ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ನಾವೆಲ್ಲರೂ ಸನ್ನದ್ಧರಾಗೋಣ: ಸುಭಾಷ್‌ ಶೆಟ್ಟಿ

Team Udayavani, Dec 19, 2020, 12:39 PM IST

ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ನಾವೆಲ್ಲರೂ ಸನ್ನದ್ಧರಾಗೋಣ: ಸುಭಾಷ್‌ ಶೆಟ್ಟಿ

ಪುಣೆ, ಡಿ. 18: ಪುಣೆಯ ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮೀ ದೇವಸ್ಥಾನವು ಭಕ್ತರ ಧಾರ್ಮಿಕ ಕೇಂದ್ರವಾಗಿ ಪ್ರಸಿದ್ಧಿಯನ್ನು ಪಡೆದು ಸಾವಿರಾರು ತುಳು-ಕನ್ನಡಿಗರಲ್ಲದೆ ಇತರ ಭಾಷಿಕರ ಅರಾಧನಾ ಕ್ಷೇತ್ರವಾಗಿದೆ. ಸುಮಾರು ಹದಿಮೂರು ವರ್ಷಗಳ ಹಿಂದೆ ಭವ್ಯ ದೇಗುಲ ನಿರ್ಮಾಣವಾಗಿ ಪುಣೆಯ ಧಾರ್ಮಿಕ ಕ್ಷೇತ್ರವಾಗಿ ಕಂಗೊಳಿಸುತ್ತಿದೆ. ಈ ಕ್ಷೇತ್ರದಲ್ಲಿ ನಿರಂತರವಾಗಿ ಧಾರ್ಮಿಕ ಸೇವೆಗಳ ಜತೆಯಲ್ಲಿ ಅಭಿವೃದ್ಧಿ ಕಾರ್ಯಗಳು ಕೂಡ ವಿಸ್ತಾರವಾಗಿ ನಡೆಯುತ್ತಿವೆ. ಇದು ಅಯ್ಯಪ್ಪ ಸ್ವಾಮಿಯ ಮಹಿಮೆ ಮತ್ತು ಕೃಪಾಶೀರ್ವಾದದಿಂದ ಎಂದು ಹೇಳಬಹುದು. ಕ್ಷೇತ್ರದ ಮೇಲಿನ ಭಕ್ತರ ಭಕ್ತಿಯಿಂದ, ದಾನಿಗಳು ಮತ್ತು ಸೇವಾಕರ್ತರ ಸಹಕಾರದಿಂದ ಸಾಕಾರಗೊಳ್ಳುತ್ತಿವೆ. ಅಂತೆಯೇ ದೇವಸ್ಥಾನದ ಸ್ಥಾಪನೆಯಿಂದ ಇಂದಿನವರೆಗೂ ಶ್ರೀ ಅಯ್ಯಪ್ಪ ಸ್ವಾಮೀ ಸೇವಾ ಸಂಘದ ವಿಶ್ವಸ್ಥ ಮಂಡಳಿ, ದೇವಸ್ಥಾನದ ಕಾರ್ಯಕಾರಿ ಸಮಿತಿ ಹಾಗೂ ಭಕ್ತರ ಸಹಕಾರದೊಂದಿಗೆ ದೇವತಾ ಕಾರ್ಯಗಳು, ಸಮಾಜ ಸೇವಾ ಕಾರ್ಯಗಳು ನಡೆಯುತ್ತಿವೆ ಎಂದು ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮೀ ಸೇವಾ ಸಂಘದ ಅಧ್ಯಕ್ಷ ಸುಭಾಷ್‌ ಶೆಟ್ಟಿ ತಿಳಿಸಿದರು.

ಡಿ. 15ರಂದು ಕಾತ್ರಜ್‌ ಅಯ್ಯಪ್ಪ ಸ್ವಾಮೀ ದೇವಸ್ಥಾನದ ಪ್ರಾಂಗಣದಲ್ಲಿ ನಡೆದ ಶ್ರೀ ಅಯ್ಯಪ್ಪ ಸ್ವಾಮೀ ಸೇವಾ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಯ್ಯಪ್ಪ ಸ್ವಾಮೀ ದೇವಸ್ಥಾನದ ನಿರ್ಮಾಣವಾಗಿ ಸಂಪ್ರದಾಯದಂತೆ ಮೊದಲ ಬಾರಿಗೆ ನಡೆಯಲಿರುವ ಬ್ರಹ್ಮಕಲಶೋತ್ಸವವನ್ನು  ಮುಂದಿನ ವರ್ಷದಲ್ಲಿ ನಡೆಸಬೇಕಾಗಿದೆ. ಈ ವರ್ಷ ವಿಶ್ವಕ್ಕೆ ಬಂದೊದಗಿದ ಮಹಾಮಾರಿ ಕೊರೊನಾದಿಂದ ಯಾವುದೇ ಕಾರ್ಯಗಳು ನಡೆಯುವಂತಿರಲಿಲ್ಲ. ಅದ್ದರಿಂದ ದೇವಸ್ಥಾನದ ಬ್ರಹ್ಮಕಲಶೋತ್ಸವವನ್ನು ನಮ್ಮ ಸಮಿತಿಯ ಸದಸ್ಯರು, ಭಕ್ತರು ಮತ್ತು ಎಲ್ಲರ ಒಪ್ಪಿಗೆಯಂತೆ ಬರುವ ವರ್ಷದಲ್ಲಿ ನಡೆಸುವ ತಿರ್ಮಾನವನ್ನು ಈ ಸಭೆಯಲ್ಲಿ ಕೈಗೊಂಡಿದ್ದೇವೆ. ತುಳು-ಕನ್ನಡಿಗರ ಎಲ್ಲ ಸಮಾಜದ ಸಂಘ-ಸಂಸ್ಥೆಗಳ ಸಹಕಾರ, ಭಕ್ತರ, ದಾನಿಗಳ ಸಹಾಯದೊಂದಿಗೆ ಬ್ರಹ್ಮಕಲಶೋತ್ಸವವು ನಡೆಯಲಿದೆ. ಅದಕ್ಕಾಗಿ ನಾವೆಲ್ಲರೂ ಸನ್ನದ್ಧರಾಗೋಣ ಎಂದರು.

ಸಂಘದ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳು ಮತ್ತು ಸಮಾಜ ಸೇವಾ ಕಾರ್ಯ ಚಟುವಟಿಕೆಗಳ ವಾರ್ಷಿಕ ವರದಿಯನ್ನು ಗೌರವ ಕಾರ್ಯದರ್ಶಿ ರಘುರಾಮ್‌ ರೈ ಸಭೆಯ ಮುಂದಿಟ್ಟರು. ಕೋಶಾಧಿಕಾರಿ ಜಗದೀಶ್‌ ಶೆಟ್ಟಿ ಅವರು 2019-2020ನೇ ವಾರ್ಷಿಕ ಲೆಕ್ಕ ಪತ್ರವನ್ನು ಮಂಡಿಸಿ ಅನುಮೋದನೆ ಪಡೆದರು. ಅಯ್ಯಪ್ಪ ಸ್ವಾಮಿಯ ವಾರ್ಷಿಕ ಉತ್ಸವವನ್ನು ಸರಕಾರದ ನಿಯಮಗಳನ್ನು ಪಾಲಿಸಿ, 2021ರ ಜ. 14ರ ಮಕರ ಸಂಕ್ರಾಂತಿಯಂದು ಆಚರಿಸುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ವಾರ್ಷಿಕ ಉತ್ಸವ ಆಚರಣೆಯ ಬಗ್ಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ| ಮೂ| ಹರೀಶ್‌ ಭಟ್‌ ಅವರು ವಿವರಣೆ ನೀಡಿದರು.

ಸಮಿತಿ ಸದಸ್ಯರು ಸಲಹೆ-ಸೂಚನೆಗಳನ್ನು ನೀಡಿದರು. ವಿಶ್ವಸ್ಥ ಮಂಡಳಿ ಸದಸ್ಯರು, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಮಹಿಳೆಯರು ಸಹಿತ ಹೆಚ್ಚಿನ ಸಂಖ್ಯೆಯ ಭಕ್ತರು ಮಹಾಸಭೆಯಲ್ಲಿ ಪಾಲ್ಗೊಂಡಿದ್ದರು. ಗೌರವ ಕಾರ್ಯದರ್ಶಿ ರಘುರಾಮ್‌ ರೈ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಉಪಾಧ್ಯಕ್ಷ ಸುಧಾಕರ್‌ ಶೆಟ್ಟಿ ವಂದಿಸಿದರು.

-ವರದಿ: ಹರೀಶ್‌ ಮೂಡಬಿದ್ರಿ ಪುಣೆ

ಟಾಪ್ ನ್ಯೂಸ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.