ಪುಣೆ ಶ್ರೀ ಗುರುದೇವ ಸೇವಾ ಬಳಗ ವಾರ್ಷಿಕೋತ್ಸವಕ್ಕೆ  ಶ್ರೀಗಳಿಂದ ಚಾಲನೆ


Team Udayavani, Nov 24, 2018, 5:05 PM IST

2311mum13.jpg

ಪುಣೆ: ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಪುಣೆ ಇದರ 15ನೇ ವಾರ್ಷಿಕೋತ್ಸವ ಸಂಭ್ರಮವು ನ. 22ರಂದು  ನಗರದ ತಿಲಕ್‌ರೋಡ್‌ನ‌ಲ್ಲಿರುವ ತಿಲಕ್‌ ಸ್ಮಾರಕ ರಂಗ ಮಂದಿರದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ   ನಡೆಯಿತು.

ಈ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಗುರುವಂದನ ಕಾರ್ಯಕ್ರಮವನ್ನು    ಶ್ರೀ ಗುರುದೇವ ದತ್ತ ಸಂಸ್ಥಾನಂ, ಶ್ರೀ ದತ್ತಗುರು ವೀರಾಂಜನೇಯ ಸ್ವಾಮಿ  ಕ್ಷೇತ್ರ ಒಡಿಯೂರಿನ ಪರಮ ಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ದೀಪಪ್ರಜ್ವಲಿಸಿ ಉದ್ಘಾಟಿಸಿ ಆಶೀರ್ವಚನವನ್ನಿತ್ತು ಶುಭಹಾರೈಸಿದರು.

ಈ  ಸಂದರ್ಭದಲ್ಲಿ  ಸಾಧ್ವಿ  ಶ್ರೀ ಮಾತಾನಂದ ಮಯೀ ಅವರು ಉಪಸ್ಥಿತರಿದ್ದರು.   ಸಮಾರಂಭದಲ್ಲಿ    ಮುಖ್ಯ ಅತಿಥಿಗಳಾಗಿ ಉಡುಪಿ  ಗುರುದೇವ ಸೇವಾ ಬಳಗದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ಮುಂಬಯಿ  ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷರಾದ ಕೃಷ್ಣ ಶೆಟ್ಟಿ, ಮುಂಬಯಿ ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ರೇವತಿ ವಾಮಯ್ಯ ಶೆಟ್ಟಿ,  ಪುಣೆ ಶ್ರೀ  ಗುರುದೇವ ಸೇವಾ ಬಳಗದ ಅಧ್ಯಕ್ಷರಾದ  ಸದಾನಂದ ಕೆ. ಶೆಟ್ಟಿ, ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಪ್ರೇಮಾ ಎಸ್‌. ಶೆಟ್ಟಿ ಅವರು  ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪುಣೆ ಬಳಗದ ಕಾರ್ಯದರ್ಶಿ ಎನ್‌. ರೋಹಿತ್‌ ಡಿ. ಶೆಟ್ಟಿ, ಮಾಜಿ ಅಧ್ಯಕ್ಷ  ನಾರಾಯಣ ಕೆ.  ಶೆಟ್ಟಿ,  ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಕಾರ್ಯದರ್ಶಿ ವೀಣಾ ಡಿ. ಶೆಟ್ಟಿ, ನಾಸಿಕ್‌ ಅಹ್ಮದ್‌ನಗರ ಶ್ರೀ ಗುರುದೇವ ಸೇವಾ ಬಳಗದ ಪ್ರಮುಖರು ಉಪಸ್ಥಿತರಿದ್ದು ಶ್ರೀಗಳಿಂದ ಆಶೀರ್ವಾದ ಪಡೆದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ  ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಸದಸ್ಯರಿಂದ ಭಜನೆ, ನಿಧಿ ರೋಹಿತ್‌  ಶೆಟ್ಟಿ,  ಸನ್ನಿಧಿ ರೋಹಿತ್‌  ಶೆಟ್ಟಿ ಅವರಿಂದ ಧಾರ್ಮಿಕ ನೃತ್ಯ ಹಾಗೂ  ಕಲ್ಲಡ್ಕ ವಿಟ್ಟಲ್‌ ನಾಯಕ್‌ ಮತ್ತು ಬಳಗದವರಿಂದ ಸಂದೇಶದ ಸಂತೋಷ ಎಂಬ ಜೀವನ ಮೌಲ್ಯಗಳನ್ನು ಎತ್ತಿ ಹಿಡಿಯುವ ಮತ್ತು ಇಂದಿನ ಜೀವನ ಪದ್ಧತಿಯ ಬಗ್ಗೆ ಜಾಗೃತಿಯನ್ನು ಬಿಂಬಿಸುವ ಅತ್ಯುತ್ತಮ  ಕಾರ್ಯಕ್ರಮ  ಗೀತಾ ಸಾಹಿತ್ಯ ಸಂಭ್ರಮ ನಡೆಯಿತು.

ಪುಣೆ ಬಳಗ ಮತ್ತು ಕೇಂದ್ರದ  ಸದಸ್ಯ ಸದಸ್ಯೆಯರಿಂದ, ಶ್ವೇತಾ ಹರೀಶ್‌ ಮೂಡಬಿದ್ರಿ ನಿರ್ದೇಶನದಲ್ಲಿ ತುಳುನಾಡಿನ  ಹಬ್ಬಗಳ ಆಚರಣೆಯ ವಿಧಾನ ಮತ್ತು ಅವುಗಳ ಮಹತ್ವವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಒಂದು ಸಣ್ಣ ಪ್ರಯತ್ನ ಎಂಬಂತೆ ಹಬ್ಬಗಳ  ಆಚರಣೆಗಳ ಪ್ರಾತ್ಯಕ್ಷಿಕೆಯ ನೃತ್ಯ ರೂಪಕ ತುಳುನಾಡ ಪರ್ಬ ಪ್ರದರ್ಶನಗೊಂಡಿತು. 

ಧಾರ್ಮಿಕ ಕಾರ್ಯಕ್ರಮವಾಗಿ ಶ್ರೀಗಳ ಪಾದುಕಾ ಪೂಜೆ, ಗುರುವಂದನೆ ನೆರವೇರಿತು. ಪತ್ರಕರ್ತ ಯಶವಂತ್‌ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ಸಮಾರಂಭದಲ್ಲಿ ಪುಣೆಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿವಿಧ ಕ್ಷೇತ್ರಗಳ ಗಣ್ಯರು, ಹೊಟೇಲ್‌ ಉದ್ಯಮಿಗಳು, ಧಾರ್ಮಿಕ ಮುಂದಾಳುಗಳು, ಸಮಾಜ ಸೇವಕರು ಪಾಲ್ಗೊಂಡಿದ್ದರು. ಪ್ರಾರಂಭದಲ್ಲಿ ಶ್ರೀಗಳನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ಬಳಗದ ಸದಸ್ಯರು ಮತ್ತು ಸದಸ್ಯೆಯರಿಂದ ಭಜನೆ ಇನ್ನಿತರ ಕಾರ್ಯಕ್ರಮಗಳು ನಡೆದವು. ಶ್ರೀ ಗುರು ದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಪುಣೆ ಇದರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು-ಸದಸ್ಯೆಯರು ಸಮಾರಂಭದ ಯಶಸ್ಸಿಗೆ ಸಹಕರಿಸಿದರು

ಚಿತ್ರ- ವರದಿ: ಹರೀಶ್‌ ಮೂಡಬಿದ್ರಿ ಪುಣೆ

ಟಾಪ್ ನ್ಯೂಸ್

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

16

Pro Kabaddi: ಗುಜರಾತ್‌ಗೆ ರೋಚಕ ಜಯ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

AUS vs IND, 1st Test: ಟಿ20 ಯುಗದಲ್ಲಿ ಭಾರತ ನೈಜ ಟೆಸ್ಟ್‌ ಆಟ!

AUS vs IND, 1st Test: ಟಿ20 ಯುಗದಲ್ಲಿ ಭಾರತ ನೈಜ ಟೆಸ್ಟ್‌ ಆಟ!

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.