ನಲಸೋಪರ ಪಶ್ಚಿಮದ ಶ್ರೀ ಶನೀಶ್ವರ ಮಂದಿರ: ಬ್ರಹ್ಮಕಲಶೋತ್ಸವ


Team Udayavani, Feb 14, 2019, 4:13 PM IST

1302mum15a.jpg

 ಮುಂಬಯಿ: ಧಾರ್ಮಿಕ ವಿಧಿ-ವಿಧಾನಗಳ ಹಿನ್ನೆಲೆಯಲ್ಲಿ ಭಕ್ತರು ಒಗ್ಗೂಡಿದಾಗ ಅಲ್ಲಿ ದೈವೀಶಕ್ತಿ ಸಂಪನ್ನವಾಗುತ್ತದೆ. ಆ ದೈವೀ ಶಕ್ತಿ ನಲಸೋಪರದಲ್ಲಿ ಪ್ರಕಟಗೊಂಡು ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ ಫೋರ್ಟ್‌ ಇದರ 8 ದಿನಗಳ ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ರಕ್ಷಣೆಯಾಗಿ ಕಾಪಾಡಿತು. ಸಾಮಾಜಿಕ ಜೀವನಕ್ಕೆ ಶಾಂತಿ, ಐಕ್ಯತೆಯ ತಂಪು ಎರೆಯುವ ವಿವಿಧ ಪೂಜಾ ಕೈಂಕರ್ಯಗಳು, ಅಷ್ಟಬಂಧ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಸಹಸ್ರಾರು ಮಂದಿಯ ಸಮ್ಮುಖದಲ್ಲಿ ನಿರ್ವಿಘ್ನವಾಗಿ ನೆರವೇರಿತು. ಆಧ್ಯಾತ್ಮಿಕ ನೆಲೆಯಲ್ಲಿ ಸ್ಥಾಪಿತವಾಗಿರುವ ಧರ್ಮ ಮತ್ತು ಸಂಸ್ಕೃತಿಯನ್ನು ನಲಸೋಪರದ ಶ್ರೀ ಶನೈಶ್ಚರ ದೇವರ ಸನ್ನಿಧಿಯಲ್ಲಿ ಸಂರಕ್ಷಿಸುವುದು ಸದ್ಭಕ್ತರ ಕರ್ತವ್ಯವಾಗಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ| ವಿರಾರ್‌ ಶಂಕರ್‌ ಬಿ. ಶೆಟ್ಟಿ ಅವರು ಅಭಿಪ್ರಾಯಿಸಿದರು. 

ಫೆ. 7 ರಂದು ನಲಸೋಪರ ಪಶ್ಚಿಮದ ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ ಫೋರ್ಟ್‌ ಇದರ ಶ್ರೀ ಗಣಪತಿ, ಶ್ರೀ ದುರ್ಗಾದೇವಿ, ನವಗ್ರಹ ಶ್ರೀ ಶನೈಶ್ಚರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ, ಜಾತ್ರಾ ಮಹೋತ್ಸವ ಮತ್ತು 75 ನೇ ವಾರ್ಷಿಕ ಶನಿಮಹಾಪೂಜೆಯ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ಮನಸ್ಸಿನಲ್ಲಿರುವ ಭೇದಭಾವ, ಕಶ್ಮಲಗಳನ್ನು ಹೋಗಲಾಡಿಸಿ ನಾವೆಲ್ಲಾ ಒಂದಾಗಿ ಒಗ್ಗಟ್ಟಾಗಿ ದೇವಸ್ಥಾನದ ನಿರ್ಮಾಣಕ್ಕೆ ಕೈಜೋಡಿಸಿದ್ಧೇವೆ. ಸಹಬಾಳ್ವೆ, ಪ್ರೀತಿ ಮತ್ತು ವಿಶ್ವಾಸದಿಂದ ಬದುಕಲು ನಮ್ಮ ಪೂರ್ವಜರು ದೇವಾಲಯಗಳ ಪರಿಕಲ್ಪನೆಯನ್ನು ಬೋದಿಸಿದ್ದಾರೆ. ಅದನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ನುಡಿದು ಸಹಕ ರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. 

ಗೌರವ ಅತಿಥಿಯಾಗಿ ಉಪಸ್ಥಿತರಿದ್ದ ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಮಾತನಾಡಿ, ಧರ್ಮದ ಅಂತರಂಗದಲ್ಲಿ ಎಲ್ಲಾ ಸುಖಗಳು ಅಡಗಿದೆ. ಅದನ್ನು ಶ್ರದ್ಧಾಭಕ್ತಿ ಹಾಗೂ ಪ್ರಾಮಾಣಿಕ ಪ್ರಯತ್ನಗಳಿಂದ ಅನುಷ್ಠಾನಗೊಳಿಸ ಬೇಕು ಎಂದು ನುಡಿದರು. 

ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದರ ಅಧ್ಯಕ್ಷ ಡಾ| ಸುರೇಂದ್ರ ಕುಮಾರ್‌ ಹೆಗ್ಡೆ, ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಥಾಣೆ, ಬಂಟ್ಸ್‌ನ ಅಧ್ಯಕ್ಷ ಕುಶಲ್‌ ಸಿ. ಭಂಡಾರಿ, ಮುಲುಂಡ್‌ ಬಂಟ್ಸ್‌ನ ಉಪಾಧ್ಯಕ್ಷ ವಸಂತ ಶೆಟ್ಟಿ, ಬಂಟರ ಸಂಘದ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಲೀಲಾಧರ ಶೆಟ್ಟಿ ಕಾಪು, ಉದ್ಯಮಿ ವಿಶ್ವನಾಥ ಪಿ. ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಚಂದ್ರಶೇಖರ ಎಸ್‌. ಪೂಜಾರಿ, ಕರ್ನಿರೆ ವಿಶ್ವನಾಥ ಶೆಟ್ಟಿ ಅವರು ಮಾತನಾಡಿ ಶುಭಹಾರೈಸಿದರು. 

ವೇದಿಕೆಯಲ್ಲಿ ಸಾಯಿ ಪ್ಯಾಲೇಸ್‌ ಗ್ರೂಪ್‌ ಆಫ್‌ ಹೊಟೇಲ್‌ನ ಸಿಎಂಡಿ ರವಿ ಶೆಟ್ಟಿ, ಬಂಟರ ಸಂಘ ಮುಂಬಯಿ ಜೊತೆ ಕೋಶಾಧಿಕಾರಿ ಗುಣಪಾಲ್‌ ಶೆಟ್ಟಿ ಐಕಳ, ಥಾಣೆ ಬಂಟ್ಸ್‌ನ ಉಪಾಧ್ಯಕ್ಷ ವೇಣುಗೋಪಾಲ್‌ ಶೆಟ್ಟಿ, ಮುಲುಂಡ್‌ ಉದ್ಯಮಿ ಅಶೋಕ್‌ ಅಡ್ಯಂತಾಯ, ನಾರಾಯಣ ಆಳ್ವ, ಅರುಣೋದಯ ರೈ, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷರುಗಳಾದ ಪಾಂಡು ಎಲ್‌. ಶೆಟ್ಟಿ, ಹರೀಶ್‌ ಶೆಟ್ಟಿ ಗುರ್ಮೆ, ಶಶಿಧರ ಕೆ. ಶೆಟ್ಟಿ, ರಮೇಶ್‌ ಕೊಠಾರಿ, ಶ್ರೀಧರ ಪೂಜಾರಿ, ನಂದಕುಮಾರ್‌ ಕುಂಬ್ಳೆ, ಕಾರ್ಯದರ್ಶಿ ವಸಂತ ವಿ. ಶೆಟ್ಟಿ, ಜತೆ ಕಾರ್ಯದರ್ಶಿ ಸತೀಶ್‌ ಎ. ಶೆಟ್ಟಿ, ಕೋಶಾಧಿಕಾರಿ ಸುಂದರ ಎ. ಬೆಳ್ಚಡ, ಜತೆ ಕೋಶಾಧಿಕಾರಿ ಲಯನ್‌ ಕೃಷ್ಣಯ್ಯ ಹೆಗ್ಡೆ, ವಿವಿಧ ಸಮಿತಿಯ ಅಧ್ಯಕ್ಷರುಗಳಾದ ಶಂಕರ ಆಳ್ವ, ಶ್ರೀನಿವಾಸ ಆಳ್ವ, ಶಕುಂತಳಾ ಜಿ. ಮೆಂಡನ್‌, ಶಕುಂತಳಾ ಶೆಟ್ಟಿ, ಮೋಹನ್‌ ಬಿ. ಶೆಟ್ಟಿ, ಜಯಂತ್‌ ಪಕ್ಕಳ, ಜಗನ್ನಾಥ್‌ ಎನ್‌. ರೈ, ಸದಾಶಿವ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು. 
ಸಮಾರಂಭದಲ್ಲಿ ದಾನಿಗಳನ್ನು, ಹಿರಿಯ ಪದಾಧಿಕಾರಿಗಳನ್ನು ಶಾಲು ಹೊದೆಸಿ, ಫಲಪುಷ್ಪವನ್ನಿತ್ತು ಸಮ್ಮಾನಿಸಲಾಯಿತು. ಪ್ರವೀಣ್‌ ಶೆಟ್ಟಿ ಕಣಂಜಾರು ಮತ್ತು ವಿಜಯ ಶೆಟ್ಟಿ ಕುತ್ತೆತ್ತೂರು ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬಂಟರ ಸಂಘ ಮುಂಬಯಿ ಇದರ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯ ಪ್ರಾಯೋಜಕತ್ವದಲ್ಲಿ ಪೊಪ್ಪ ತುಳು ನಾಟಕ ಪ್ರದರ್ಶನಗೊಂಡಿತು. 

ಬ್ರಹ್ಮಶ್ರೀ ವಿದ್ವಾನ್‌ ಕೊಯ್ಯೂರು ನಂದಕುಮಾರ್‌ ತಂತ್ರಿಯವರ ಪೌರೋಹಿತ್ಯದಲ್ಲಿ ಬೆಳಗ್ಗೆ ದೀಪ ಬಲಿ, ತೈಲಾದಿ ಸ್ನಾನ, ಶ್ರೀ ಶನೈಶ್ಚರ ದೇವರಿಗೆ ಬ್ರಹ್ಮಕಲಾಭಿಷೇಕ, ಶ್ರೀ ಗಣಪತಿ, ಶ್ರೀ ದುರ್ಗಾದೇವಿಯ ಸನ್ನಿಧಾನದಲ್ಲಿ ಕಲಶಾಭಿಷೇಕ, ಪ್ರಸನ್ನ ಪೂಜೆ, ದೇವರ ಉತ್ಸವ, ಪಲ್ಲಪೂಜೆ ಜರಗಿತು. ಮಧ್ಯಾಹ್ನ ಅನ್ನಸಂತರ್ಪಣೆ, ಸಗ್ರಿ ಗೋಪಾಲ್‌ಕೃಷ್ಣ ಸಾಮಗರ ನೇತೃತ್ವ ದಲ್ಲಿ ನಾಗ ಸನ್ನಿಧಿಯಲ್ಲಿ ದೇವರ ಉತ್ಸವ, ರಂಗ ಪೂಜೆ, ಕವಾಟ ಬಂಧನ ನೆರವೇರಿತು. 

ಉತ್ಸವ ಸಮಿತಿ, ಉಪಸಮಿತಿಗಳ ಸದಸ್ಯರು, ಮಹಿಳಾ ವಿಭಾಗದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.  ಸಂಘ- ಸಂಸ್ಥೆಗಳ ಪ್ರತಿನಿಧಿಗಳು, ಸಚಿವರು, ಶಾಸಕರು,ಸಂಸದರರು ಮಠಾಧೀಪತಿಗಳು, ಧರ್ಮಗುರುಗಳು ಹೆಚ್ಚಿನ ಸಂಖ್ಯೆ ಯಲ್ಲಿ ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿ ಶನಿದೇವರ ಅನುಗ್ರಹಕ್ಕೆ ಪಾತ್ರರಾದರು. 

75 ವರ್ಷಗಳ ಹಿಂದೆ ಬೆರಳೆಣಿಕೆಯ ಸಾಮಾನ್ಯ ಉದ್ಯೋಗಸ್ಥರು ಸೇರಿ ಸ್ಥಾಪಿಸಿದ ಶ್ರೀ ಶನಿಮಹಾತ್ಮ ಪೂಜಾ ಸಮಿತಿ ಫೋರ್ಟ್‌ ಪ್ರಸ್ತುತ ನಲಸೋಪರದ ಶ್ರೀಪ್ರಸ್ಥ ಸನ್ನಿಧಿಯಲ್ಲಿ ನಿರ್ಮಿಸಿರುವ ಶ್ರೀ ಶನಿಮಂದಿರವು  ಲಕ್ಷಾಂತರ ಮಂದಿ ಸದ್ಭಕ್ತರು ಸೇರುವ ಪವಿತ್ರ ಸ್ಥಳವಾಗಿ ಕಂಗೊಳಿಸುತ್ತಿದೆ. ಶ್ರೀ ಶನೀಶ್ವರ ದೇವರ ಶಿಲಾಮಯ ದೇವಸ್ಥಾನ, ಶ್ರೀ ನಾಗ ಸನ್ನಿಧಿ, ಆಕರ್ಷಕ ಧ್ವಜಸ್ತಂಭ, ಧ್ವಜಾರೋಹಣ, ಬಲಿ ಉತ್ಸವ ಜಾತ್ರೆ ಇತ್ಯಾದಿಗಳು ಮಹಾರಾಷ್ಟ್ರ ರಾಜ್ಯದ ಮಣ್ಣಿನಲ್ಲಿ ಶಾಶ್ವತವಾಗಿ ನೆಲೆವೂರಿತು. ಎಂಟು ದಿನಗಳ ಕಾಲ ನಿರಂತರವಾಗಿ ಪೂಜೆ, ಹವನ, ಯಜ್ಞ, ಹೋಮ, ಭಜನೆ, ಸಾಂಸ್ಕೃತಿಕ ವೈಭವ ನಡೆಯಿತು. ಭಕ್ತರಿಗೆ ಆಹೋರಾತ್ರಿ ಲಘು ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿ ಅನ್ನಸಂತರ್ಪಣೆಯು ವ್ಯವಸ್ಥಿತವಾಗಿ, ಶಿಸ್ತುಬದ್ಧವಾಗಿ ನಡೆದು ಭಕ್ತಾದಿಗಳ ಪ್ರಶಂಸೆಗೆ ಪಾತ್ರವಾಯಿತು. 

 ಚಿತ್ರ-ವರದಿ : ರಮೇಶ್‌ ಅಮೀನ್‌ 

ಟಾಪ್ ನ್ಯೂಸ್

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

10-uv-fusion

Nature: ಪ್ರಕೃತಿ ಮಡಿಲಲ್ಲಿ ಒಂದು ಕ್ಷಣ

9-uv-fusion

Grandfather: ಬಡ ತಾತನ ಹೃದಯ ಶ್ರೀಮಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.