ಬಿಲ್ಲವರ ಅಸೋಸಿಯೇಶನ್‌ ಡೊಂಬಿವಲಿ ಕಚೇರಿ: ನಾರಾಯಣಗುರು ಜಯಂತ್ಯುತ್ಸವ


Team Udayavani, Aug 28, 2021, 2:30 PM IST

ಬಿಲ್ಲವರ ಅಸೋಸಿಯೇಶನ್‌ ಡೊಂಬಿವಲಿ ಕಚೇರಿ: ನಾರಾಯಣಗುರು ಜಯಂತ್ಯುತ್ಸವ

ಡೊಂಬಿವಲಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಡೊಂಬಿವಲಿ ಸ್ಥಳೀಯ ಕಚೇರಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುವರ್ಯರ 167ನೇ ಜಯಂತ್ಯುತ್ಸವವು ಆ. 23ರಂದು ಸ್ಥಳೀಯ ಕಚೇರಿಯ ಸಭಾಗೃಹದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.ಬಿಲ್ಲವರ

ಪುರೋಹಿತ ಐತಪ್ಪ ಸುವರ್ಣ, ಸಿ. ಕೆ. ಪೂಜಾರಿ ಮತ್ತು ಧರ್ಮರಾಜ್‌ ಪೂಜಾರಿಯವರು ಗುರು ಮಂಟಪದ ಅಲಂಕಾರಗೈದು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಗುರು ಭಕ್ತರಿಂದ ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರ ವರೆಗೆ ಭಜನೆ, ಭಕ್ತಿಗೀತೆಗಳ ಗಾಯನ, ಕುಣಿತ ಭಜನ ಕಾರ್ಯಕ್ರಮ ನಡೆಯಿತು. ಬಳಿಕ ಗುರುಗಳಿಗೆ ಕರ್ಪೂರಾರತಿ, ವಿಶೇಷ ಗುರೂಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನದಾನ ಜರಗಿತು.

ಹಿರಿಯರಾದ ಬಿ. ವೈ. ಸುವರ್ಣ ಅವರು ಬ್ರಹ್ಮಶ್ರೀ ನಾರಾಯಣಗುರುವರ್ಯರ ಸಾಧನೆಗಳನ್ನು ವಿವರಿಸಿ ಗುರುವಂದನೆ ಸಲ್ಲಿಸಿ ಪ್ರಾರ್ಥನೆ ಗೈದರು. ಈ ಸಂದರ್ಭ ಅನ್ನದಾನ ನೀಡಿ ಸಹಕರಿಸಿದ ಲಕ್ಷ್ಮಣ್‌ ಪೂಜಾರಿ ಹಾಗೂ ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ಡೊಂಬಿವಲಿ ಶಾಖೆಯ ಮ್ಯಾನೇಜರ್‌ ರಮೇಶ್‌ ಸುವರ್ಣ ಅವರನ್ನು ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ದೇವರಾಜ್‌ ಪೂಜಾರಿ ಅವರು ಶಾಲು ಹೊದೆಸಿ ಸಮ್ಮಾನಿಸಿದರು. ಭಾರತ್‌ ಬ್ಯಾಂಕ್‌ನ ಅಧಿಕಾರಿಗಳು, ಪತ್ರಕರ್ತ ರವಿ ಅಂಚನ್‌, ವಸಂತ್‌ ಸುವರ್ಣ, ಡೊಂಬಿವಲಿ ಪರಿಸರದ ತುಳು, ಕನ್ನಡಪರ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಮಾಜ ಬಾಂಧವರು, ಹಿತೈಷಿಗಳು ಹಾಗೂ ಗುರುಭಕ್ತರು ಪ್ರಸಾದ ಸ್ವೀಕರಿಸಿದರು. ಮಾಜಿ ಕಾರ್ಯಾಧ್ಯಕ್ಷ ರವಿ ಎಸ್‌. ಸನಿಲ್‌ ಸ್ವಾಗತಿಸಿ, ವಂದಿಸಿದರು.

ಇದನ್ನೂ ಓದಿ:ಬಿಜೆಪಿ ಮತ್ತೆ ಅಧಿಕಾರಕ್ಕೆ ತರಲು ರಾಜ್ಯಾದ್ಯಂತ ಪ್ರವಾಸ: ಬಿಎಸ್‌ವೈ

ಅನ್ನದಾನ ಸೇವಾಕರ್ತರಾಗಿ ಉದ್ಯಮಿ ಲಕ್ಷ್ಮಣ್‌ ಪೂಜಾರಿ, ಹೂವಿನ ಸೇವಾಕರ್ತ ರಾಗಿ ಕುಶಾ ರವಿ ಸನಿಲ್‌, ಹಣ್ಣುಹಂಪಲಿನ ಸೇವಾಕರ್ತರಾಗಿ ಗಿರಿಜಾ ಸಂಜೀವ ಪಾಲನ್‌, ಪ್ರಸಾದದ ಸೇವಾಕರ್ತರಾಗಿ ಟಿ. ಕೆ. ಕೋಟ್ಯಾನ್‌ ದಂಪತಿಗಳು, ಬೆಳಗ್ಗೆ ಉಪಹಾರದ ಸೇವಾಕರ್ತರಾಗಿ ನಿತ್ಯಾನಂದ್‌ ಜತ್ತನ್‌, ತೆಂಗಿನಕಾಯಿಯ ಸೇವಾಕರ್ತರಾಗಿ ಮಂಜಪ್ಪ ಪೂಜಾರಿ ದಂಪತಿ ಹಾಗೂ ರಾಜೇಶ್‌ ಬಂಗೇರ, ಸಚಿನ್‌ ಜಿ. ಪೂಜಾರಿ, ರಾಮಚಂದ್ರ ಬಂಗೇರ, ರಾಜು ಜಿ. ಪೂಜಾರಿ ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತರು ದೇಣಿಗೆ, ಹೂವು, ಹಣ್ಣು, ದೀಪದ ಎಣ್ಣೆ ಇತ್ಯಾದಿ ನೀಡಿ ಸಹಕರಿಸಿದರು.

ಸಮಿತಿಯ ಗೌರವ ಕಾರ್ಯಾಧ್ಯಕ್ಷ ಸಿ. ಎನ್‌. ಕರ್ಕೇರ, ಉಪ ಕಾರ್ಯಾಧ್ಯಕ್ಷರಾದ ಚಂದ್ರಹಾಸ್‌ ಎಸ್‌. ಪಾಲನ್‌, ಶ್ರೀಧರ ಬಿ. ಆಮೀನ್‌, ಗೌರವ ಕಾರ್ಯದರ್ಶಿ ಪುರಂದರ ಪೂಜಾರಿ, ಜತೆ ಕಾರ್ಯದರ್ಶಿ ವಿಟuಲ್‌ ಪಿ. ಅಮೀನ್‌, ಸಹಾಯಕ ಕೋಶಾಧಿಕಾರಿ ರಾಜೇಶ್‌ ಕೋಟ್ಯಾನ್‌, ಮಂಜಪ್ಪ ಪೂಜಾರಿ, ಜಗನ್ನಾಥ್‌ ಸನಿಲ್‌, ಶಿವಾನಂದ್‌ ಪೂಜಾರಿ, ಈಶ್ವರ ಕೋಟ್ಯಾನ್‌, ಸಚಿನ್‌ ಜಿ. ಪೂಜಾರಿ, ಮೋಹನ್‌ ಜಿ. ಸಾಲ್ಯಾನ್‌, ಪುರುಷೋತ್ತಮ್‌ ಪೂಜಾರಿ, ಸಮಿತಿ ಸದಸ್ಯರು, ಮಹಿಳಾ ವಿಭಾಗ ಮತ್ತು ಯುವ ವಿಭಾಗದ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.