ಮುಂಬಯಿ ವಿವಿ ಕನ್ನಡ ವಿಭಾಗದಲ್ಲಿ  ಶಿವರಾಮ ಕಾರಂತ ದತ್ತಿ ಉಪನ್ಯಾಸ

Team Udayavani, Mar 22, 2017, 2:26 PM IST

20-Mum02a.jpg

ಮುಂಬಯಿ: ಇಪ್ಪತ್ತನೇ  ಶತಮಾನದ ಮಹಾನ್‌ ಪ್ರತಿಭೆ ಶಿವರಾಮ ಕಾರಂತರು. ಅವರದು ಬಹುಮುಖ ಆಸಕ್ತಿ. ಅವರಂತಹ ಕ್ರಿಯಾಶೀಲ ವ್ಯಕ್ತಿಯನ್ನು ನಾನಂತೂ ನೋಡಿಲ್ಲ. ಕಾರಂತರ ಜೀವನೋತ್ಸಾಹ, ಸಾಹಸ, ಸಾಧನೆ ನಮಗೆಲ್ಲ ಮಾದರಿಯಾಗಿದೆ ಎಂದು ಹಿರಿಯ ಸಾಹಿತಿ, ವಿಜ್ಞಾನಿ ಡಾ| ವ್ಯಾಸರಾವ್‌ ನಿಂಜೂರು ಅವರು ನುಡಿದರು.

ಇತ್ತೀಚೆಗೆ ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಸದಾನಂದ ಸುವರ್ಣ ಪ್ರಾಯೋಜಿತ ಶಿವರಾಮ ಕಾರಂತ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಕೈಗಾದಲ್ಲಿ ಅಣು ಸ್ಥಾವರವನ್ನು ಸ್ಥಾಪಿಸಬೇಕೆಂದು ನಿರ್ಧರಿಸಿದ್ದ ಸಮಯದಲ್ಲಿ ಅದನ್ನು ಕಾರಂತರು ಕಟುವಾಗಿ ವಿರೋಧಿಸುತ್ತಿದ್ದರು. ಬಿ.ಎ.ಆರ್‌.ಸಿ. ಯ ವಿಜ್ಞಾನಿಗಳ ತಂಡ ಎಲ್ಲೆಡೆ ತೆರಳಿ ಪರಮಾಣು ಶಕ್ತಿಯ ವಿವಿಧ ಲಾಭಗಳ ಬಗ್ಗೆ ಮನವರಿಕೆ ಮಾಡುತ್ತಿದ್ದರು. ಆಗ ಕಾರಂತರು ತಾವೂ ಆ ಸ್ಥಳಗಳಿಗೆ ಹೋಗಿ ಪರಮಾಣು ಶಕ್ತಿಯ ವಿರುದ್ಧ ಗುಡುಗುತ್ತಿದ್ದರು. ಆಗ ಬಿ.ಎ.ಆರ್‌.ಸಿ. ಯ ಮುಖ್ಯಸ್ಥರಾಗಿದ್ದ ಕನ್ನಡಿಗರಾದ ರಾಜಾರಾಮಣ್ಣ ಮತ್ತು ಶ್ರೀನಿವಾಸರವರು ಕಾರಂತರ ಪರಿಚಯವಿದ್ದ ನನ್ನನ್ನು ಈ ವಿಷಯದಲ್ಲಿ ಅನುಸಂಧಾನ ಮಾಡಲು ಕಳಿಸಿದ್ದರು. ಆದರೆ ಪರಮಾಣು ಶಕ್ತಿಯನ್ನು ಹಾನಿಕಾರಕವೆಂದೇ ತೀರ್ಮಾನಿಸಿದ್ದ ಕಾರಂತರು ಬೇರೆಯವರ ಮಾತನ್ನು ಒಪ್ಪಲು ಸಿದ್ಧರಿರಲಿಲ್ಲ. ವೈಜ್ಞಾನಿಕವಾಗಿ ತಮ್ಮ ನಡುವೆ ಭಿನ್ನಾಭಿಪ್ರಾಯವಿದ್ದರೂ ತಮ್ಮ ನಡುವಿನ ಆಪ್ತತೆಗೆ ಯಾವ ಕುಂದೂ ಬರಲಿಲ್ಲ ಎಂದು ನಿಂಜೂರರು ನುಡಿದರು. ತೊಂಬ‌ತ್ತರ ದಶಕದ ಕೊನೆಯಲ್ಲಿ ಬಿ.ಎ.ಆರ್‌.ಸಿಯವರು ಏರ್ಪಡಿಸಿದ್ದ ವಿಜ್ಞಾನದ ಸಮ್ಮೇಳನಕ್ಕೆ ಆಹ್ವಾನವಿತ್ತಾಗ ತಮ್ಮ ತೊಂಬತ್ತೆ$çದರ ಇಳಿವಯಸ್ಸಿನಲ್ಲೂ ಹುರುಪಿನಿಂದ ಮುಂಬಯಿಗೆ ಬಂದ ಕಾರಂತರು ವಿಜ್ಞಾನದ ವಿಷಯದಲ್ಲಿ ನಿರರ್ಗಳವಾಗಿ ಭಾಷಣ ಮಾಡಿ ನೆರೆದಿದ್ದ ವಿಜ್ಞಾನಿಗಳನ್ನು ಮಂತ್ರಮುಗ್ಧರನ್ನಾಗಿಸಿದ್ದರು. ಆ ಸಂದರ್ಭದಲ್ಲಿ ಕಾರಂತರಿಗೆ ಪ್ರವಾಸದ ಖರ್ಚು ಮತ್ತು ಮುಂಬಯಿ ಓಡಾಟದ ಖರ್ಚನ್ನು ನೀಡಿದಾಗ ”ತಾನು ಸೀನಿಯರ್‌ ಸಿಟಿಜನ್‌ ಆದ್ದರಿಂದ ವಿಮಾನದ ದರ ಕಡಿಮೆ ಇತ್ತು ಮತ್ತು ಮುಂಬಯಿಯ ತಿರುಗಾಟದ ಖರ್ಚನ್ನು ನಿಂಜೂರರು ನಿರ್ವಹಿಸುತ್ತಿರುವುದರಿಂದ ಆ ಹಣವನ್ನು ಅವರಿಗೇ ಕೊಡಿ” ಎಂದು ತಾವು ಖರ್ಚು ಮಾಡಿದ್ದಷ್ಟೇ ಹಣವನ್ನು ಸಂಚಾಲಕರಿಂದ ತೆಗೆದುಕೊಂಡರು. ಅವರು ಜೀವನದುದ್ದಕ್ಕೂ ಪ್ರತಿಪಾದಿಸಿಕೊಂಡು ಬಂದ ನಿಷ್ಠೆ ಮತ್ತು ಪ್ರಾಮಾಣಿಕತನದ ಅರಿವು ನಮಗಾಗಿದೆ ಎಂದು ನಿಂಜೂರರು ಈ ಘಟನೆಯ ಬಗ್ಗೆ ತಿಳಿಸಿದರು..

ಅವಿನಾಭಾವ  ಸಂಬಂಧ

ಪ್ರಾಸ್ತಾವಿಕವಾಗಿ ಮಾತನಾಡಿದ ವಿಭಾಗದ ಮುಖ್ಯಸ್ಥರಾದ ಡಾ| ಜಿ. ಎನ್‌. ಉಪಾಧ್ಯ ಅವರು, ಮುಂಬಯಿಗೂ ಕಾರಂತರಿಗೂ ಅವಿನಾಭಾವ ದ ಸಂಬಂಧವಿದೆ. ಕಾರಂತರ ಪಾತ್ರಗಳು ಮತ್ತೆ ಮತ್ತೆ ಮುಂಬಯಿಗೆ ಬಂದು ಹೋಗುತ್ತವೆ. ಡಾ| ನಿಂಜೂರರು ಶಿವರಾಮ ಕಾರಂತರ ನಿಕಟವರ್ತಿಗಳಲ್ಲಿ ಒಬ್ಬರು. ಕಾರಂತರ ಕುರಿತು ಸದಾನಂದ ಸುವರ್ಣರ ಜೊತೆಗೆ ಸೇರಿ ಮಹತ್ವದ ಸಾಕ್ಷ್ಯ ಚಿತ್ರವನ್ನು ನಿರ್ಮಾಣ ಮಾಡಿದ ಶ್ರೇಯಸ್ಸು ಇವರಿಬ್ಬರಿಗೆ ಸಲ್ಲುತ್ತದೆ. ಡಾ| ನಿಂಜೂರರು ಈ ಬಾರಿ ಕಾರಂತ ದತ್ತಿ ಉಪನ್ಯಾಸ ನೀಡುತ್ತಿರುವುದು ಅಭಿಮಾನದ ಸಂಗತಿ ಎಂದು ನುಡಿದರು. ಈ ಸಂದರ್ಭದಲ್ಲಿ ಡಾ| ವಿಟuಲರಾವ್‌ ಗಾಯಕ್ವಾಡ್‌ ಅವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಕೂಡ ಆಯೋಜಿಸಲಾಗಿತ್ತು. ವಿಭಾಗದ ವಿದ್ಯಾರ್ಥಿಗಳು, ಸಾಹಿತ್ಯಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 

ಚಿತ್ರ : ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.