ಸಿರಿನಾಡ ವೆಲ್ಫೇರ್ ಅಸೋಸಿಯೇಶನ್ ಡೊಂಬಿವಲಿ: ಶೈಕ್ಷಣಿಕ ಕಾರ್ಯಕ್ರಮ
Team Udayavani, Jul 6, 2017, 12:27 PM IST
ಡೊಂಬಿವಲಿ: ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸಿರಿನಾಡ ವೆಲ್ಫೆàರ್ ಅಸೋಸಿಯೇಶನ್ ಕಳೆದ ಹಲವು ವರ್ಷಗಳಿಂದ ಉಚಿತ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ, ಆಂಗ್ಲ ಮಾಧ್ಯಮದಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಉಚಿತ ಕನ್ನಡ ಕಲಿಕಾ ತರಗತಿಯನ್ನು ಆಯೋಜಿಸಿ ಪ್ರೋತ್ಸಾಹಿಸುತ್ತಿದೆ. ಡೊಂಬಿವಲಿ ಕರ್ನಾಟಕ ವಿದ್ಯಾಲಯದ ಕನ್ನಡ ಮಾಧ್ಯಮದ ಹತ್ತನೇ ತರಗತಿಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಗೌರವಿಸಲಾಗುತ್ತಿದೆ. ಪಾಲಕರು ಮಕ್ಕಳಿಗೆ ಇಂತಹ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು. ಇದರಿಂದ ಸಮಾಜದ ಒಳಿತು- ಕೆಡುಕುಗಳನ್ನು ಮಕ್ಕಳಿಗೆ ಅರಿಯಲು ಸಾಧ್ಯ ವಾಗುತ್ತದೆ. ನಮ್ಮ ಯುವಪೀಳಿಗೆ ಸಂಸ್ಕೃತಿ, ಸಂಸ್ಕಾರ ವಂತರಾದಾಗ ಮಾತ್ರ ಸಂಸ್ಥೆಯ ಅಳಿಲು ಸೇವೆಗೆ ಯಶಸ್ಸು ಸಿಕ್ಕಿದಂತಾಗುತ್ತದೆ ಎಂದು ಸಿರಿನಾಡ ವೆಲ್ಫೆàರ್ ಅಸೋಸಿಯೇಶನ್ ಡೊಂಬಿವಲಿ ಅಧ್ಯಕ್ಷ ಆರ್. ಕೆ. ಸುವರ್ಣ ಅವರು ಹೇಳಿದರು.
ಡೊಂಬಿವಲಿ ಪಶ್ಚಿಮದ ಮಂಗಳ ಕಾರ್ಯಾಲಯದಲ್ಲಿ ನಡೆದ ಸಿರಿನಾಡ ವೆಲ್ಫೆàರ್ ಅಸೋಸಿಯೇಶನ್ ಡೊಂಬಿವಲಿ ಇದರ ವಾರ್ಷಿಕ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಆರ್ಥಿಕ ನೆರವು ವಿತರಣೆ, ಕನ್ನಡ ಕಲಿಕಾ ವರ್ಗದ ಪ್ರಮಾಣ ಪತ್ರ ವಿತರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಸ್ಥೆಯ ಕನ್ನಡ ಕಲಿಕಾವರ್ಗದ ಸದುಪ ಯೋಗವನ್ನು ಪಡೆದ ವಿದ್ಯಾರ್ಥಿಗಳ ಪಾಲಕರು ಊರಿಗೆ ಸ್ಥಳಾಂತರಗೊಂಡು, ನಮ್ಮ ಸಂಸ್ಥೆಗೆ ಕೃತಜ್ಞತೆಯನ್ನು ಸಲ್ಲಿಸಿರುವ ನಿದರ್ಶನಗಳು ಇವೆ. ಆದ್ದರಿಂದ ಸಂಸ್ಥೆಯ ಸಮಾಜಪರ ಕಾರ್ಯಕ್ರಮಗಳ ಸದುಪಯೋಗವನ್ನು ಎಲ್ಲರು ಪಡೆದುಕೊಳ್ಳಬೇಕು. ಶಿಕ್ಷಣದೊಂದಿಗೆ ಮಕ್ಕಳು ಸಂಸ್ಕಾರವಂತರಾಗಿ ಬೆಳೆಯಬೇಕು ಎಂದು ಕರೆ ನೀಡಿದರು.
ಮಕ್ಕಳನ್ನು ಸುಸಂಸ್ಕೃತರನ್ನಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಬಂಟರ ಸಂಘ ಮುಂಬಯಿ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕ್ರೀಡಾ ಕಾರ್ಯಾಧ್ಯಕ್ಷ ಪ್ರಭಾಕರ ಶೆಟ್ಟಿ ಅವರು ಮಾತನಾಡಿ, ಸಿರಿನಾಡ ವೆಲ್ಫೆàರ್ ಅಸೋಸಿಯೇಶನ್‌ನ ಕಾರ್ಯವೈಖರಿಯನ್ನು ಹಲವು ವರ್ಷಗಳಿಂದ ಕಾಣುತ್ತಿದ್ದೇನೆ. ವಿದ್ಯಾದಾನಕ್ಕೆ ಹೆಚ್ಚಿನ ಮಹತ್ವವನ್ನು ಸಂಸ್ಥೆಯು ನೀಡುತ್ತಿರುವುದು ಅಭಿನಂದನೀಯ. ಕೂಡುಕುಟುಂಬ ವ್ಯವಸ್ಥೆಯು ಇಂದು ದೂರ ವಾಗುತ್ತಿದ್ದು, ಇದರಿಂದ ಮಕ್ಕಳು ಹಾದಿತಪ್ಪುವ ಸಾಧ್ಯತೆ ಹೆಚ್ಚಿದ್ದು, ಇಂತಹ ಸಂದರ್ಭದಲ್ಲಿ ಮಕ್ಕಳನ್ನು ಸುಸಂಸ್ಕೃತರನ್ನಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ. ಅಸೋಸಿಯೇಶನ್‌ನ ಎಲ್ಲಾ ಸಮಾಜಪರ ಕಾರ್ಯಕ್ರಮಗಳಿಗೆ ತುಳು-ಕನ್ನಡಿಗರ ಪ್ರೋತ್ಸಾಹ, ಸಹಕಾರ ಸದಾಯಿರಲಿ ಎಂದು ನುಡಿದರು.
ಪ್ರತಿ ವರ್ಷ ಹೊಸ ಹೊಸ ಯೋಜನೆ
ಸಂಘದ ಸಲಹೆಗಾರ ಇಂದ್ರಾಳಿ ದಿವಾಕರ ಶೆಟ್ಟಿ ಅವರು ಮಾತನಾಡಿ, ಸಿರಿನಾಡ ವೆಲ್ಫೆàರ್ ಅಸೋಸಿಯೇಶನ್ ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳ ಜೀವನದಲ್ಲಿ ಏನೇನು ಅಗತ್ಯವಿದೆಯೋ ಅದನ್ನು ಒದಗಿಸುವ ಕಾರ್ಯವನ್ನು ಸಂಸ್ಥೆಯು ಮಾಡುತ್ತಿದೆ. ಸಂಘವು ಪ್ರತಿ ವರ್ಷ ಹೊಸ ಹೊಸ ಯೋಜನೆಗಳನ್ನು ಕಾರ್ಯ ಗತಗೊಳಿಸುತ್ತಿದ್ದು, ಇದರ ಸದುಪಯೋಗವನ್ನು ಅಗತ್ಯ ಇರುವ ಮಕ್ಕಳು ಪಡೆದುಕೊಳ್ಳಬೇಕು. ಶೈಕ್ಷಣಿಕ ಯೋಜನೆಯ ಲಾಭವನ್ನು ಪಡೆದ ವಿದ್ಯಾರ್ಥಿಗಳು ಸಂಸ್ಥೆಯನ್ನು ಮರೆಯದೆ ಸಂಸ್ಥೆಯ ಋಣವನ್ನು ತೀರಿಸಲು ಪ್ರಯತ್ನಿಸಬೇಕು. ನಾವು ಕೂಡ ಕನ್ನಡ ಮಾಧ್ಯಮದಲ್ಲಿ ಕಲಿತವರು. ಆದ್ದರಿಂದ ಅದರ ಬಗ್ಗೆ ಕೀಳರಿಮೆಯನ್ನು ಹೊಂದಬಾರದು. ಹಿಂದೆ ಕನ್ನಡ ಮಾಧ್ಯಮ ರಾತ್ರಿ ಶಾಲೆಗಳಲ್ಲಿ ಕಲಿತವರು ಇಂದು ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿದರ್ಶನಗಳು ಹಲವಾರು ಇವೆ. ಸಂಸ್ಥೆಯು ನಡೆಸುವ ಕನ್ನಡ ಕಲಿಕಾ ತರಗತಿಗೆ ಹೆಚ್ಚು ಹೆಚ್ಚು ಮಕ್ಕಳು ಸೇರ್ಪಡೆಗೊಂಡು ಕನ್ನಡ ಭಾಷೆ ಕಲಿಯಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಸಂಸ್ಥೆಯಿಂದ ಜನಪರ ಕಾರ್ಯ
ವೈಭವ ಮಂಗಳ ಕಾರ್ಯಾಲಯದ ಮಾಲಕ, ಕೈಲಾಸ್ ಠಾಕೂರ್ ಅವರು ಮಾತನಾಡಿ, ಸಿರಿನಾಡ ವೆಲ್ಫೆàರ್ ಅಸೋಸಿಯೇಶನ್ ಜನಪರ ಕಾರ್ಯಗಳನ್ನು ನಡೆ ಸುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ ವಾಗಿದೆ. ಈ ಸಂಸ್ಥೆಯ ಸಮಾಜಪರ ಕಾರ್ಯಕ್ರಮಗಳನ್ನು ಪರಿಗಣಿಸಿ ಪ್ರತೀ ವರ್ಷ ನಾವು ಈ ಶೈಕ್ಷಣಿಕ ಕಾರ್ಯಕ್ರಮಕ್ಕಾಗಿ ಉಚಿತವಾಗಿ ಸಭಾಗೃಹವನ್ನು ನೀಡುತ್ತಿದ್ದೇವೆ. ಇಂತಹ ಸಮಾಜಪರ ಕೆಲಸಗಳಿಗೆ ನಾನು ಸದಾ ಸಹಕಾರ ನೀಡಲು ಸಿದ್ಧನಿದ್ದೇನೆ. ಸಂಸ್ಥೆಯಿಂದ ಸಹಾಯ ಪಡೆದ ಮಕ್ಕಳು ಸಂಸ್ಥೆಯನ್ನು ಎಂದಿಗೂ ಮರೆಯಬಾರದು ಎಂದರು.
ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿದರು. ವಸಂತ ಸುವರ್ಣ ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತ ನಾಡಿದರು. ಅತಿಥಿ-ಗಣ್ಯರುಗಳನ್ನು ಸಂಘದ ಪದಾಧಿಕಾರಿಗಳು ಪುಷ್ಪಗುತ್ಛವನ್ನಿತ್ತು ಗೌರವಿಸಿದರು. ಕನ್ನಡ ಕಲಿಕಾ ತರಗತಿಯ ಶಿಕ್ಷಕಿ ಶೋಭಾ ಟಿ. ಪೂಜಾರಿ, ಸುನಿತಾ ಪಾಲನ್, ಶೋಭಾ ಶೆಟ್ಟಿ, ಸುಮತಿ ಮೊಗವೀರ ಅವರನ್ನು ಸಂಸ್ಥೆಯ ವತಿಯಿಂದ ಗಣ್ಯರು ಗೌರವಿಸಿದರು. ಶೈಕ್ಷಣಿಕ ಕಾರ್ಯಕ್ರಮಕ್ಕೆ ಸಹಕರಿಸಿದ ಶ್ರೀ ಜಗದಂಬಾ ಮಂದಿರದ ಗೌರವ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೋಟ್ಯಾನ್, ಅಕ್ಷಯ ಶೆಟ್ಟಿ ಅವರನ್ನು ಗೌರವಿಸಲಾಯಿತು. ಇತ್ತೀಚೆಗೆ ನಿಧನರಾದ ಮಹಿಳಾ ವಿಭಾಗದ ಕಾರ್ಯಕಾರಿ ಸಮಿತಿಯ ಸದಸ್ಯೆ ವಿನೋದಾ ಶೆಟ್ಟಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಗಣ್ಯರು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನಿತ್ತು ಸಹಕರಿಸಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಉದ್ಯಮಿ, ಸಮಾಜ ಸೇವಕ ಸುರೇಶ್ ಶೆಟ್ಟಿ, ಸಮಾಜ ಸೇವಕ ಜೈಸಿಂಗ್ ಪಾಟೀಲ್, ಸಲಹೆಗಾರರುಗಳಾದ ಐಕಳ ಗಣೇಶ್ ಶೆಟ್ಟಿ, ಉಪಾಧ್ಯಕ್ಷ ಅಜೆಕಾರು ಜಯ ಶೆಟ್ಟಿ, ಕೋಶಾಧಿಕಾರಿ ಸದಾಶಿವ ಸಾಲ್ಯಾನ್, ಜತೆ ಕಾರ್ಯದರ್ಶಿ ರವೀಂದ್ರ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉದಯಾ ಜೆ. ಶೆಟ್ಟಿ, ಯುವ ವಿಭಾಗದ ಅಧ್ಯಕ್ಷ ವಿನೋದ್ ಕರ್ಕೇರ ಉಪಸ್ಥಿತರಿದ್ದರು. ಜತೆ ಕೋಶಾಧಿಕಾರಿ ವಿಠಲ ಅಮೀನ್ ಸಹಕರಿಸಿದರು. ವಸಂತ ಸುವರ್ಣ ಅವರು ಕಾರ್ಯಕ್ರಮ ನಿರ್ವಹಿಸಿದರು. ಉಪಾಧ್ಯಕ್ಷ ಜಯ ಶೆಟ್ಟಿ ಅಜೆಕಾರು ವಂದಿಸಿದರು.
ಮಂಜುನಾಥ ವಿದ್ಯಾಲಯದ ಕನ್ನಡ ಮಾಧ್ಯಮ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಗೌರವಿಸಲಾಯಿತು. ಕನ್ನಡ ಕಲಿಕಾ ವರ್ಗದ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಅತ್ಯುಚ್ಚ ಅಂಕಗಳನ್ನು ಪಡೆದ ಮಕ್ಕಳನ್ನು ಗೌರವ ಫಲಕವನ್ನಿತ್ತು ಅಭಿನಂದಿಸಲಾಯಿತು. ಎಚ್‌ಎಸ್‌ಸಿ, ಎಸ್‌ಎಸ್‌ಸಿ, ಪದವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಸಂಘದ ಸದಸ್ಯರ ಮಕ್ಕಳನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಗೌರವಿಸಲಾಯಿತು. ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಸಹಾಯ ಧನವನ್ನಿತ್ತು ಪ್ರೋತ್ಸಾಹಿಸಲಾಯಿತು. ನೂರಾರು ಮಕ್ಕಳಿಗೆ ಉಚಿತ ಪುಸ್ತಕಗಳನ್ನು ವಿತರಿಸಿ ಗಣ್ಯರು ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.