ಸಿರಿನಾಡ ವೆಲ್ಫೇರ್‌ ಅಸೋಸಿಯೇಶನ್‌ ಡೊಂಬಿವಲಿ ವಾರ್ಷಿಕೋತ್ಸವ


Team Udayavani, Jan 12, 2018, 4:33 PM IST

7.jpg

ಡೊಂಬಿವಲಿ: ಸಿರಿನಾಡ ವೆಲ್ಫೇರ್‌ ಅಸೋಸಿಯೇಶನ್‌ ಕಳೆದ 16 ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ ತುಳು-ಕನ್ನಡಿಗರ ಪ್ರೀತ್ಯಾದ‌ರಗಳಿಗೆ ಪಾತ್ರವಾಗಿದೆ. ಪ್ರತೀ ವರ್ಷ ನೂತನ ಯೋಜನೆಗಳನ್ನು ಕಾರ್ಯಗತಗೊಳಿಸುತ್ತ ನಾಡು-ನುಡಿಯ ಅಭಿವೃದ್ಧಿಗೆ  ಶ್ರಮಿಸುತ್ತಿದೆ. ಸಂಸ್ಥೆಯ ಸಮಾಜಪರ ಚಿಂತಕರು, ಸಂಘದ ಸದಸ್ಯರ ಪರಿಶ್ರಮದಿಂದ ಇಂತಹ ಯೋಜನೆ ಗಳು ಕಾರ್ಯಗತಗೊಳ್ಳಲು ಸಾಧ್ಯವಾಗುತ್ತಿದೆ. ಸಂಸ್ಥೆಯ ಆರ್ಥಿಕವಾಗಿ ಹಿಂದುಳಿದ ಹೆಣ್ಮಕ್ಕಳ ಮದುವೆಗೆ ಸಹಕರಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದು, ಇದರ ಪ್ರಯೋಜನವನ್ನು ಪಡೆಯಲಿಚ್ಛಿಸುವವರು ಸಂಸ್ಥೆಯನ್ನು ಸಂಪರ್ಕಿಸಬಹುದು. ಕಂಕಣ ಭಾಗ್ಯದಂತಹ ಬೃಹತ್‌ ಯೋಜನೆಗಳು ಮತ್ತು  ಸಮಾಜಪರ ಕಾರ್ಯಗಳಿಗೆ ತುಳು-ಕನ್ನಡಿಗರ ಪ್ರೋತ್ಸಾಹ, ಸಹಕಾರ ಸದಾಯಿರಲಿ ಎಂದು ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ ಅಧ್ಯಕ್ಷ ಆರ್‌. ಕೆ. ಸುವರ್ಣ ಅವರು ಅಭಿಪ್ರಾಯಿಸಿದರು.

ಡೊಂಬಿವಲಿ ಪೂರ್ವದ ಠಾಕೂರ್‌ ಸಭಾಗೃಹದಲ್ಲಿ ನಡೆದ ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ ಡೊಂಬಿವಲಿ ಇದರ 16ನೇ ವಾರ್ಷಿಕೋತ್ಸವ ಸಂಭ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು, ಸಂಸ್ಥೆಯು ತುಳು-ಕನ್ನಡಿಗರು ಹಾಗೂ ನಾಡು- ನುಡಿಯ ಬಗ್ಗೆ ಅಪಾರ ಒಲವನ್ನು ಹೊಂದಿದ್ದು, ನಾವೆಲ್ಲರು ಒಂದಾಗಿ ಒಗ್ಗಟ್ಟು, ಒಮ್ಮತದಿಂದ ಸಂಸ್ಥೆಯನ್ನು ಇನ್ನಷ್ಟು ಬೆಳೆಸೋಣ ಎಂದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಬಂಟರ ಸಂಘ ಮುಂಬಯಿ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಕರುಣಾಕರ ಶೆಟ್ಟಿ ಕಲ್ಲಡ್ಕ ಅವರು ಮಾತನಾಡಿ, 24 ಕೋಟಿ ಜೀವರಾಶಿಗಳಲ್ಲಿ ಮಾನವ ಜನ್ಮ ಬಹಳ ದೊಡ್ಡದು. ಒಳ್ಳೆಯ ಉದ್ಧೇಶವನ್ನಿಟ್ಟುಕೊಂಡು ಸ್ಥಾಪಿತವಾದ ಸಂಸ್ಥೆಯನ್ನು ಮುನ್ನಡೆಸಲು ಸಹಕರಿಸಿದ ಸಲಹೆಗಾರರನ್ನು ಎಂದಿಗೂ ಮರೆಯಬಾರದು. ಸಮಾರಂಭದಲ್ಲಿ ಡೊಂಬಿವಲಿ ಕರ್ನಾಟಕ ಸಂಘದ ನಿಕಟಪೂರ್ವ ಅಧ್ಯಕ್ಷ ವಿಠuಲ್‌ ಶೆಟ್ಟಿ ಅವರನ್ನು ಸಮ್ಮಾನಿಸಿರುವುದು ಅರ್ಥಪೂರ್ಣವಾಗಿದೆ. ಸಮಾಜಪರ ಕಾರ್ಯಗಳಿಗೆ ಹೆಸರುವಾಸಿಯಾಗಿರುವ ಈ ಸಂಸ್ಥೆಯು ಇನ್ನಷ್ಟು ಬೆಳಗಲಿ ಎಂದು ಹಾರೈಸಿದರು.

ಸಂಘದ ಸಲಹೆಗಾರ ಇಂದ್ರಾಳಿ ದಿವಾಕರ ಶೆಟ್ಟಿ ಅವರು ಮಾತನಾಡಿ, ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ ಕಳೆದ 16 ವರ್ಷಗಳಿಂದ ಪೂರೈಸಿದರೆ, ಅದು 25 ವರ್ಷಗಳನ್ನು ಪೂರೈಸಿದಂತೆ ಎದ್ದು ಕಾಣಲು ಸಂಘದ ಕಾರ್ಯಚಟುವಟಿಕೆಗಳು ಕಾರಣವಾಗಿದೆ. ಮಹಿಳಾ ಮತ್ತು ಯುವ ವಿಭಾಗ ಪ್ರಧಾನ ಸಮಿತಿಗೆ ಸಹಕರಿಸುತ್ತಿದೆ. ಮಕ್ಕಳ ಶೈಕ್ಷಣಿಕ ದತ್ತು ಸ್ವೀಕಾರ, ಕಂಕಣ ಭಾಗ್ಯ, ಉಚಿತ ಶೈಕ್ಷಣಿಕ ಪರಿಕರಗಳ ವಿತರಣೆಯಂತೆ ಇನ್ನಿತರ ನೂತನ ಯೋಜನೆಗಳನ್ನು ಕಾರ್ಯಗತಗೊಳಿಸಲು ಪ್ರಯತ್ನಿಸಬೇಕು. ಪ್ರತಿಯೊಬ್ಬರು ಸಂಘಜೀವಿಯಾಗಿರಬೇಕು. ಇದರಿಂದ ಬದುಕಿನಲ್ಲಿ ಸಾರ್ಥಕತೆಯನ್ನು ಪಡೆಯಲು ಸಾಧ್ಯವಿದೆ ಎಂದರು.

ಗೌರವ ಅತಿಥಿಯಾಗಿ ಪಾಲ್ಗೊಂಡ ಕರ್ನಾಟಕ ಸಂಘ ಮೋಹನೆ ಅಧ್ಯಕ್ಷ ಪ್ರಕಾಶ್‌ ಆರ್‌. ಶೆಟ್ಟಿ ಅವರು, ಸಂಘವು ವ್ಯಕ್ತಿಯಾಗಿರದೆ ಶಕ್ತಿಯಾಗಿ ಮೆರೆಯಬೇಕು. ಡೊಂಬಿವಲಿ ಪರಿಸರದಲ್ಲಿ ಶಕ್ತಿಯಾಗಿ ಬೆಳೆಯುತ್ತಿರುವ ಸಿರಿನಾಡ ವೆಲ್ಫೆàರ್‌ ಅಸಸೋಸಿಯೇಶನ್‌ನ ಕಾರ್ಯವೈಖರಿ ಅಭಿನಂದನೀಯವಾಗಿದೆ. ತುಳುನಾಡ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಕ್ಕಳಿಗೆ ನಮ್ಮ ಸಂಸ್ಕೃತಿಯ ಅರಿವು ಮೂಡಿಸುವ ಕೆಲಸವನ್ನು ಸಂಸ್ಥೆ ನಡೆಸುತ್ತಿದೆ. ಕನ್ನಡ ಕಲಿಕಾ ತರಗತಿಯನ್ನು ನಡೆಸಿ ಕನ್ನಡಾಭಿಮಾನವನ್ನು ಬೆಳೆಸುವ ಕಾರ್ಯ ನಿಜವಾಗಿಯೂ ಮಾದರಿಯಾಗಿದೆ ಎಂದು ನುಡಿದರು.

ಇನ್ನೋರ್ವ ಗೌರವ ಅತಿಥಿಯಾಗಿ ಪಾಲ್ಗೊಂಡ ಹೈಕೋರ್ಟ್‌ನ ನ್ಯಾಯವಾದಿ ಶೇಖರ್‌ ಎಸ್‌. ಭಂಡಾರಿ ಇವರು ಮಾತನಾಡಿ, ಜಾತಿ, ಮತ, ಬೇಧವಿಲ್ಲದೆ ಒಂದೇ ವೇದಿಕೆಯಡಿ ಸಂಘಟಿತರಾಗಿ ಸಮಾಜ ಸೇವೆಗೈಯ್ಯುವುದು ಪ್ರಶಂಸನೀಯ. ನಾಡು-ನುಡಿ, ಆಚಾರ-ವಿಚಾರಗಳನ್ನು ಅರಿತು ಸಮಾಜಪರ ಕಾರ್ಯಗಳನ್ನು ಮುನ್ನಡೆಸುವ ಕಾರ್ಯ ಸಂಸ್ಥೆಯಿಂದಾಗಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ಕರ್ನಾಟಕ ಸಂಘ ಡೊಂಬಿವಲಿ ಇದರ ನಿಕಟಪೂರ್ವ ಅಧ್ಯಕ್ಷ ವಿಠಲ್‌ ಎ. ಶೆಟ್ಟಿ ಮತ್ತು ವಿಮಲಾ ವಿ. ಶೆಟ್ಟಿ ದಂಪತಿಯನ್ನು ಸಂಸ್ಥೆಯ ವತಿಯಿಂದ ಸಮ್ಮಾನಿಸಲಾಯಿತು. ಸಮ್ಮಾನ ಸ್ವೀಕರಿಸಿ ಮಾತನಾಡಿದ ವಿಠಲ್‌ ಶೆಟ್ಟಿ ಅವರು, ಕಳೆದ 16 ವರ್ಷದ ಮೊದಲು ಈ ಸಂಸ್ಥೆಯನ್ನು ಉದ್ಘಾಟಿಸಿರುವ ಸಂದರ್ಭದಲ್ಲಿ ಬೆರಳೆಣಿಕೆಯ ಸದಸ್ಯರಿದ್ದರು. ಇಂದು ಅಸಂಖ್ಯಾತ ಸದಸ್ಯರಿದ್ದು ಹೆಮ್ಮರವಾಗಿ ಸಂಸ್ಥೆಯು ಬೆಳೆದು ನಿಂತಿದೆ. ಸಂಘವು ನಿಂತ ನೀರಾಗದೆ ಹರಿಯುವ ನಂದಿಯಂತೆ ಹರಿಯುತ್ತಿದ್ದು, ಉತ್ತಮ ಸಮಾಜಪರ ಕಾರ್ಯಗಳನ್ನು ನಡೆಸಿ ಗಮನ ಸೆಳೆಯುತ್ತಿದೆ. ಮಕ್ಕಳಿಗೆ ನಾಡು-ನುಡಿ, ಸಂಸ್ಕೃತಿ, ಸಂಸ್ಕಾರಗಳ ಬಗ್ಗೆ ತಿಳಿಯಪಡಿಸುವ ಜವಾಬ್ದಾರಿ ಸಂಸ್ಥೆಯ ಮೇಲಿದೆ ಎಂದರು.

ಸುಶಿಲ್‌ ಪುತ್ರನ್‌ ಪ್ರಾರ್ಥನೆಗೈದರು. ಸಂಸ್ಥೆಯ ಉಪಾಧ್ಯಕ್ಷ ಅಜೆಕಾರು ಜಯ ಶೆಟ್ಟಿ ಅವರು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವರಿಸಿದರು. ವಸಂತ +ಸುವರ್ಣ  ಅತಿಥಿಗಳನ್ನು ಪರಿಚಯಿಸಿದರು. ಸಂಸ್ಥೆಯ ಪದಾಧಿಕಾರಿಗಳು ಅತಿಥಿ-ಗಣ್ಯರನ್ನು ಗೌರವಿಸಿದರು.

ಕಾರ್ಯದರ್ಶಿ ದಾಮೋದರ ಸುವರ್ಣ ಅವರು ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ವಿವರಿಸಿದರು.  ನಾಟಕ ಕಲಾವಿದರನ್ನು ಗೌರವಿಸಲಾಯಿತು. ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕನ್ನಡ ಕಲಿಕಾ ತರಗತಿಯ ಶಿಕ್ಷಕರನ್ನು ಗೌರವಿಸಲಾಯಿತು. ಶೈಕ್ಷಣಿಕ ನಿಧಿಗಾಗಿ ಸಂಗ್ರಹಿಸಿದ ಲಕ್ಕಿಡಿಪ್‌ ಡ್ರಾ ಗೊಳಿಸಲಾಯಿತು. ಅಧಿಕ ನಿಧಿ ಸಂಗ್ರಹಿಸಿದ ಸದಸ್ಯರನ್ನು ಗಣ್ಯರು ಅಭಿನಂದಿಸಿದರು. ಸ್ಥಳೀಯ ವಿವಿಧ ಸಂಘಟನೆಗಳ ಪ್ರತಿನಿಧಿಗಳನ್ನು ಗೌರವಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ ಮಕ್ಕಳನ್ನು ಗೌರವಿಸಲಾಯಿತು.

 ಅತಿಥಿಗಳಾಗಿ ಜೈ ಸಿಂಗ್‌ ಪಾಟೀಲ್‌, ಸಮಾಜ ಸೇವಕ, ಕಲ್ಯಾಣ್‌-ಡೊಂಬಿವಲಿ ಮಹಾನಗರ ಪಾಲಿಕೆಯ ನಗರ ಸೇವಕ ವಿನೋದ್‌ ಕಾಲನ್‌, ಅನಿತಾ ಭಂಡಾರಿ, ವಿಮಲಾ ವಿ. ಶೆಟ್ಟಿ, ಸಲಹೆಗಾರರಾದ ರಾಜೀವ ಭಂಡಾರಿ, ರಮೇಶ್‌ ಕುಕ್ಯಾನ್‌, ಸಂಸ್ಥೆಯ ಕೋಶಾಧಿಕಾರಿ ಸದಾಶಿವ ಸಾಲ್ಯಾನ್‌, ಮಹಿಳಾಧ್ಯಕ್ಷೆ ಉದಯಾ ಜೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿನೋದ್‌ ಕರ್ಕೇರ  ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸಂಸ್ಥೆಯ ಸದಸ್ಯ ಬಾಂಧವರಿಂದ, ಮಕ್ಕಳಿಂದ ವಿವಿಧ ವಿನೋದಾವಳಿ ಹಾಗೂ ಧನಂಜಯ ಮೂಳೂರು ರಚಿಸಿರುವ ನಿಶ್ಚಯ ಆಂಡ್‌ ತುಳು ನಾಟಕವು ಸಂಸ್ಥೆಯ ಸದಸ್ಯರಿಂದ ಪ್ರದರ್ಶನಗೊಂಡಿತು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಜೆಕಾರು ಜಯ ಶೆಟ್ಟಿ ಅವರು ನಿರ್ವಹಿಸಿದರು. ವಸಂತ ಸುವರ್ಣ ಅವರು ಸಭಾ ಕಾರ್ಯಕ್ರಮ ನಿರ್ವಹಿಸಿದರು.

ಸಂಸ್ಥೆಯು ಮಹಿಳಾ ವಿಭಾಗವನ್ನು ಸ್ಥಾಪಿಸಿ ಮಹಿಳೆಯರಿಗೆ ಯೋಗ್ಯಸ್ಥಾನಮಾನವನ್ನು ನೀಡಿ ಗೌರವಿಸಿರುವುದು ಪ್ರಶಂಸನೀಯ. ಸ್ತಿÅàಶಕ್ತಿ ಎಲ್ಲಿ ಅಡಕವಾಗಿರುತ್ತದೆಯೋ ಅಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿಯಾಗಿರುತ್ತದೆ. ಸ್ತಿÅàಯರನ್ನು ಗೌರವಿಸುವ ಮನೋಭಾವನೆಯನ್ನು ಮುಂದುವರಿಸಿ ಶೈಕ್ಷಣಿಕ ಕಾರ್ಯಗಳಿಗೆ ಒತ್ತು ನೀಡಿ ಬಡ ವಿದ್ಯಾರ್ಥಿಗಳ ಬಾಳಿಗೆ ಆಶಾಕಿರಣವಾಗಲು ಸಂಸ್ಥೆಯು ಪ್ರಯತ್ನಿಸಬೇಕು 
– ಲತಾ ಜೆ. ಶೆಟ್ಟಿ (ನಿಕಟಪೂರ್ವ ಕಾರ್ಯಾಧ್ಯಕ್ಷೆ : ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗ).

ಇಂದಿನ ಸಮಾರಂಭದಲ್ಲಿ ಮಹಿಳೆಯರನ್ನು ಗೌರವಿಸಿರುವುದು ಶ್ಲಾಘನೀಯವಾಗಿದೆ. ಮಹಿಳೆಯರು ಕೇವಲ ಅಡುಗೆಮನೆಗೆ ಮಾತ್ರ ಸೀಮಿತವಾಗಿರದೆ, ಸಮಾಜಪರ ಕಾರ್ಯಗಳಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು. ಸಾಂಸಾರಿಕ ಕಷ್ಟ-ಸುಖಗಳಲ್ಲಿ ಸ್ಪಂದಿಸುವುದರೊಂದಿಗೆ ಸಾಮಾಜಿಕ, ಸಾಂಸ್ಕೃತಿಕ ರಂಗಗಳಲ್ಲೂ ತಮ್ಮ ವಿದ್ವತ್ತನ್ನು ತೋರ್ಪಡಿಸಬೇಕು. ಈ ನಿಟ್ಟಿನಲ್ಲಿ ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ನ ಮಹಿಳಾ ವಿಭಾಗದ ಕಾರ್ಯ ಅಭಿನಂದನೀಯ 
– ವಿನುತಾ ಶೆಟ್ಟಿ (ಕಾರ್ಯಾಧ್ಯಕ್ಷೆ : ಮಹಿಳಾ ವಿಭಾಗ ಮುಲುಂಡ್‌ ಬಂಟ್ಸ್‌).

ಪಕ್ಷ ಬೇಧ ಮರೆತು ಒಳ್ಳೆಯ ಸಂಸ್ಥೆ ಎಂಬ ಹೆಸರು ಗಳಿಸಿ ಹೆಗ್ಗಳಿಕೆಯಿಂದ ಮುನ್ನಡೆಯುತ್ತಿರುವ ಈ ಸಂಸ್ಥೆಯ ಕಾರ್ಯವೈಖರಿ ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ. ಸಮರ್ಪಣ ಭಾವನೆ ನಮ್ಮಲ್ಲಿರಬೇಕು. ಜನಸೇವೆ ಈಶ್ವರನ ಸೇವೆ ಎಂದರಿತು ಸಮಾಜ ಸೇವೆಯಲ್ಲಿ ತೊಡಗಿದಾಗ ಮನಷ್ಯಶಾಂತಿ ಲಭಿಸುತ್ತದೆ 
– ಜಯಲಕ್ಷ್ಮೀ ಹರೀಶ್‌ ಶೆಟ್ಟಿ 
(ಗಾಯತ್ರಿ ಪರಿವಾರ).

ಸಾಧನೆಯ ಪಥದತ್ತ ಸಾಗುತ್ತಿರುವ ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ ಯಶಸ್ವಿ ಕಾರ್ಯಕ್ರಮಗಳನ್ನು ನಿರ್ವಹಿಸಲು ಸದಸ್ಯರ ಸಹಕಾರವೇ ಮುಖ್ಯ ಕಾರಣವಾಗಿದೆ. ಈ ಒಗ್ಗಟ್ಟನ್ನು ಮುಂದುವರಿಸಿಕೊಂಡು ಸಂಘವನ್ನು ಪ್ರಗತಿಪಥದತ್ತ ಕೊಂಡೊಯ್ಯಬೇಕು 
– ಸಂಜೀವ ಶೆಟ್ಟಿ ಎಕ್ಕಾರು 
(ಉದ್ಯಮಿ, ಸಮಾಜ ಸೇವಕ),

ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ ಸಂಸ್ಥೆಯನ್ನು ಹತ್ತಿರದಿಂದ ಬಲ್ಲವನಾಗಿದ್ದು, ಸಂಘವು ನಡೆಸುವ ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ನನ್ನಿಂದಾದಷ್ಟು ಅಳಿಯ ಸೇವೆಯನ್ನು ಮಾಡುತ್ತಿದ್ದೇನೆ. ಮುಂದೆಯೂ ಸಹಕರಿಸಲು ಸದಾ ಸಿದ್ಧನಿದ್ದೇನೆ 
-ರಾಜೇಶ್‌ ಕೋಟ್ಯಾನ್‌ 
(ಗೌರವ ಪ್ರಧಾನ ಕಾರ್ಯದರ್ಶಿ : ಯಕ್ಷಕಲಾ ಸಂಸ್ಥೆ ಜಗದಂಬಾ ಮಂದಿರ ಡೊಂಬಿವಲಿ). 

ಟಾಪ್ ನ್ಯೂಸ್

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.