ಸಾಂತಾಕ್ರೂಜ್ ಬಿಲ್ಲವ ಭವನದಲ್ಲಿ 69ನೇ ಗಣರಾಜ್ಯೋತ್ಸವ
Team Udayavani, Jan 31, 2018, 1:13 PM IST
ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಮುಂಬಯಿ ವತಿಯಿಂದ 69 ನೇ ಗಣರಾಜ್ಯೋತ್ಸವ ಆಚರಣೆಯು ಜ. 26 ರಂದು ಸಾಂತಾಕ್ರೂಜ್ ಪೂರ್ವದ ಬಿಲ್ಲವ ಭವನದಲ್ಲಿ ಅದ್ದೂರಿಯಾಗಿ ಜರಗಿತು.
ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಧ್ವಜಾರೋಹಣ ಮತ್ತು ಸಭಾ ಕಾರ್ಯಕ್ರಮ ನೆರವೇರಿತು.
ಗುರುನಾರಾಯಣ ರಾತ್ರಿಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥನೆಗೈದರು. ಅಸೋಸಿಯೇಶನ್‌ನ ಉಪಾಧ್ಯಕ್ಷ ಹಾಗೂ ಸೇವಾ ದಳದ ಕಾರ್ಯಾಧ್ಯಕ್ಷ ಶಂಕರ್ ಡಿ. ಪೂಜಾರಿ ಅವರು ಸ್ವಾಗತಿಸಿದರು. ಅಸೋಸಿಯೇಶನ್‌ನ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್, ಅಸೋಸಿಯೇಶನ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ನೇತಾರ ಎಲ್. ವಿ. ಅಮೀನ್, ಹಿರಿಯರಾದ ಅಸೋಸಿಯೇಶನ್‌ನ ಮಾಜಿ ಪ್ರಧಾನ ಕೋಶಾಧಿಕಾರಿ ಎನ್. ಎಂ. ಸನಿಲ್, ಅಸೋಸಿಯೇಶನ್‌ನ ಉಪಾಧ್ಯಕ್ಷರುಗಳಾದ ಡಾ| ಯು. ಧನಂಜಯ ಕುಮಾರ್, ಶಂಕರ್ ಡಿ. ಪೂಜಾರಿ ಹಾಗೂ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಳಾ ಕೆ. ಕೋಟ್ಯಾನ್ ಅವರು ಸಂದಭೋìಚಿತವಾಗಿ ಮಾತನಾಡಿ ಶುಭಹಾರೈಸಿದರು.
ಅಸೋಸಿಯೇಶನ್‌ನ ಜತೆ ಕಾರ್ಯದರ್ಶಿ ಹರೀಶ್ ಜಿ. ಸಾಲ್ಯಾನ್ ಕಾರ್ಯಕ್ರಮ ನಿರ್ವಹಿಸಿದರು. ಜಿಒಸಿ ಗಣೇಶ್ ಪೂಜಾರಿ ವಂದಿಸಿದರು. ಅಸೋಸಿಯೇಶನ್‌ನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾವಿಭಾಗ, ಯುವ ವಿಭಾಗ, ವಿವಿಧ ಸ್ಥಳೀಯ ಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿವಿಧ ಉಪವಿಭಾಗಗಳ ಪದಾಧಿಕಾರಿಗಳು, ಗುರುನಾರಾಯಣ ರಾತ್ರಿಶಾಲೆಯ ವಿದ್ಯಾರ್ಥಿಗಳು, ಶಿಕ್ಷಕವೃಂದ, ಶಿಕ್ಷಕೇತರ ಸಿಬಂದಿಗಳು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.