ಸಿರಿನಾಡ ವೆಲ್ಫೇರ್ ಅಸೋಸಿಯೇಶನ್ ವಾರ್ಷಿಕೋತ್ಸವ
Team Udayavani, Jan 16, 2018, 1:47 PM IST
ಡೊಂಬಿವಲಿ: ಸಿರಿನಾಡ ವೆಲ್ಫೇರ್ ಅಸೋಸಿಯೇಶನ್ ಡೊಂಬಿವಲಿ ಇದರ 16 ನೇ ವಾರ್ಷಿಕೋತ್ಸವ ಸಂಭ್ರಮವು ಜ. 7 ರಂದು ಡೊಂಬಿವಲಿ ಪೂರ್ವದ ಠಾಕೂರ್ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ಸಿರಿನಾಡ ವೆಲ್ಫೆàರ್ ಅಸೋಸಿಯೇಶನ್ ಅಧ್ಯಕ್ಷ ಆರ್. ಕೆ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಸಂಘ ಡೊಂಬಿವಲಿ ಇದರ ನಿಕಟಪೂರ್ವ ಅಧ್ಯಕ್ಷ ವಿಠಲ್ ಎ. ಶೆಟ್ಟಿ ಮತ್ತು ವಿಮಲಾ ವಿ. ಶೆಟ್ಟಿ ದಂಪತಿಯನ್ನು ಸಂಸ್ಥೆಯ ವತಿಯಿಂದ ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗೌರವಿಸಿ ಅಭಿನಂದಿಸಲಾಯಿತು.
ವೇದಿಕೆಯಲ್ಲಿ ಅತಿಥಿಗಳಾಗಿ ಬಂಟರ ಸಂಘ ಮುಂಬಯಿ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಕರುಣಾಕರ ಶೆಟ್ಟಿ ಕಲ್ಲಡ್ಕ, ಸಂಘದ ಸಲಹೆಗಾರ ಇಂದ್ರಾಳಿ ದಿವಾಕರ ಶೆಟ್ಟಿ, ಕರ್ನಾಟಕ ಸಂಘ ಮೋಹನೆ ಅಧ್ಯಕ್ಷ ಪ್ರಕಾಶ್ ಆರ್. ಶೆಟ್ಟಿ, ಹೈಕೋರ್ಟ್‌ನ ನ್ಯಾಯವಾದಿ ಶೇಖರ್ ಎಸ್. ಭಂಡಾರಿ, ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಲತಾ ಜೆ. ಶೆಟ್ಟಿ, ಗಾಯತ್ರಿ ಪರಿವಾರದ ಜಯಲಕ್ಷ್ಮೀ ಹರೀಶ್ ಶೆಟ್ಟಿ, ಮುಲುಂಡ್ ಬಂಟ್ಸ್ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನುತಾ ಶೆಟ್ಟಿ, ಉದ್ಯಮಿ, ಸಮಾಜ ಸೇವಕ ಸಂಜೀವ ಶೆಟ್ಟಿ ಎಕ್ಕಾರು, ಯಕ್ಷಕಲಾ ಸಂಸ್ಥೆ ಜಗದಂಬಾ ಮಂದಿರ ಡೊಂಬಿವಲಿ ಗೌರವ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೋಟ್ಯಾನ್, ಜೈ ಸಿಂಗ್ ಪಾಟೀಲ್, ಸಮಾಜ ಸೇವಕ, ಕಲ್ಯಾಣ್-ಡೊಂಬಿವಲಿ ಮಹಾನಗರ ಪಾಲಿಕೆಯ ನಗರ ಸೇವಕ ವಿನೋದ್ ಕಾಲನ್, ಅನಿತಾ ಭಂಡಾರಿ, ವಿಮಲಾ ವಿ. ಶೆಟ್ಟಿ, ಸಲಹೆಗಾರರಾದ ರಾಜೀವ ಭಂಡಾರಿ, ರಮೇಶ್ ಕುಕ್ಯಾನ್, ಸಂಸ್ಥೆಯ ಕೋಶಾಧಿಕಾರಿ ಸದಾಶಿವ ಸಾಲ್ಯಾನ್, ಮಹಿಳಾಧ್ಯಕ್ಷೆ ಉದಯಾ ಜೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿನೋದ್ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.
ಸಂಸ್ಥೆಯ ಉಪಾಧ್ಯಕ್ಷ ಅಜೆಕಾರು ಜಯ ಶೆಟ್ಟಿ, ವಸಂತ ಸುವರ್ಣ, ಗೌರವ ಪ್ರಧಾನ ಕಾರ್ಯದರ್ಶಿ ದಾಮೋದರ ಸುವರ್ಣ ಹಾಗೂ ಸಂಸ್ಥೆಯ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ
ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ
ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.