ಪುಣೆ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ರೋಹನ್ ಪಿ.ಶೆಟ್ಟಿ ಆಯ್ಕೆ
Team Udayavani, Jan 10, 2019, 10:54 AM IST
ಪುಣೆ: ಪುಣೆ ತುಳು ಕೂಟದ ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾಯವಾದಿ ರೋಹನ್ ಪುರುಷೋತ್ತಮ್ ಶೆಟ್ಟಿ ಅವರು ಪುಣೆ ನಗರ ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ನೇಮಕಗೊಂಡಿರುತ್ತಾರೆ.
ಪುಣೆ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ವಿಶಾಲ್ ಹರಿ ಮಲ್ಕೆ ಕಾಂಗ್ರೆಸ್ ಭವನದಲ್ಲಿ ರೋಹನ್ ಪಿ. ಶೆಟ್ಟಿಯವರಿಗೆ ನಿಯುಕ್ತಿ ಪತ್ರ ನೀಡಿ ಅಭಿನಂದಿಸಿ ಶುಭಹಾರೈಸಿದರು.
ರೋಹನ್ ಪಿ. ಶೆಟ್ಟಿಯವರು ಪುಣೆಯಲ್ಲಿ ಯುವ ಸಂಘಟಕನಾಗಿ ಗುರುತಿಸಿಕೊಂಡು ರಾಜಕೀಯ, ಸಾಮಾಜಿಕ ಜಾಗೃತಿ, ಸಮಾಜಸೇವೆ, ಶೈಕ್ಷಣಿಕ ರಂಗಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡು ಯುವ ಸಮೂಹ ವನ್ನು ದೊಡ್ಡ ಮಟ್ಟದಲ್ಲಿ ಸಂಘಟಿಸಿದ ಹೆಗ್ಗಳಿಕೆಯನ್ನು ಹೊಂದಿದ್ದಾರೆ. ಪುಣೆಯ ಎಸ್‌ಪಿ ಕಾಲೇಜಿನಿಂದ ರಾಜಕೀಯ ಶಾಸ್ತ್ರದಲ್ಲಿ ಪದವಿ ಪೂರೈಸಿಕೊಂಡು ಫರ್ಗುಸನ್ ಕಾನೂನು ವಿದ್ಯಾಲಯದಲ್ಲಿ ಎಲ್‌ಎಲ್‌ಬಿ ಪದವಿ ಪಡೆದುಕೊಂಡಿರುತ್ತಾರೆ.
ಇವರು 2011-12 ರಲ್ಲಿ ಡಿಇಎಸ್ ಲಾ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಯಾಗಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ¨ªಾರೆ. ಡಿಇಎಸ್ ಲಾ ಕಾಲೇಜಿನ ಅಲುಮ್ನಿ ಅಸೋಸಿಯೇಶನ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ¨ªಾರೆ. ಯೂಥ್ ದ ಪರ್ವ ಟು ಚೇಂಜ್ ಎನ್ನುವ ಯುವ ಸಂಘಟನೆಯ ಸ್ಥಾಪಕಾಧ್ಯಕ್ಷರಾಗಿ, ಲೆಟ್ಸ್ ಇನ್ಸ$³ರ್ಯ ಎನ್ನುವ ಸರಕಾರೇತರ ಸಂಸ್ಥೆಯನ್ನು ಸ್ಥಾಪಿಸಿ ಮಕ್ಕಳ ಅಭಿವೃದ್ಧಿಗೆ ಶ್ರಮಿಸಿ ¨ªಾರೆ. ಹಲವಾರು ರಾಜಕೀಯ ಚಟುವಟಿಕೆಗಳು, ಮುಷ್ಕರಗಳು, ಆಂದೋಲನಗಳನ್ನು ಸಮಾಜದ ಅಭಿವೃದ್ಧಿಯ ಚಿಂತನೆಯಡಿಯಲ್ಲಿ ಯಶಸ್ವಿಯಾಗಿ ಸಂಘಟಿಸಿದ ಶ್ರೇಯಸ್ಸು ಇವರಿಗೆ ಸಲ್ಲುತ್ತದೆ. ಕೊಳೆಗೇರಿ ಪ್ರದೇಶದಲ್ಲಿ ವಾಸಿಸುತ್ತಿ ರುವ ಬಡ ಮಕ್ಕಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಿ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಕಾರ್ಯ, ಕಳೆದ 13 ವರ್ಷಗಳಿಂದ ಪಂಢರಾಪುರಕ್ಕೆ ತೆರಳುವ ವಾರ್ಕರಿಗಳಿಗೆ ಸೇವಾ ಕಾರ್ಯಗಳನ್ನು ಮಾಡುವುದು, ವಿವಿಧ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸುವುದು, ವಿವಿಧ ಸಂಸ್ಥೆಗಳಲ್ಲಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಮಾಜಿಕ ವಿಷಯಗಳ ಬಗ್ಗೆ ಚರ್ಚಾ ಕಮ್ಮಟದಲ್ಲಿ ಭಾಗವಹಿಸಿ¨ªಾರೆ.
2017 ರಿಂದ ಪುಣೆ ತುಳುಕೂಟದ ಯುವ ವಿಭಾಗದ ಕಾರ್ಯಾಧ್ಯಕ್ಷರಾಗಿ ಆಯ್ಕೆಗೊಂಡು ಪುಣೆಯಲ್ಲಿರುವ ಯುವ ತುಳು-ಕನ್ನಡಿಗರನ್ನು ಸಂಘಟಿಸಿ ದ್ದರಲ್ಲದೆ ಹಲವಾರು ಕಾರ್ಯ ಕ್ರಮಗಳನ್ನು ಮಾಡುವ ಮೂಲಕ ಕ್ರಿಯಾಶೀಲ ವ್ಯಕ್ತಿತ್ವದೊಂದಿಗೆ ಗುರುತಿಸಿಕೊಂಡಿದ್ದಾರೆ. 2017 ರ ಪುಣೆ ಮಹಾನಗರಪಾಲಿಕೆ ಚುನಾವಣೆಯಲ್ಲಿಯೂ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ¨ªಾರೆ. ಇವರು ಪುಣೆಯ ನಿವೃತ್ತ ಬ್ಯಾಂಕ್ ಉದ್ಯೋಗಿಯಾಗಿರುವ ಪುರುಷೋತ್ತಮ ಶೆಟ್ಟಿ ಹಾಗೂ ಸಮಾಜಸೇವಕಿ ಪ್ರೇಮಾ ಶೆಟ್ಟಿಯವರ ಪುತ್ರ.
ಚಿತ್ರ-ವರದಿ: ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ಹೊಸ ಸೇರ್ಪಡೆ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
Mangaluru: ಜ.11, 12ರಂದು ಮಂಗಳೂರು ಲಿಟ್ ಫೆಸ್ಟ್… ಕಲೆ, ಸಾಹಿತ್ಯ, ಜಾನಪದಗಳ ಸಂಗಮ
Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.