವರು ಈ ಗ್ರಂಥದ ಕುರಿತು ಮಾತನಾಡಿದರು.

ಟಾಪ್ ನ್ಯೂಸ್

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

1(1

Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್‌ ದೀಪಗಳಿಂದ ಶೃಂಗಾರ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.