ಶ್ರೀ ಕೃಷ್ಣ ವಿಟ್ಠಲ ಪ್ರತಿಷ್ಠಾನ: ವಿಂಶತಿ ವರ್ಷ ಸಾಂಸ್ಕೃತಿಕ ಉತ್ಸವ
Team Udayavani, Oct 25, 2017, 9:58 AM IST
ಮುಂಬಯಿ: ಶ್ರೀ ಕೃಷ್ಣ ವಿಟ್ಠಲ ಪ್ರತಿಷ್ಠಾನ ಮುಂಬಯಿ ಇದರ ವಿಂಶತಿ ವರ್ಷ ಸಾಂಸ್ಕೃತಿಕ ಉತ್ಸವವು ಅ. 22ರಂದು ಅಪರಾಹ್ನ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ಶ್ರೀ ಕೃಷ್ಣ ವಿಟuಲ ಪ್ರತಿಷ್ಠಾನ ಮುಂಬಯಿ ಸಂಸ್ಥಾಪಕಾಧ್ಯಕ್ಷ ವಿದ್ವಾನ್ ಕೈರಬೆಟ್ಟು ವಿಶ್ವನಾಥ್ ಭಟ್ ಅವರ ನೇತೃತ್ವದಲ್ಲಿ ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ರಘುರಾಮ ಕೆ. ಶೆಟ್ಟಿ, ರಾಘು ಪಿ. ಶೆಟ್ಟಿ, ವಿಟ್ಠಲ ಸುಂದರ್ ನಾಯಕ್, ಪಾಂಡುರಂಗ ಶೆಟ್ಟಿ, ಪದ್ಮನಾಭ ಪಯ್ಯಡೆ, ಅಜೆಕಾರು ಶಿವರಾಮ ಶೆಟ್ಟಿ, ಸಿಬಿಡಿ ಭಾಸ್ಕರ್ ಶೆಟ್ಟಿ, ಜಗನ್ನಾಥ್ ಪುತ್ರನ್, ಕೃಷ್ಣ ವಿ. ಆಚಾರ್ಯ, ಕಲ್ಯಾ ದಯಾನಂದ ಪೂಜಾರಿ, ಭುಜಂಗ ಎಂ. ಶೆಟ್ಟಿ, ಕೆ. ಎಂ. ಶೆಟ್ಟಿ, ಶಾರದಾ ಸೂರು ಕರ್ಕೇರ, ಸುಧೀರ್ ವಿ. ಹೆಗ್ಡೆ ಅವರನ್ನು ಶ್ರೀ ಕೃಷ್ಣವಿಟ್ಠಲಾನುಗ್ರಹ ಪ್ರಶಸ್ತಿಯನ್ನಿತ್ತು ಗೌರವಿಸಲಾಯಿತು.
ಬಾಲ ಪ್ರತಿಭೆಗಳಾದ ಪ್ರಣವ್ ನವೀನ್ ಬಂಗೇರ, ವಿಖ್ಯಾತ್ ವಿ. ಭಟ್ ಅವರನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಗೌರವಿಸಲಾಯಿತು. ಬಿಎಸ್‌ಕೆಬಿ ಅಸೋಸಿಯೇಶನ್ ಅಧ್ಯಕ್ಷ ಡಾ| ಸುರೇಶ್ ಎಸ್. ರಾವ್, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್. ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಷನ್ ಮುಂಬಯಿ ಘಟಕದ ಅಧ್ಯಕ್ಷ ಕಡಂದಲೆ ಸುರೇಶ್ ಭಂಡಾರಿ, ಬಂಟರ ಸಂಘ ಮುಂಬಯಿ ಮಾಜಿ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟರ ಸಂಘ ಮುಂಬಯಿ ಮಾಜಿ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಸಿದ್ಧ ಯಕ್ಷಗಾನ ಭಾಗವತ ಬಲಿಪ ನಾರಾಯಣ ಭಾಗವತ, ಯಕ್ಷಧ್ರುವ ಸತೀಶ್ ಶೆಟ್ಟಿ ಪಟ್ಲ, ಸಂಗೀತಗಾರ ಪದ್ಮನಾಭ ಸಸಿಹಿತ್ಲು, ಶ್ರೀ ಕೃಷ್ಣ ವಿಟuಲ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಪೆರ್ಮುದೆ ಅಶೋಕ್ ಶೆಟ್ಟಿ, ಕೋಶಾಧಿಕಾರಿ ಅವಿನಾಶ್ ಶಾಸಿŒ, ಧರ್ಮ ಸಮೃದ್ಧಿ ಯೋಜನೆಯ ಕಾರ್ಯಾಧ್ಯಕ್ಷ ವಿರಾರ್ ಶಂಕರ್ ಬಿ. ಶೆಟ್ಟಿ, ಶಿಕ್ಷಣ ಸಮೃದ್ಧಿ ಯೋಜನೆಯ ಕಾರ್ಯಾಧ್ಯಕ್ಷ ಕಳತ್ತೂರು ವಿಶ್ವನಾಥ ಶೆಟ್ಟಿ, ಸಂಸ್ಕೃತಿ ಸಮೃದ್ಧಿ ಯೋಜನೆಯ ಕಾರ್ಯಾಧ್ಯಕ್ಷೆ ಸುಮಾ ವಿ. ಭಟ್, ಉಪಾಧ್ಯಕ್ಷರಾದ ರಮೇಶ್ ಡಿ. ಸಾವಂತ್, ಹರೀಶ್ ಎಸ್. ಶೆಟ್ಟಿ, ಜತೆ ಕಾರ್ಯದರ್ಶಿಗಳಾದ ಶಶಿಧರ ಬಿ. ಶೆಟ್ಟಿ, ಕುಕ್ಕೆಹಳ್ಳಿ ಸದಾನಂದ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುನಂದಾ ಎಸ್. ಉಪಾಧ್ಯಾಯ, ಯುವ ವಿಭಾಗದ ನವೀನ್ ಪಡು ಇನ್ನ, ಬಂಟರವಾಣಿಯ ಗೌರವ ಸಂಪಾದಕ ಅಶೋಕ್ ಪಕ್ಕಳ, ಕಲಾ ಸಂಘಟಕ ಕರ್ನೂರು ಮೋಹನ್ ರೈ, ಅಮೃತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಚಿತ್ರ-ವರದಿ: ಸುಭಾಷ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.