ದೆಹಲಿ ಕರ್ನಾಟಕ ಸಂಘದ ವತಿಯಿಂದ ರಾಣಿ ಅಬ್ಬಕ್ಕ ಉತ್ಸವ
Team Udayavani, Mar 17, 2018, 2:28 PM IST
ಮುಂಬಯಿ: ದೆಹಲಿ ಕರ್ನಾಟಕ ಸಂಘವು ದೇಶದ ರಾಜಧಾನಿಯಲ್ಲಿ ಒಂದು ವಾರಗಳ ಕಾಲ ನಿರಂತರ ಕರ್ನಾಟಕದ ರಾಣಿ ಅಬ್ಬಕ್ಕನ ಉತ್ಸವವನ್ನು ಹಲವಾರು ಕಾರ್ಯಕ್ರಮಗಳೊಂದಿಗೆ ಆಚರಿಸುತ್ತಿರುವುದು ಶ್ಲಾಘನೀಯ, ಮುಖ್ಯವಾಗಿ ದೇಶದ ಇತರ ಭಾಷಿಗರಿಗೆ ರಾಣಿ ಅಬ್ಬಕ್ಕನನ್ನು ಪರಿಚಯಿಸುತ್ತಿರುವುದು ಅಗತ್ಯವಾಗಿ ಆಗಬೇಕಾದ ಕೆಲಸವಾಗಿದೆ ಎಂದು ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ಹೇಳಿದರು.
ರಾಣಿ ಅಬ್ಬಕ್ಕ ಉತ್ಸವ ನಡೆಯುತ್ತಿರುವ ಸಂದರ್ಭದಲ್ಲಿ ದೆಹಲಿ ಕರ್ನಾಟಕ ಸಂಘಕ್ಕೆ ಭೇಟಿ ನೀಡಿ ಅಬ್ಬಕ್ಕ ಉತ್ಸವದಲ್ಲಿ ಕಾರ್ಯಕ್ರಮ ನೀಡಲು ಬಂದಿರುವ ಕಲಾವಿದರನ್ನು ಉದ್ದೇಶಿಸಿ ಮಾತನಾಡಿ, ಅಭಿನಂದಿಸಿ ಶುಭ ಹಾರೈಸಿ ಮಾತನಾಡಿದ ಇವರು, ಇತಿಹಾಸದ ಪುಟಗಳಲ್ಲಿ ಸೇರಿ ಹೋಗಿರುವ ರಾಣಿ ಅಬ್ಬಕ್ಕನ ಒಂದು ನೆನಪನ್ನು ನಾವು ಈಗ ಮಾಡುತ್ತಿದ್ದೇವೆ. ಅವರ ಶೌರ್ಯ, ಸಾಹಸ, ಪ್ರತಿಭೆ ನಮ್ಮನ್ನು ಹುರಿದುಂಬಿಸುತ್ತದೆ. ಎಲ್ಲರಿಗೂ ಕೂಡಾ ಅಬ್ಬಕ್ಕನ ಒಂದು ಸಾಹಸಮಯ ಜೀವನ ಮಾರ್ಗದರ್ಶನವಾಗಲಿ. ನಮ್ಮದೇಶ ಬಹಳ ಶಕ್ತಿಯುತವಾದ ಹಾಗೂ ಸಂಪದ್ಭರಿತವಾದ ದೇಶವಾಗಿತ್ತು. ಆದರೆ ಹೊರಗಡೆಯಿಂದ ಬಂದವರು ಸಣ್ಣ ಸಣ್ಣ ರಾಜರನ್ನೆಲ್ಲಾ ಸೇರಿಸಿ ಬೇರೆಯವರನ್ನು ಸೋಲಿಸಿ ನಮ್ಮದೇಶವನ್ನೇ ಸಂಪೂರ್ಣವಾಗಿ ಆಕ್ರಮಿಸಿದರು. ನಂತರ ನಮ್ಮ ದೇಶದ ಸಂಪತ್ತನ್ನೇ ದೋಚಿಕೊಂಡು ಹೋದರು. ನಮ್ಮ ದೇಶದ ಸಂಪತ್ತು ಎಷ್ಟಿತ್ತು ಆ ಸಮಯದಲ್ಲಿ ಎಂದು ನಾವು ವಿಜಯನಗರ ಸಾಮ್ರಾಜ್ಯದ ಒಂದು ಪುಟವನ್ನು ಓದಿದರೆ ನಮಗೆ ಅದರಲ್ಲಿ ಗೊತ್ತಾಗುತ್ತದೆ ಎಂದು ರಾಜ್ಯಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡಿಸ್ ಅವರು ನುಡಿದರು. ಈ ಸಂದರ್ಭದಲ್ಲಿ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ವಸಂತ ಶೆಟ್ಟಿ ಬೆಳ್ಳಾರೆ, ಜಂಟಿ ಕಾರ್ಯದರ್ಶಿ ಟಿ. ಪಿ. ಬೆಳ್ಳಿಯಪ್ಪ ಹಾಗೂ ಸಂಘದ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಲಾಭಿಮಾನಿಗಳು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.