ನವೋದಯ ಕನ್ನಡ ಸೇವಾ ಸಂಘ ಥಾಣೆ: 49ನೇ ವಾರ್ಷಿಕ ಮಹಾಸಭೆ


Team Udayavani, Jul 15, 2018, 5:04 PM IST

1307mum10.jpg

ಥಾಣೆ: ತುಳು-ಕನ್ನಡಿಗರ ಪ್ರತಿಷ್ಠಿತ ನವೋದಯ ಕನ್ನಡ ಸೇವಾ ಸಂಘದ 49 ನೇ ವಾರ್ಷಿಕ ಮಹಾಸಭೆಯು ಜೂ. 24 ರಂದು ನವೋದಯ ಜ್ಯೂನಿಯರ್‌ ಕಾಲೇಜಿನ ಸಭಾಗೃಹದಲ್ಲಿ ನಡೆಯಿತು.

ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ದಯಾನಂದ ಎಸ್‌. ಶೆಟ್ಟಿ ಇವರು 48 ನೇ ವಾರ್ಷಿಕ ವರದಿ ಮಂಡಿಸಿ, ಕಳೆದ ಒಂದು ವರ್ಷದಲ್ಲಿ ಸರ್ವರ ಸಹಕಾರದಿಂದ ನಡೆದ ವಿವಿಧ ಕಾರ್ಯಗಳ ವಿವರ ನೀಡಿದರು. ಅಲ್ಲದೆ ಭವಿಷ್ಯದಲ್ಲಿ ನಡೆಯಬೇಕಾದ ಕೆಲಸಗಳ ಬಗ್ಗೆಯೂ ಸಭಿಕರಿಗೆ ಮನವರಿಕೆ ಮಾಡಿದರು.

ಗೌರವ ಪ್ರಧಾನ ಕೋಶಾಧಿಕಾರಿ   ಲೆಕ್ಕಪತ್ರ ಮಂಡಿಸಿದರು. ಇದೇ ಸಂದರ್ಭದಲ್ಲಿ  2018-2019 ನೇ ಸಾಲಿಗೆ ಮೆಸರ್ಸ್‌ ಸದಾಶಿವ ಮತ್ತು ಕಂಪೆನಿಯವರನ್ನು ಲೆಕ್ಕ ಪರಿಶೋಧಕರನ್ನಾಗಿ ನೇಮಿಸಲಾಯಿತು. ಸಂಘದ ಮಾಜಿ ಅಧ್ಯಕ್ಷರುಗಳಾದ ಕೆ. ಎಸ್‌. ಬಂಗೇರ, ಕೆ. ಎಸ್‌. ರಾವ್‌, ಆರ್‌. ಎಚ್‌. ಬೈಕಂಪಾಡಿ ಹಾಗೂ ಹಿರಿಯ ಸದಸ್ಯರುಗಳಾದ ಎಸ್‌. ಎಂ. ಬಿರಾದಾರ್‌ ಅವರು ಸಂಘ ನಡೆದು ಬಂದ ದಾರಿಯ ಬಗ್ಗೆ ಹಾಗೂ ಮುಂದೆ ಯಾವ ರೀತಿಯಲ್ಲಿ ಕಾರ್ಯಕಾರಿ ಸಮಿತಿಯು ಸಂಘ ಹಾಗೂ ಶೈಕ್ಷಣಿಕ ಸಂಸ್ಥೆಯ ಏಳ್ಗೆಗಾಗಿ ದುಡಿಯಬೇಕು ಎಂಬುವುದರ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.

ಜಗದೀಶ್‌ ಬಿ. ಶೆಟ್ಟಿ ಹಾಗೂ ರವಿ ಎಸ್‌. ಹೆಗ್ಡೆ ಅವರು ಕಾರ್ಯಕಾರಿ ಸಮಿತಿಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡು, ನವೋದಯ ಕನ್ನಡ ಸೇವಾ ಸಂಘವು ಇನ್ನಿತರ ಸಂಘ-ಸಂಸ್ಥೆಗಳಿಂದ ವಿಭಿನ್ನವಾಗಿದ್ದು, ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವುದೇ ಹೆಮ್ಮೆಯ ವಿಷಯವಾಗಿದೆ ಎಂದರು. ಪ್ರೇಮನಾಥ ಕುಕ್ಯಾನ್‌ ಮತ್ತು ಯಶವಂತ ಜಿ. ಕರ್ಕೇರ ಅವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ, ಸಂಘ ಹಾಗೂ ಶೈಕ್ಷಣಿಕ ಸಂಸ್ಥೆಗಳ ಪ್ರಗತಿಯ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.

ಚುನಾವಣಾಧಿಕಾರಿಗಳಾದ ಎಸ್‌. ಎಂ. ಬಿರಾದಾರ್‌ ಮತ್ತು ಸಿ. ಎ. ಪೂಜಾರಿ ಅವರು ನೂತನವಾಗಿ ಚುನಾಯಿತಗೊಂಡ ಕಾರ್ಯಕಾರಿ ಸಮಿತಿಯನ್ನು ಅಭಿನಂದಿಸಿ, ಇಂತಹ ಶಿಸ್ತುಬದ್ಧವಾದ ಕಾರ್ಯಕಾರಿ ಸಮಿತಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ. ಈ ಸಂಸ್ಥೆಯು ಭವಿಷ್ಯದಲ್ಲೂ ಹೆಚ್ಚಿನ ಪ್ರಗತಿಯನ್ನು ಕಾಣುವಂತಾಗಲಿ. ನಮಗೂ ಅಳಿಲ ಸೇವೆ ಮಾಡಲು ಅವಕಾಶ ಸಿಗುವಂತಾಗಲಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಜಯ ಕೆ. ಶೆಟ್ಟಿ ಇವರು ಮಾತನಾಡಿ, ವಿದ್ಯಾವಂತ ಯುವಕರ ಸೇರ್ಪಡೆಯೊಂದಿಗೆ ಅನುಭವಿ ಹರಿಯರು ಜೊತೆಗೂಡಿ ಕಾರ್ಯಕಾರಿ ಸಮಿತಿಯ ಹಳೆ ಬೇರಿನೊಂದಿಗೆ ಹೊಸ ಚಿಗುರು ಸೇರಿದಂತಾಗಿದೆ. ಸಂಸ್ಥೆಯ ಬೆಳವಣಿಗೆ ತೀವ್ರಗತಿಯಲ್ಲಿ ಸಾಗುವಂತಾಗಲಿ. ಇಂದು ಮಹಿಳಾ ಸದಸ್ಯೆಯರು ಕೂಡಾ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಸಂತೋಷದ ಸಂಗತಿಯಾಗಿದೆ. ಮುಂಬರುವ ದಿನಗಳಲ್ಲಿ ಸಂಸ್ಥೆಯ ಎಲ್ಲಾ ಕಾರ್ಯಕಲಾಪಗಳಿಗೂ ಇದೇ ರೀತಿಯ ಸಹಕಾರ ಪ್ರೋತ್ಸಾಹವನ್ನು ಎಲ್ಲರು ನೀಡಬೇಕು. ಸಂಸ್ಥೆಯು ಸುವರ್ಣ ಮಹೋತ್ಸವ ಸಂಭ್ರಮದಲ್ಲಿದ್ದು, ಈ ವರ್ಷದಲ್ಲಿ ಎಲ್ಲಾ ಕಾರ್ಯಯೋಜನೆಗಳಿಗೆ ಎಲ್ಲರು ಒಮ್ಮತ, ಒಗ್ಗಟ್ಟಿನಿಂದ ಶ್ರಮಿಸಬೇಕು. ಸುವರ್ಣ ಮಹೋತ್ಸವವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿ ಸೋಣ. ಸಂಘದ ಚರಿತ್ರೆಯಲ್ಲಿ ಇದನ್ನು ಅವಿಸ್ಮರಣೀಯ ಗೊಳಿಸಬೇಕು ಎಂದು ಸಂಘದ ಅಭಿವೃದ್ಧಿಗೆ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿ, ಸದಸ್ಯ ಬಾಂಧವರು ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ನಾವೆಲ್ಲರೂ ಒಂದೇ. ನಮ್ಮೆಲ್ಲರ ಉದ್ದೇಶ ಈ ಸಂಸ್ಥೆಯ ಬೆಳವಣಿಗೆ ಎಂಬ ಭಾವನೆಯಿಂದ ಸಹಕರಿಸಬೇಕು. ನೂತನ ಕಾರ್ಯಕಾರಿ ಸಮಿತಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ. ಸಂಘ ಹಾಗೂ ಶೈಕ್ಷಣಿಕ ಸಂಸ್ಥೆಗಳ ಕೀರ್ತಿಯನ್ನು ಮತ್ತಷ್ಟು ಏರಿಸುವಲ್ಲಿ ನಾವೆಲ್ಲರು ಕಾರ್ಯಪ್ರವೃತ್ತರಾಗೋಣ ಎಂದು ನುಡಿದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ 2018-2021 ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು.

ಟಾಪ್ ನ್ಯೂಸ್

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.