ಶ್ರೀ ಧರ್ಮ ಮಾರಿಯಮ್ಮ ದೇವಸ್ಥಾನ: ಚಂಡಿಕಾಯಾಗ


Team Udayavani, Oct 26, 2018, 11:37 AM IST

2510mum03.jpg

ಮುಂಬಯಿ: ನಲ ಸೋಪರ ಪಶ್ಚಿಮದಲ್ಲಿ ಕಾರಣಿಕ ಕ್ಷೇತ್ರವಾಗಿ ಪ್ರಸಿದ್ಧಿಯನ್ನು ಪಡೆದ ಶ್ರೀ ಧರ್ಮ ಮಾರಿಯಮ್ಮ ದೇವಸ್ಥಾನದಲ್ಲಿ ವಾರ್ಷಿಕ ನವರಾತ್ರಿ ಉತ್ಸವವು ಅ. 10 ರಂದು ಪ್ರಾರಂಭಗೊಂಡಿದ್ದು, ಅ. 19 ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಅರ್ಚಕ ವಿಶ್ವನಾಥ್‌ ಭಟ್‌ ಅವರ ಪೌರೋಹಿತ್ಯದಲ್ಲಿ ಅ.10 ರಂದು ಬೆಳಗ್ಗೆ ಕಲಶ ಪ್ರತಿಷ್ಠಾಪನೆಯೊಂದಿಗೆ ಪ್ರಾರಂಭಗೊಂಡ ಉತ್ಸವವು ದಿನಂಪ್ರತಿ ಭಜನೆ, ವಿಶೇಷ ಪೂಜೆ, ಮಂಗಳಾರತಿಯೊಂದಿಗೆ ವಿಧಿವತ್ತಾಗಿ ನಡೆಯಿತು. ಅ. 17ರಂದು ಶ್ರೀಕ್ಷೇತ್ರದಲ್ಲಿ ಪೂರ್ವಾಹ್ನ 11.30 ರಿಂದ ಚಂಡಿಕಾ ಯಾಗ ನಡೆಯಿತು. ಆನಂತರ ಯಾಗದ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಬಹು ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಅ. 19ರಂದು ದಸರಾ ವಿಜಯ ದಶಮಿಯ ಪೂಜಾ ಕೈಂಕರ್ಯಗಳು ನೆರವೇರಿತು. ಮಧ್ಯಾಹ್ನ 12 ರಿಂದ ಮಹಾಪೂಜೆ, ಮಹಾಮಂಗಳಾತಿ ನಡೆಯಿತು. ಅಲ್ಲದೆ ಮಧ್ಯಾಹ್ನ 1ರಿಂದ ಮಹಾ ಅನ್ನದಾನವನ್ನು ಆಯೋಜಿಸಲಾಗಿತ್ತು. ಸಂಜೆ 5 ರಿಂದ ದೇವಸ್ಥಾನದ ಸದಸ್ಯರಿಂದ, ಸ್ಥಳೀಯರಿಂದ ಭಜನಾ ಕಾರ್ಯಕ್ರಮ, ಸಂಜೆ 6.30ರಿಂದ ದೇವಿ ಆವೇಶ ದರ್ಶನ, ಬಲಿ ಉತ್ಸವ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ನೆರವೇರಿತು. ನವರಾತ್ರಿ ಉತ್ಸವದಲ್ಲಿ ತುಳು-ಕನ್ನಡಿಗ ಭಕ್ತಾದಿಗಳಲ್ಲದೆ, ಅನ್ಯಭಾಷಿಗ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆದರು.

ತುಳು-ಕನ್ನಡಿಗರಿಂದ ಪ್ರಾರಂಭ ದಲ್ಲಿ ಶನಿ ಮಂದಿರವಾಗಿ ಸ್ಥಾಪನೆಗೊಂಡು ಆನಂತರ ದೇವಸ್ಥಾನ ದಲ್ಲಿ ಶ್ರಿ ಧರ್ಮ ಮಾರಿಯಮ್ಮ, ಶ್ರೀ ಶನಿದೇವರು, ಶ್ರೀ ದುರ್ಗಾ ಪರಮೇಶ್ವರಿ, ಶ್ರೀ ಮಹಾಕಾಳಿ, ಶ್ರೀ ಗಣಪತಿ, ಶ್ರೀ ರುದ್ರದೇವರ ಗುಡಿಗಳನ್ನು ಸ್ಥಾಪಿಸಲಾಗಿದೆ. ಪ್ರತೀ ದಿನ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳಲ್ಲದೆ, ಉತ್ಸವದ ಸಂದರ್ಭದಲ್ಲಿ ವಿಶೇಷ ಸೇವೆಗಳು ನಡೆಯುತ್ತಿವೆ.

ಚಾರಿಟೆಬಲ್‌ ಟ್ರಸ್ಟ್‌ ಅಧೀನದಲ್ಲಿ ರುವ ದೇವಸ್ಥಾನವು ಜೀರ್ಣೋದ್ಧಾರ ಯೋಜನೆಯನ್ನು ಹೊಂದಿದ್ದು, ಭವಿಷ್ಯದಲ್ಲಿ ಬೃಹತ್‌ ಮಂದಿರವಾಗಿ ನಲಸೋಪರ  ಪರಿಸರ ದಲ್ಲಿ ತಲೆಎತ್ತಲಿದೆ. 
ಚಿತ್ರ-ವರದಿ : ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

KSD-

Kasaragodu: ಆದೂರು ಶ್ರೀಭಗವತಿ ದೈವಸ್ಥಾನ: 351 ವರ್ಷ ಬಳಿಕ ಪೆರುಂಕಳಿಯಾಟ ಸಂಭ್ರಮ

Police

Kodagu: ಬ್ಯಾಂಕ್‌ ಅಧಿಕಾರಿಗಳು, ಜುವೆಲರಿ ಮಾಲಕರ ಜೊತೆ ಎಸ್‌ಪಿ ಸಭೆ

cOurt

Mangaluru: ಪೋಕ್ಸೋ ಪ್ರಕರಣದ ಆರೋಪಿ ದೋಷಮುಕ್ತ

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣMLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ

ಸಮಾಜಘಾತಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ

ಸಮಾಜಘಾತಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. Thumbay Moideen awarded with prestigious Global Visionary NRI Award

ಡಾ. ತುಂಬೆ ಮೊಯ್ದೀನ್ ಅವರಿಗೆ ಪ್ರತಿಷ್ಠಿತ ಗ್ಲೋಬಲ್ ವಿಷನರಿ ಎನ್‌ಆರ್‌ಐ ಪ್ರಶಸ್ತಿ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

ವೈಕುಂಠ ಏಕಾದಶಿ: ಅಮೆರಿಕ ದೇವಸ್ಥಾನದಲ್ಲಿ ಆಚರಣೆಗಳು

ವೈಕುಂಠ ಏಕಾದಶಿ: ಅಮೆರಿಕ ದೇವಸ್ಥಾನದಲ್ಲಿ ಆಚರಣೆ

MUST WATCH

udayavani youtube

ಕಡಿಮೆ ಜಾಗದಲ್ಲಿ ಉತ್ತಮ ಅನಾನಸ್ ಕೃಷಿ ಮಾಡಲು ಇಲ್ಲಿದೆ ಮಾಹಿತಿ

udayavani youtube

ಮಂಗಳೂರು | ಸ್ಥಳೀಯ ಮನೆಯಂಗಳಕ್ಕೆ ಹರಿಯುತ್ತಿರುವ ಡ್ರೈನೇಜ್ ಕೊಳಚೆ

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

ಹೊಸ ಸೇರ್ಪಡೆ

Suside-Boy

Manipal: ಪಶ್ಚಿಮ ಬಂಗಾಲದ ವ್ಯಕ್ತಿಯ ಶವ ಪತ್ತೆ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Frud

Udupi: ಷೇರು ಮಾರುಕಟ್ಟೆಯಲ್ಲಿ 21ಲಕ್ಷ ರೂ. ಹೂಡಿಕೆ: ವಂಚನೆ

balaparadha

Kumbale: ಮೊಬೈಲ್‌ ಫೋನ್‌ ಕಳವು: ಆರೋಪಿ ಸೆರೆ

Suside-Boy

Vitla: ಅನಂತಾಡಿ: ಸೀರೆಗೆ ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.