ಶ್ರೀ ಮದ್ಭಾರತ ಮಂಡಳಿ ಮುಂಬಯಿ 140ನೇ ವಾರ್ಷಿಕ ಮಂಗಳ್ಳೋತ್ಸವ
Team Udayavani, Feb 27, 2018, 3:16 PM IST
ಮುಂಬಯಿ: ಶ್ರೀ ಮದ್ಭಾರತ ಮಂಡಳಿ ಮುಂಬಯಿ ಇದರ 140ನೇ ವಾರ್ಷಿಕ ಮಂಗಳ್ಳೋ ತ್ಸವ ಮತ್ತು ಕುಮಾರವ್ಯಾಸ ಮಹಾ ಭಾರತದ ಪ್ರವಚನದ ಸಮಾಪ್ತಿ ಮಂಗಳ್ಳೋತ್ಸವವು ಫೆ. 24ರಂದು ಸಂಜೆ 5ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶುಭಾರಂಭ ಗೊಂಡಿತು.
ಅಂಧೇರಿ ಪಶ್ಚಿಮದ ವೀರ ದೇಸಾಯಿ ರೋಡ್‌ನ, ಎಂವಿಎಂ ಎಜುಕೇಶನಲ್ ಕ್ಯಾಂಪಸ್ ಮಾರ್ಗದಲ್ಲಿರುವ ಶ್ರೀ ಲಕ್ಷ್ಮೀನಾರಾಯಣ ಮಂದಿರದಲ್ಲಿ ಫೆ. 24 ರಂದು ಸಂಜೆ 6 ರಿಂದ ದೇವರ ಮೂರ್ತಿಯನ್ನು ಮಂಟಪದಲ್ಲಿ ಆರೂಢಗೊಳಿಸಲಾಯಿತು. ಆನಂತರ ಹೋಮ, ಬ್ರಾಹ್ಮಣ ಸತ್ಕಾರ, ಗ್ರಂಥ ಪಾರಾಯಣ, ಉಪಕಾರ ಸ್ಮರಣೆ, ಮಂಗಳಾರತಿ, ಪ್ರಸಾದ ವಿತರಣೆ ನೆರವೇರಿತು. ಫೆ. 25 ರಂದು ಪ್ರಾತಃಕಾಲ 8ರಿಂದ ಭಜನೆ, ಉತ್ತರ ಪೂಜೆ, ಮಹಾಮಂಗಳಾರತಿ, ಪೂರ್ವಾಹ್ನ 11.30ರಿಂದ ಪ್ರಾರ್ಥನೆ, ಹರಕೆ ಸಮರ್ಪಣೆ, ಧಾರ್ಮಿಕ ಸಭೆಯನ್ನು ಆಯೋಜಿಸಲಾಗಿತ್ತು.
ಮಂಡಳದ ಅಧ್ಯಕ್ಷ ಜಗನ್ನಾಥ್ ಪಿ. ಪುತ್ರನ್ ಇವರ ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹೊಟೇಲ್ ಉದ್ಯಮಿ ಗೋಪಾಲ್ ಶೆಟ್ಟಿ ಮತ್ತು ಅಂಬಾ ಜಿ. ಶೆಟ್ಟಿ ದಂಪತಿ ಉಪಸ್ಥಿತರಿದ್ದರು.
ಅಧ್ಯಕ್ಷತೆ ವಹಿಸಿದ್ದ ಜಗನ್ನಾಥ್ ಪಿ. ಪುತ್ರನ್ ಇವರು ಸ್ವಾಗತಿಸಿ ಮಾತನಾಡಿ, ನಗರದ ಹಿರಿಯ ಧಾರ್ಮಿಕ ಸಂಸ್ಥೆಯಾಗಿರುವ ಮದ್ಭಾರತ ಮಂಡಳಿಯು ಶತಮಾನಗಳಿಂದ ವೈವಿಧ್ಯಮಯ ಧಾರ್ಮಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಿದೆ. ಧಾರ್ಮಿಕ ಗ್ರಂಥ ಪಾರಾಯಣಗಳ ಯುವ ಪೀಳಿಗೆಗೆ ಇದರ ಮಹತ್ವದ ಅರಿವನ್ನು ಮೂಡಿಸುತ್ತಿದ್ದೇವೆ. ಮಂಗಳ್ಳೋತ್ಸವವನ್ನು ವಿಜೃಂಭಣೆಯಿಂದ ಕಳೆದ 140 ವರ್ಷಗಳಿಂದ ಮಾಡುತ್ತಿದ್ದೇವೆ. ಇದೀಗ ಶ್ರೀಕ್ಷೇತ್ರ ಜೀರ್ಣೋದ್ಧಾರ ಕಾರ್ಯವು ನಡೆಯಲಿದ್ದು, ಈ ಪುಣ್ಯ ಕಾರ್ಯಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಮುಖ್ಯ ಅತಿಥಿ ಉದ್ಯಮಿ ಗೋಪಾಲ್ ಶೆಟ್ಟಿ ಇವರು ಮಾತನಾಡಿ, ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಹತ್ತಿರದಿಂದ ಬಲ್ಲವನಾಗಿದ್ದೇನೆ. ಶ್ರೀಕ್ಷೇತ್ರದ ಜೀರ್ಣೋದ್ಧಾರ ಕಾರ್ಯಕ್ಕೆ ನನ್ನ ಸಹಕಾರ, ಪ್ರೋತ್ಸಾಹ ಸದಾಯಿದೆ ಎಂದು ನುಡಿದು ಶುಭಹಾರೈಸಿದರು.
ಮೊಗವೀನ ವ್ಯವಸ್ಥಾಪಕ ಮಂಡಳಿ ಮುಂಬಯಿ ಅಧ್ಯಕ್ಷ ಕೆ. ಎಲ್. ಬಂಗೇರ, ಮೊಗವೀರ ಬ್ಯಾಂಕಿನ ಕಾರ್ಯಾಧ್ಯಕ್ಷ ಸದಾನಂದ ಕೋಟ್ಯಾನ್, ಶ್ರೀ ಮಹಾಲಕ್ಷ್ಮೀ ಹೌಸಿಂಗ್ ಸೊಸೈಟಿಯ ಕಾರ್ಯಾಧ್ಯಕ್ಷ ಬಾಲಕೃಷ್ಣ ಕರ್ಕೇರ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಮುಂಬಯಿಇದರ ನಾರಾಯಣ ತಿಂಗಳಾಯ, ಉದ್ಯಮಿ ಶ್ರೀನಿವಾಸ ಕಾಂಚನ್ ಮೊದಲಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು.
ಮಂಡಳದ ಗೌರವ ಪ್ರಧಾನ ಕಾರ್ಯದರ್ಶಿ ಗುಂಡಿ ವಿ. ಕೆ. ಸುವರ್ಣ ಇವರು ಅತಿಥಿಗಳನ್ನು ಪರಿಚಯಿಸಿದರು. ಪದಾಧಿಕಾರಿಗಳು ಮತ್ತು ಸದಸ್ಯರು ಅತಿಥಿಗಳನ್ನು ಗೌರವಿಸಿದರು. ವೇದಿಕೆಯಲ್ಲಿ ಮಂಡಳದ ಉಪಾಧ್ಯಕ್ಷರುಗಳಾದ ಒಡೆಯರಬೆಟ್ಟು ರಘುನಾಥ್ ಬಿ. ಕುಂದರ್ ಮತ್ತು ಬಂಟ್ವಾಡಿ ಸಂಜೀವ ಬಿ. ಚಂದನ್, ಗೌರವ ಜತೆ ಕಾರ್ಯದರ್ಶಿಗಳಾದ ಸಣ್ಣಗುಂಡಿ ಲೋಕನಾಥ್ ಪಿ. ಕಾಂಚನ್ ಮತ್ತು ಪಲಿಮಾರು ಹರಿಶ್ಚಂದ್ರ ಸಿ. ಕಾಂಚನ್, ಗೌರವ ಕೋಶಾಧಿಕಾರಿ ಮೂಳೂರು ಕೇಶವ ಆರ್. ಪುತ್ರನ್, ಜತೆ ಕೋಶಾಧಿಕಾರಿಗಳಾದ ಮೂಳೂರು ನಾರಾಯಣ ಸಿ. ಸುವರ್ಣ ಮತ್ತು ಬೈಕಂಪಾಡಿ ಶ್ಯಾಮ ಕೆ. ಪುತ್ರನ್, ಅಶೋಕ್ ಎನ್. ಸುವರ್ಣ ಇವರು ಉಪಸ್ಥಿತರಿದ್ದರು.
ಪಾರುಪತ್ಯಗಾರರುಗಳಾದ ಜೆ. ಪಿ. ಪುತ್ರನ್, ವಿ. ಕೆ. ಸುವರ್ಣ, ನಾರಾಯಣ ಸಿ. ಸುವರ್ಣ, ಆನಂದ ಎ. ಅಮೀನ್, ನಾಗೇಶ್ ಎಲ್. ಮೆಂಡನ್, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಶಶಿಕುಮಾರ್ ಎಸ್. ಕೋಟ್ಯಾನ್, ಲೋಕನಾಥ್ ಒ. ಡಿ. ಮೆಂಡನ್, ವಾಸು ಎಸ್. ಉಪ್ಪೂರು, ದೇವದಾಸ್ ಪಿ. ಕರ್ಕೇರ, ಗೋವಿಂದ ಎನ್. ಪುತ್ರನ್, ಗಂಗಾಧರ ಎಸ್. ಕರ್ಕೇರ, ಎಚ್. ಮಹಾಬಲ್, ಸುರೇಂದ್ರನಾಥ್ ಹಳೆಯಂಗಡಿ, ಆನಂದ ಎ. ಅಮೀನ್, ಗಂಗಾಧರ ಪಿ. ಸಾಲ್ಯಾನ್ ಹಾಗೂ ಇತರ ಸೇವಾಕರ್ತರುಗಳಾದ ಹೊಸಬೆಟ್ಟು ಮಹಾಬಲ ಮತ್ತು ಅಳಿಕೆ ಪುರಂದರ ಅಮೀನ್ ಇವರು ಉಪಸ್ಥಿತರಿದ್ದರು.
ಪ್ರಧಾನ ಅರ್ಚಕ ಗುರುಪ್ರಸಾದ್ ಭಟ್ ಇವರ ನೇತೃತ್ವದಲ್ಲಿ ವಿವಿಧ ಪೂಜೆಗಳು ನಡೆಯಿತು. ಮಧ್ಯಾಹ್ನ 12.05 ರಿಂದ ಅಪರಾಹ್ನ 2 ರವರೆಗೆ ಅನ್ನಸಂತರ್ಪಣೆ ನಡೆಯಿತು. ಅಪರಾಹ್ನ 3 ರಿಂದ ದೇವರ ಶ್ರೀ ದೇವರ ಮೂರ್ತಿಯೊಂದಿಗೆ ವಸೋìವಾ ಚೌಪಾಟಿಗೆ ಅವಭೃತ ಸ್ನಾನಕ್ಕೆ ತೆರಳಲಾಯಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿದರು. ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಮಾಜದ ಗಣ್ಯರು, ವಿವಿಧ ಕ್ಷೇತ್ರಗಳ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಚಿತ್ರ-ವರದಿ: ಸುಭಾಶ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Sullia: ಜಾಕ್‌ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.