ಅಧ್ಯಕರಾಗಿ ಸಾಹಿತಿ ಡಾ| ಭರತ್‌ ಕುಮಾರ್‌ ಪೊಲಿಪು ಆಯ್ಕೆ

ಕಾಪು ತಾಲೂಕು ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನ

Team Udayavani, Jan 13, 2021, 7:14 PM IST

Bharat Kumar Polipu selection

ಮುಂಬಯಿ, ಜ. 12: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌  ಕಾಪು ತಾಲೂಕು ಘಟಕದ ಆಶ್ರಯದಲ್ಲಿ ಜರಗ ಲಿರುವ ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಮುಂಬಯಿ ಸಾಹಿತಿ, ರಂಗಕರ್ಮಿ ಡಾ| ಭರತ್‌ಕುಮಾರ್‌ ಪೊಲಿಪು ಆಯ್ಕೆಯಾಗಿದ್ದಾರೆ.

ಜ. 9ರಂದು ತಾಲೂಕು ಘಟಕದ ಅಧ್ಯಕ್ಷ ಬಿ. ಪುಂಡಲೀಕ ಮರಾಠೆ ಅವರ ಅಧ್ಯಕ್ಷತೆ ಯಲ್ಲಿ ಪಡುಬಿದ್ರೆಯ ಗಣಪತಿ ಶಾಲೆಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಕಾಪು ತಾಲೂಕು ಘಟಕದ ಆಶ್ರಯದಲ್ಲಿ ಜರಗಲಿರುವ ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನದ ಅಧ್ಯಕ್ಷರನ್ನಾಗಿ ಡಾ| ಭರತ್‌ ಕುಮಾರ್‌ ಪೊಲಿಪು ಅವರ ಆಯ್ಕೆಯನ್ನು ಘೋಷಿಸಲಾಯಿತು. ಕಾಪು ತಾಲೂಕು ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನವು ಜ. 29ರಂದು ಪಡುಬಿದ್ರೆಯ ಶ್ರೀ ಮಹಾಲಿಂಗೇಶ್ವರ ಮತ್ತು ಮಹಾಗಣಪತಿ ದೇವಸ್ಥಾನದ ಪ್ರಾಂಗಣದಲ್ಲಿ ನಡೆಯಲಿದೆ.

ಡಾ| ಭರತ್‌ ಕುಮಾರ್‌ ಪೊಲಿಪು ನಗರದಲ್ಲಿ ಪತ್ರಕರ್ತರಾಗಿ, ರಂಗಕರ್ಮಿಯಾಗಿ, ಲೇಖಕರಾಗಿ, ಸಂಘಟಕರಾಗಿ, ಸಾಹಿತಿಯಾಗಿ ಹೆಸರು ಮಾಡಿದವರು ಡಾ| ಭರತ್‌ ಕುಮಾರ್‌ ಪೊಲಿಪು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪೊಲಿಪುವಿನವರಾದ ಭರತ್‌ ಕುಮಾರ್‌ ಅವರು ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡಿಗರಿಗೆ ಚಿರಪರಿಚಿತರು. ಪೂರ್ಣಪ್ರಜ್ಞ ಕಾಲೇಜಿನಲ್ಲಿ ಪದವಿಯನ್ನು ಪೂರೈಸಿ ಮುಂಬಯಿ ವಿಶ್ವವಿದ್ಯಾನಿಲಯ ಕನ್ನಡದಲ್ಲಿ ಎಂ.ಎ. ಪದವಿ ಯನ್ನು ಪಡೆದಿರುವ ಅವರು, “ಮುಂಬಯಿ ರಂಗಭೂಮಿ’ ಎಂಬ ವಿಷಯದ ಮೇಲೆ ಅವರು ಮಂಡಿಸಿದ ಮಹಾಪ್ರಬಂಧಕ್ಕೆ ಮುಂಬಯಿ ವಿವಿ ಡಾಕ್ಟರೇಟ್‌ ಪದವಿಯನ್ನು ನೀಡಿ ಗೌರವಿಸಿದೆ.

ಕಾಲೇಜು ದಿನಗಳಲ್ಲಿಯೇ ನಾಟಕದ ಆಸಕ್ತಿ ಬೆಳೆಸಿಕೊಂಡಿದ್ದ ಅವರು ವರ್ಷದ “ಅತ್ಯುತ್ತಮ ಪ್ರತಿಭಾವಂತ ಕಲಾವಿದ’ ಎಂಬ ಗೌರವಕ್ಕೂ ಪಾತ್ರರಾಗಿದ್ದರು. ಖ್ಯಾತ ರಂಗನಿರ್ದೇಶಕರಾದ ಬಿ. ಆರ್‌. ನಾಗೇಶ್‌, ಉದ್ಯಾವರ ಮಾಧವಾಚಾರ್ಯ, ಪ್ರಸನ್ನ, ಶ್ರೀನಿವಾಸ ಪ್ರಭು ಅವರ ಗರಡಿಯಲ್ಲಿ ಪಳಗಿದ ಅವರು ಸೃಜನಶೀಲ ನಿರ್ದೇಶಕರಾಗಿ ಹೆಸರು ಮಾಡಿದ್ದಾರೆ.

ಇದನ್ನೂ ಓದಿ:ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ :CM ಹೇಳಿಕೆಗೆ ಸಿದ್ದು ತಿರುಗೇಟು

ಅವರು ರಚಿಸಿದ ತುಳು ನಾಟಕ “ಅರುಂಧತಿಗೆ’ ದಿ| ರತ್ನಮ್ಮ ಹೆಗ್ಗಡೆ ಪ್ರಶಸ್ತಿಯೂ ಲಭಿಸಿದೆ. ಮುಂಬಯಿ ರಂಗಭೂಮಿಯ ಕುರಿತು ಅವರ ಹಲವಾರು ವಿಮಶಾìತ್ಮಕ ಲೇಖನಗಳು, ಸಂಶೋಧನ ಲೇಖನಗಳು, ಅಂಕಣ ಬರಹಗಳು ಹಲವಾರು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಕಳೆದ ಮೂರು ದಶಕಗಳಿಂದ ಮುಂಬಯಿಯಲ್ಲಿ ಕ್ರಿಯಾಶೀಲರಾಗಿರುವ ಅವರು ಈಗಾಗಲೇ “ರಾವಿ ನದಿ ದಂಡೆಯಲ್ಲಿ’, “ಆಷಾಢದ ಒಂದು ದಿನ’, “ನೀ ಮಾಯೆಯೋಳಗೂ’, “ಪೊಲೀಸರಿದ್ದಾರೆ ಎಚ್ಚರಿಕೆ’, “ಗುಮ್ಮನೆಲ್ಲಿಹನೆ ತೋರಮ್ಮ’, “ಬದುಕ ಮನ್ನಿಸು ಪ್ರಭುವೇ’, “ಸಾಯೋ ಆಟ’, “ಯಾವ ನದಿ ಯಾವ ಪಾತ್ರ’, “ಗಿಡಗಳ ಜೊತೆ’, “ಮಾತ ನಾಡುವ ಹುಡುಗ’, ಆಷಾಢದ ಒಂದು ದಿನ, ಕೋಮಲ ಗಾಂಧಾರ, ಶಾಕುಂತಲಾ, ಇನ್ನೊಬ್ಬ ದ್ರೋಣಾಚಾರ್ಯ, ಅಂಬೆ ಮೊದಲಾದ ನಾಟಕಗಳನ್ನು ನಿರ್ದೇಶಿಸಿ ಹೆಸರು ಮಾಡಿದ್ದಾರೆ.

ತುಳುಕೂಟ ಉಡುಪಿ ಆಯೋಜಿಸಿದ ದಿ| ಕೆಮೂ¤ರು ಸ್ಮಾರಕ ರಾಜ್ಯಮಟ್ಟದ ನಾಟಕ ಸ್ಪರ್ಧೆಯಲ್ಲಿ ಇವರ ನೇತೃತ್ವದ ಕರ್ನಾಟಕ ಸಂಘ ಮುಂಬಯಿ ಇದರ ಕಲಾಭಾರತಿ ತಂಡವು ಸತತವಾಗಿ ಆರು ಬಾರಿ ಭಾಗವಹಿಸಿ ಮೂರು ಬಾರಿ ಪ್ರಥಮ, ಎರಡು ಬಾರಿ ದ್ವಿತೀಯ ಬಹುಮಾನ ಗಳಿಸಿದೆ. ಇತ್ತೀಚೆಗೆ ಕರ್ನಾಟಕ ನಾಟಕ ಅಕಾಡೆಮಿಯ ಫೆಲೋಶಿಪ್‌ ಇವರಿಗೆ ಲಭಿಸಿದ್ದು, ಅದಕ್ಕಾಗಿ ಕನ್ನಡ, ಹಿಂದಿ, ಮರಾಠಿ ರಂಗಭೂಮಿಯ ಇತ್ತೀಚೆಗಿನ ಬೆಳವಣಿಗೆಯ ಬಗ್ಗೆ ಪ್ರಬಂಧ ರಚಿಸಿ ಅಕಾಡೆಮಿಗೆ ಸಲ್ಲಿಸಿರುವುದು ಇವರ ಪಾಂಡಿತ್ಯಕ್ಕೆ ಸಂದ ಗೌರವವಾಗಿದೆ.

ಅವರು ನಿರ್ದೇಶಿಸಿದ ನಾಟಕಗಳಿಗೆ ರಾಜ್ಯ, ರಾಷ್ಟ್ರ ಮಟ್ಟದ ಪ್ರಶಸ್ತಿಗಳೂ ಲಭಿಸಿವೆ. ಅವರ “ರಾವಿ ನದಿ ದಂಡೆಯಲ್ಲಿ’ ನಾಟಕವು ದಿಲ್ಲಿಯಲ್ಲಿ ರಂಗ ಗಂಗೊತ್ರಿ ಆಯೋಜಿಸಿದ ನಾಟಕ ಸ್ಪರ್ಧೆ ಯಲ್ಲಿ ಅತ್ಯುತ್ತಮ ಪ್ರಯೋಗಾತ್ಮಕ ನಾಟಕ ವೆಂಬ ಪ್ರಶಸ್ತಿಯನ್ನು ಪಡೆದ್ದಾರೆ.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.