ಪವಾರ್-ಶಾ ಭೇಟಿಯಲ್ಲಿ ತಪಿಲ್ಪ : ರಾವುತ್
Team Udayavani, Mar 30, 2021, 11:06 AM IST
ಮುಂಬಯಿ: ಅಹಮದಾಬಾದ್‌ನಲ್ಲಿ ಅಥವಾ ಎಲ್ಲಿಯೂ ಶರದ್ ಪವಾರ್ ಮತ್ತು ಅಮಿತ್ ಶಾ ನಡುವೆ ರಹಸ್ಯ ಸಭೆ ನಡೆದಿಲ್ಲ. ಅವರ ನಡುವಿನ ಭೇಟಿಯಲ್ಲಿ ಯಾವುದೇ ತಪ್ಪಿಲ್ಲ ಎಂದು ಸಂಜಯ್ ರಾವುತ್ ಹೇಳಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅಹಮ ದಾಬಾದ್‌ನಲ್ಲಿಯೂ ಸಭೆಗಳನ್ನು ನಡೆಸು ತ್ತಾರೆ. ಶರದ್ ಪವಾರ್ ಪ್ರಮುಖ ನಾಯಕ ಮತ್ತು ಸಂಸದ. ಕೆಲಸಕ್ಕಾಗಿ ಭೇಟಿಯಾಗುವುದರಲ್ಲಿ ಯಾವುದೇ ತಪ್ಪಿಲ್ಲ. ಮಹಾವಿಕಾಸ್ ಆಘಾಡಿ ಸರಕಾರಕ್ಕೆ ಯಾವುದೇ ಅಪಾಯವಿಲ್ಲ. ಪೂರ್ಣ ಬಲದಿಂದ ಕೆಲಸ ಮಾಡುತ್ತಿದೆ ಎಂದು ರಾವುತ್ ಹೇಳಿದ್ದಾರೆ.
ಕಾಂಗ್ರೆಸ್ ಪ್ರಶ್ನೆ :
ದೇಶದ ಗೃಹ ಸಚಿವರು ದೊಡ್ಡ ನಾಯಕರೊಂದಿಗೆ ಸಭೆ ನಡೆಸಿದರೆ, ಅವರು ನಾಗರಿಕರಿಗೆ ತಿಳಿಸಬೇಕು. ಈ ಬಗ್ಗೆ ತಿಳಿಯಲು ನಾಗರಿಕರಿಗೆ ಹಕ್ಕಿದೆ. ಉಭಯ ನಾಯಕರ ನಡುವೆ ಯಾವ ವಿಷಯದ ಬಗ್ಗೆ ಚರ್ಚೆಗಳು ನಡೆದವು ಎಂಬುದನ್ನು ದೇಶ ತಿಳಿದುಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಸಂದೀಪ್ ದೀಕ್ಷಿತ್ ಹೇಳಿದ್ದಾರೆ.
ಬಿಜೆಪಿ ಟೀಕಿಸಿದ ಎನ್‌ಸಿಪಿ :
ಶರದ್ ಪವಾರ್ ಮತ್ತು ಪ್ರಫುಲ್ ಪಟೇಲ್ ಅವರು ಅಮಿತ್ ಶಾ ಅವರನ್ನು ಭೇಟಿಯಾದರು ಎಂದು ಗುಜರಾತ್ ಪತ್ರಿಕೆಯೊಂದು ವರದಿ ಮಾಡಿದೆ. ಕಳೆದ ಎರಡು ದಿನಗಳಿಂದ ಅಂತಹ ಯಾವುದೇ ಸಭೆ ನಡೆದಿಲ್ಲ ಎಂದು ಎನ್‌ಸಿಪಿ ನಾಯಕ ನವಾಬ್ ಮಲಿಕ್ ಹೇಳಿದ್ದಾರೆ.
ಬಿಜೆಪಿಯನ್ನು ಟೀಕಿಸಿದ ಅವರು, ಸಭೆ ಬಗ್ಗೆ ಬಿಜೆಪಿ ವದಂತಿಗಳನ್ನು ಹಬ್ಬಿಸುತ್ತಿದೆ. ಶರದ್ ಪವಾರ್ ಮತ್ತು ಅಮಿತ್ ಶಾ ನಡುವೆ ಯಾವುದೇ ಸಭೆ ನಡೆದಿಲ್ಲ. ಶರದ್ ಪವಾರ್ ಮತ್ತು ಪ್ರಫುಲ್ ಪಟೇಲ್ ಅವರು ಜೈಪುರದಿಂದ ನೇರವಾಗಿ ಮುಂಬಯಿಗೆ ಮರಳಿದ್ದರು ಎಂದಿದ್ದಾರೆ.
ಹೈಕಮಾಂಡ್ ನಿರ್ಧಾರ ಅಂತಿಮ: ಪಾಟೀಲ್ :
ಎನ್‌ಸಿಪಿ ಜತೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಪ್ರತಿಕ್ರಿಯಿಸಿದ್ದು, ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ ತೆಗೆದುಕೊಳ್ಳುವ ನಿರ್ಧಾರ ಅಂತಿಮ ಎಂದು ಹೇಳಿದ್ದಾರೆ. ನನಗೆ ಈ ವರೆಗೆ ಯಾವುದೇ ಸೂಚನೆ ಬಂದಿಲ್ಲ. ತಡರಾತ್ರಿಯಲ್ಲಿ ಏಕೆ ಭೇಟಿಯಾದರೆಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ.
ಸಂಜಯ್ ರಾವುತ್ ಅವರು ಸರಕಾರ ಸ್ಥಿರವಾಗಿರುತ್ತದೆ ಎಂದು ಹೇಳುವುದಾದರೆ ಮಹಾ ಅಘಾಡಿಯಲ್ಲಿ ಏನೋ ತಪ್ಪಾಗಿದೆ ಎಂದು ಪಾಟೀಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.