ಕ್ಯಾನ್ಸರ್‌ಪೀಡಿತ ಬಾಲಕನ ಸಹಾಯಕ್ಕೆ ಮನವಿ
Team Udayavani, Aug 5, 2019, 12:48 PM IST
ನವಿಮುಂಬಯಿ, ಆ. 4: ಕ್ಯಾನ್ಸರ್‌ನಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಬಾಲಕನ ಚಿಕಿತ್ಸೆಗೆ ನೆರವು ನೀಡುವಂತೆ ಸಹೃದಯಿ ದಾನಿಗಳಲ್ಲಿ ವಿನಂತಿಸಲಾಗಿದೆ. ವಾಶಿಯ ನಿವಾಸಿಗಳಾದ ಕುಮಾರ ಕೆ. ಶೆಟ್ಟಿ ಮತ್ತು ಸುರೇಖಾ ಕೆ. ಶೆಟ್ಟಿ ದಂಪತಿಯ ನಾಲ್ಕು ವರ್ಷದ ಪುತ್ರ ಕೃತಿಕ್ ಕೆ. ಶೆಟ್ಟಿ ಅ್ಯಡ್ರಿನಲ್ ಗ್ರಂಥಿ (Neuroblastoma)ಯ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾನೆ.
ಕುಮಾರ ಕೆ. ಶೆಟ್ಟಿ ಅವರು ಕಳೆದ ಕೆಲವು ವರ್ಷಗಳಿಂದ ಮುಂಬಯಿ ಮಹಾನಗರದಲ್ಲಿ ಅನಾರೋಗ್ಯ ಪೀಡಿತರಾದ ಪತ್ನಿಯೊಂದಿಗೆ ಕಡು ಬಡತನದಿಂದ ಜೀವನ ನಡೆಸುತ್ತಿದ್ದಾರೆ. ಈ ಮಧ್ಯೆ ಪುತ್ರನಿಗೆ ಸರಿಯಾದ ಚಿಕಿತ್ಸೆ ನೀಡಲು ದಂಪತಿಯು ಅಸಹಾಕತೆಯಿಂದ ಕಣ್ಣೀರು ಸುರಿಸುತ್ತಿದ್ದು, ಪಾನ್‌ಶಾಪ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿ ರುವಾಗಲೆ ತನ್ನ ಮಗನ ಮಾರಕ ಕಾಯಿಲೆಯಿಂದ ಮಾನಸಿಕ ಅಘಾತಕ್ಕೊಳಗಾದ ದಂಪತಿ ಇದ್ದ ಅಲ್ಪ-ಸ್ವಲ್ಪ ಹಣ ಇಷ್ಟರವರೆಗಿನ ಚಿಕಿತ್ಸೆಗೆ ಖರ್ಚು ಮಾಡಿದ್ದು, ಮುಂದಿನ ಚಿಕಿತ್ಸೆಗ ಹಣ ಇಲ್ಲದ ಸಹೃದಯಿ ದಾನಿಗಳ ಮೊರೆ ಹೋಗಿದ್ದಾರೆ.
ಮಗುವಿಗೆ ತೊಂದರೆ ಕಾಣಿಸಿಕೊಂಡ ಆರಂಭದಲ್ಲಿ ಪ್ರಾಥಮಿಕ ಚಿಕಿತ್ಸೆಗಾಗಿ ವಾಶಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಯಾವುದೇ ರೀತಿಯ ಚಿಕಿತ್ಸೆ ಫಲಕಾರಿಯಾಗದ ಕಾರಣ ಅಲ್ಲಿನ ವೈದ್ಯರು ಬೇರೆ ಆಸ್ಪತ್ರೆಗೆ ದಾಖಲಿಸಲು ಸಲಹೆ ನೀಡಿದರು. ಅಲ್ಲಿನ ವೈದ್ಯರು ಮಗುವನ್ನು ಪರೀಕ್ಷಿಸಿ ಕ್ಯಾನ್ಸರ್ ಕಾಯಿಲೆ ಎಂದು ದೃಢಪಡಿಸಿದ್ದು, ಕುಮಾರ ಕೆ. ಶೆಟ್ಟಿ ಅವರ ಪತ್ನಿಯು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಅಲ್ಪ ಸ್ವಲ್ಪ ಆದಾಯ ಇದ್ದ ಕೆಲಸವನ್ನು ಬಿಟ್ಟು ಮಗನ ಆರೈಕೆಗಾಗಿ ಮನೆಯಲ್ಲೇ ಇರುವಂತಹ ಪರಿಸ್ಥಿತಿ ಎದುರಾಗಿದೆ.
ಸಹಕರಿಸಲಿಚ್ಛಿಸುವ ತುಳು-ಕನ್ನಡಿಗರು, ಸಹೃದಯಿ ದಾನಿಗಳು Kumar k. Shetty, Punjab national bank. Ac no: 436800 0100008875, IFSC code:- PUNBO 350200, Branch: Navi mumbai vashi sector 17, Mumbai. ಇಲ್ಲಿಗೆ ಕಳುಹಿಸಿಕೊಡಬಹುದು. ಹೆಚ್ಚಿನ ಮಾಹಿತಿಗಾಗಿ 7039456671 ನಂಬರನ್ನು ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.