ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಶಕ್ತಿ ಕಾಯ್ದೆ
Team Udayavani, Dec 13, 2020, 7:59 PM IST
ಮುಂಬಯಿ, ಡಿ. 12: ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯಲು ರಾಜ್ಯ ಸರಕಾರ ಶಕ್ತಿ ಕಾಯ್ದೆಯನ್ನು ಜಾರಿಗೆ ತರುವ ಸಿದ್ಧತೆ ಮಾಡಿಕೊಂಡಿದ್ದು, ಈ ಕಾಯ್ದೆಯ ಪ್ರಸ್ತಾವನೆಯನ್ನು ವಿಧಾನಸಭೆಯಲ್ಲಿ ಅನುಮೋದಿಸಿದ ಬಳಿಕ ಕೇಂದ್ರ ಸರಕಾರಕ್ಕೆ ಕಳುಹಿಸಲಾಗುವುದು ಎಂದು ಗೃಹ ಸಚಿವ ಅನಿಲ್ ದೇಶ್ಮುಖ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸಾಮಜಿಕ ಮಾಧ್ಯಮಗಳಲ್ಲಿ ಮಹಿಳೆಯರ ಫೋಟೋಗಳನ್ನು ತಪ್ಪಾಗಿ ಪೋಸ್ಟ್ ಮಾಡುವ ಮೂಲಕ ಅವರನ್ನು ಅವಮಾನಿಸಲು ಪ್ರಯತ್ನಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಮತ್ತು ಅಂತಹ ಅಪರಾಧಿಗಳಿಗೆ ಶಕ್ತಿ ಕಾಯ್ದೆಯಡಿ ಎರಡು ವರ್ಷ ಶಿಕ್ಷೆ ವಿಧಿಸಲಾಗುತ್ತದೆ. ಮಹಿಳೆಯು ಕೂಡ ಸುಳ್ಳು ದೂರು ನೀಡಿದರೆ, ಆಕೆಗೂ ಒಂದು ವರ್ಷ ಶಿಕ್ಷೆ ವಿಧಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಉದ್ದೇಶಿತ ಶಕ್ತಿ ಕಾಯ್ದೆಯ ಪ್ರಕಾರ, ಮಹಾರಾಷ್ಟ್ರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ 21 ದಿನಗಳಲ್ಲಿ ಚಾರ್ಜ್‌ಶೀಟ್ ಸಲ್ಲಿಸಿ ಆರೋಪಿಗಳಿಗೆ ಶಿಕ್ಷೆಯ ವರೆಗೆ ಕಾಲಮಿತಿ ನೀಡಲಾಗುವುದು. ಮಹಿಳೆಯರ ಮೇಲೆ ಆ್ಯಸಿಡ್ ದಾಳಿ ಮತ್ತು ಅತ್ಯಾಚಾರದಂತಹ ಅಪರಾಧಗಳಿಗೆ ಜಾಮೀನು ರದ್ದುಗೊಳಿಲಾಗುವುದು. ಮಹಿಳೆಯರಿಗೆ ಇ-ಮೇಲ್‌ಗಳು, ಎಲೆಕ್ಟ್ರಾನಿಕ್ ಮಾಧ್ಯಮಗಳು ಅಥವಾ ಸಂದೇಶಗಳ ಮೂಲಕ ಕಿರುಕುಳ ನೀಡಿದರೆ ಮತ್ತು ತಪ್ಪು ರೀತಿಯಲ್ಲಿ ಪ್ರತಿಕ್ರಿಯಿಸಿದರೆ ಅವರಿಗೆ ಕಠಿನ ಶಿಕ್ಷೆಯಾಗುತ್ತದೆ. ಇದರಲ್ಲಿ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ.
ಸಾಮೂಹಿಕ ಅತ್ಯಾಚಾರ ಅಥವಾ ಕ್ರೂರ ರೂಪದ ಪ್ರಕರಣ ನಡೆಸಿದರೆ ಅಂತಹ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ, ಅತ್ಯಾಚಾರ ಪ್ರಕರಣಗಳನ್ನು ಜೀವಾವಧಿ ಶಿಕ್ಷೆ ಮತ್ತು 10 ಲಕ್ಷ ರೂ. ವರೆಗೆ ದಂಡ ಎಂದು ವರ್ಗೀಕರಿಸಲಾಗಿದೆ. ಹದಿನಾರು ವರ್ಷ ಪ್ರಾಯದೊಳಗಿನ ಹುಡುಗಿಯ ಮೇಲೆ ಅತ್ಯಾಚಾರ ಎಸಗುವ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ಆಗಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.