ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 350ನೇ ಆರಾಧನ ಮಹೋತ್ಸವ
ಸಾಂತಾಕ್ರೂಜ್ ಪೇಜಾವರ ಮಠ
Team Udayavani, Aug 29, 2021, 2:35 PM IST
ಸಾಂತಾಕ್ರೂಜ್: ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ ಮತ್ತು ಶ್ರೀ ಪೇಜಾವರ ಮಠ ಮುಂಬಯಿ ವತಿಯಿಂದ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 350ನೇ ಆರಾಧನ ಮಹೋತ್ಸವವನ್ನು ವೈಭವದಿಂದ ಆಚರಿಸಲಾಯಿತು.
ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲನಿಯ ಪೇಜಾವರ ಮಠದ ಮಧ್ವ ಭವನದ ಶ್ರೀ ವಿಶ್ವೇಶ ತೀರ್ಥ ಸಭಾಗೃಹದಲ್ಲಿ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳ ಆಶೀರ್ವಾದ, ದಿವ್ಯ ಪ್ರೇರಣೆ ಹಾಗೂ ಮಾರ್ಗದರ್ಶನದಲ್ಲಿ ಮಂಗಳವಾರ ರಾಯರ ಮಧ್ಯಾರಾಧನೆ ನಡೆಸಲಾಯಿತು.
ಧಾರ್ಮಿಕ ಕಾರ್ಯಕ್ರಮವಾಗಿ ಭಜನೆ, ಅಲಂಕಾರ ಬ್ರಾಹ್ಮಣ ಭೋಜನ, ಹಸ್ತೋದಕ ನೆರವೇರಿಸಲಾಯಿತು. ಪೇಜಾವರ ಶಾಖೆಯ ಆಡಳಿತಾಧಿಕಾರಿ ಡಾ| ರಾಮದಾಸ ಉಪಾಧ್ಯಾಯ ರೆಂಜಾಳ ಅವರು ಆರಂಭದಲ್ಲಿ ಶ್ರೀಕೃಷ್ಣ ದೇವರ ಸನ್ನಿಧಿಯಲ್ಲಿ ಪೂಜೆ ನೆರವೇರಿಸಿ ಬಳಿಕ ಮಹಾ ಮಂಗಳಾರತಿ ನೆರವೇರಿಸಿ ರಾಯರ ಭಕ್ತರನ್ನು ಹರಸಿದರು.
ಇದನ್ನೂ ಓದಿ:ರಾಷ್ಟ್ರದ ಅಭಿವೃದ್ಧಿ ಚಿಂತನೆ ಪ್ರತಿ ಮನೆಯಿಂದಲೇ ಆರಂಭವಾಗಲಿ: ನರೇಶ್ ದೇವಾಡಿಗ
ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣ ವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಾಧನ ಮಹೋತ್ಸವವನ್ನು ಆಚರಿಸಲಾಯಿತು. ಶ್ರೀ ಪೇಜಾವರ ಮಠ ಮುಂಬಯಿ ಆಡಳಿತಾಧಿಕಾರಿಗಳಾದ ಪ್ರಕಾಶ್ ಆಚಾರ್ಯ ರಾಮಕುಂಜ, ಶ್ರೀ ಹರಿ ಭಟ್ ಪುತ್ತಿಗೆ ಮತ್ತು ನಿರಂಜನ್ ಗೋಗಟೆ ಸಹಿತ ಸಹ ಪುರೋಹಿತರು ಮತ್ತು ಭಕ್ತರು ರಾಯರ ಆರಾಧನೆಗೈದರು.
ಚಿತ್ರ-ವರದಿ: ರೋನ್ಸ್ ಬಂಟ್ವಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.