ಶಿವಾಚಾರ್ಯ ಮಹಾ ಸ್ವಾಮೀಜಿಯ ಸಂಕಲ್ಪ ಸಿದ್ಧಿ ಉತ್ಸವಕ್ಕೆ ಚಾಲನೆ

Team Udayavani, Apr 20, 2018, 3:45 PM IST

1804mum01.jpg

ಸೊಲ್ಲಾಪುರ: ನಗರದ ಬೃಹನ್ಮಠ ಹೋಟಗಿ ಮಠದ ಪರಮ ಪೂಜ್ಯ ಲಿಂಗೈಕ್ಯ  ಷ. ಬ್ರ. ತಪೋರತ್ನಂ ಯೋಗಿರಾಜೇಂದ್ರ ಶಿವಾಚಾರ್ಯ ಮಹಾ ಸ್ವಾಮೀಜಿಯವರ ಸಂಕಲ್ಪಸಿದ್ಧಿ ಕಾರ್ಯ ಮಹೋತ್ಸವವು ಎ. 17 ರಂದು ಚಾಲನೆಗೊಂಡಿತು.

ಅಂದು ಬೆಳಗ್ಗೆ 7ರಿಂದ ಭವ್ಯ ಮೆರವಣಿಗೆಯ ಮೂಲಕ ಉತ್ಸವವು ಪ್ರಾರಂಭವಾಗಿದ್ದು ಸುಮಾರು 3 ಸಾವಿರ ಸುಮಂಗಲೆಯರು ಜಲ ಕುಂಭದೊಂದಿಗೆ ಪಾಲ್ಗೊಂಡಿದ್ದರು. ಮುಂಜಾನೆ  ಪಂಚಾಚಾರ್ಯ ಧ್ವಜಾರೋಹಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗೌಡಗಾಂವ್‌ನ ಪೂಜ್ಯ ಡಾ|  ಜಯಸಿದ್ಧೇಶ್ವರ ಸ್ವಾಮೀಜಿ, ಚಿಟಗುಪ್ಪದ ಗುರಲಿಂಗ ಶ್ರೀಗಳು, ಮಾಗಣ ಕೇರಿಯ ವಿಶ್ವಾರಾಧ್ಯ ಶ್ರೀಗಳು, ನಾಗಣಸೂರದ ಶ್ರೀಕಂಠ ಶ್ರೀಗಳು, ಮಂದ್ರೂಪದ ರೇಣುಕ ಶ್ರೀಗಳು, ಪಾನಮಂಗಳೂರಿನ ಶಿವಯೋಗಿ ಶ್ರೀಗಳ ಸಾನ್ನಿಧ್ಯದಲ್ಲಿ ಧ್ವಜಾರೋಹಣ ನಡೆಯಿತು.

ಹೋಟಗಿ ಮಠದ ಪೂಜ್ಯ ಡಾ| ಮಲ್ಲಿಕಾರ್ಜುನ ಶಿವಾಚಾರ್ಯ ಮಹಾ ಸ್ವಾಮೀಜಿ ಅವರ ನೇತೃತ್ವದಲ್ಲಿ ಹಮ್ಮಿಕೊಂಡ ಮೆರವಣಿಗೆಯಲ್ಲಿ ಮಾಜಿ ಕೇಂದ್ರ ಗೃಹ ಸಚಿವ ಸುಶೀಲ್‌ ಕುಮಾರ್‌ ಶಿಂಧೆ ಅವರು ಶ್ರೀಶೈಲ ಪೀಠದ ಆದ್ಯ ಜಗದ್ಗುರು ಪಂಡಿತಾರಾಧ್ಯ ಭಗವತ್ಪಾದರ ಪ್ರತಿಮೆಗೆ ಪೂಜೆ ಸಲ್ಲಿಸಿ, ಶಿವಲಿಂಗ ಮತ್ತು ಗೋಮಾತೆಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ಸಿದ್ಧೇಶ್ವರ ಮಂದಿರದಿಂದ ವೀರತಪಸ್ವಿ ಮಂದಿರದ ವರೆಗೆ 1008 ಶಿವಲಿಂಗ, 1008 ಗೋಮಾತೆ, 1008 ಸುಮಂಗಲೆಯರ ಜಲಕುಂಭ, 1008 ವೀರಶೈವ ಧರ್ಮಗ್ರಂಥ ಸಿದ್ಧಾಂತ ಶಿಖಾಮಣಿ ಗ್ರಂಥೋತ್ಸವದ ಅದ್ದೂರಿ ಮೆರವಣಿಗೆ ನಡೆಯಿತು.

ಮೆರವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿಜಯ ಕುಮಾರ್‌ ದೇಶು¾ಖ್‌, ಶಾಸಕ ಸಿದ್ಧರಾಮ ಮೆØàತ್ರೆ, ಮೇಯರ್‌ ಶೋಭಾ ಬನಶೆಟ್ಟಿ, ಪೊಲೀಸ್‌ ಆಯುಕ್ತ ಮಹಾದೇವ ತಾಂಬಡೆ, ಮಾಜಿ ಶಾಸಕ ಶಿವಶರಣ ಪಾಟೀಲ್‌, ರಾಜಶೇಖರ ಶಿವದಾರೆ, ಕಾಂಗ್ರೆಸ್‌ ಶಹರ ಅಧ್ಯಕ್ಷ ಪ್ರಕಾಶ ವಾಲೆ, ಸೊಲ್ಲಾಪುರ ವಿವಿಯ ಮಾಜಿ ಕುಲಪತಿ ಈರೇಶ ಸ್ವಾಮಿ, ನಗರಸೇವಕ ಶಿವಾನಂದ ಪಾಟೀಲ್‌, ಚೇತನ ನರೂಟೆ, ಡಾ| ಕಿರಣ್‌ ದೇಶು¾ಖ್‌, ನಾಗೇಶ ಬೋಗಡೆ, ಅಮರ ಕೂದಾಲೆ, ನಗರಸೇವಿಕಾ ಅಂಬಿಕಾ ಪಾಟೀಲ್‌, ನರೇಂದ್ರ ಗಂಭೀರೆ, ಕೇದಾರ ಉಂಬರಜೆ, ಸಕಲೇಶ ಚಾಕೋತೆ, ತಮ್ಮಾ ಮಸರೆ, ರಾಜಶೇಖರ  ಹಿರೇಹಬ್ಬು, ವಿರಾಜ ಪಾಟೀಲ್‌ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.

ಮೆರವಣಿಗೆ ಮಂದಿರ ತಲು ಪಿದ ಅನಂತರ ಮಧ್ಯಾಹ್ನ  1008 ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನೆರವೇರಿತು. ಮೊದಲಿಗೆ ಮೇಯರ್‌ ಶೋಭಾ ಬನಶೆಟ್ಟಿ ಅವರಿಗೆ ಉಡಿತುಂಬಿಸುವ ಭಾಗ್ಯ ಒಲಿದು ಬಂದಿತ್ತು. ಬೆಳಗ್ಗೆಯಿಂದ ಸಾಯಂಕಾಲದವರೆಗೂ ದರ್ಶನಕ್ಕೆ ಭಕ್ತರ ದಂಡು ಹರಿದು ಬರುತ್ತಿತ್ತು. ಈ ಸಂಕಲ್ಪಸಿದ್ಧಿ ಮಹೋತ್ಸವದಲ್ಲಿ ಮಹಾರಾಷ್ಟ್ರ ಸೇರಿದಂತೆ ಕರ್ನಾಟಕ ಹಾಗೂ ಆಂಧ್ರದ  ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಮೆರವಣಿಗೆ ಮಾರ್ಗದ ರಸ್ತೆ ಯಲ್ಲಿ ಬಣ್ಣ-ಬಣ್ಣದ ರಂಗೋಲಿ ಹಾಕಲಾಗಿತ್ತು.  ಅಲ್ಲಲ್ಲಿ ಮೆರವಣಿಗೆಗೆ ಪುಷ್ಪವೃಷ್ಟಿಗೈಯುವ ಮೂಲಕ ಮೆರವಣಿಗೆಗೆ ಸ್ವಾಗತ ಕೋರಿದರು.  
ಮೆರವಣಿಗೆಯಲ್ಲಿ ಪಾಲ್ಗೊಂಡ ಭಕ್ತರಿಗೆ ವಿವಿಧ ಸಂಘ-ಸಂಸ್ಥೆಗಳ ಕಾರ್ಯಕರ್ತರು ಹಣ್ಣು ಮತ್ತು ನೀರು ವಿತರಣೆಗೈದರು. 

10 ಕುದುರೆಗಳು, ಎತ್ತಿನ ಬಂಡಿ, ಎರಡು ರಥ, ತೆರೆದ ವಾಹನ ದಲ್ಲಿ ಪರಮಪೂಜ್ಯ ಲಿಂಗೈಕ್ಯ ಷ. ಬ್ರ. ತಪೋರತ್ನಂ ಯೋಗಿ ರಾಜೇಂದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ಅವರ ಮೂರ್ತಿ ಮೆರವಣಿಗೆ ನೆರವೇರಿತು. ಆಳಂದ ಶಾಸಕ ಬಿ. ಆರ್‌. ಪಾಟೀಲ್‌ ಮತ್ತು ಸೋಮನಾಥ ರಗಬಲೆ ಇವರು ಮಹಾಪ್ರಸಾದ ವ್ಯವಸ್ಥೆ ಕಲ್ಪಿಸಿದರು.

ಟಾಪ್ ನ್ಯೂಸ್

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.