ರಾಜ್ಯದಲ್ಲಿ 25,000 ಕಂಪೆನಿಗಳಿಂದ ಉತ್ಪಾದನೆ ಆರಂಭ: ದೇಸಾಯಿ
Team Udayavani, May 14, 2020, 11:04 AM IST
ಸಾಂದರ್ಭಿಕ ಚಿತ್ರ
ಮುಂಬಯಿ: ಕೋವಿಡ್ ಆತಂಕದ ಸಂದರ್ಭದಲ್ಲಿಯೂ ರಾಜ್ಯದ ಆರ್ಥಿಕತೆಯನ್ನು ಸ್ಥಿರವಾಗಿಸುವ ಪ್ರಯತ್ನ ಸರಕಾರ ಮಾಡುತ್ತಿದೆ. ಈ ನಿಟ್ಟಿನಲ್ಲಿ ಕೆಲವು ಭಾಗಗಳಲ್ಲಿ ಕಾರ್ಖಾನೆಗಳನ್ನೂ ಆರಂಭಿಸಲು ಅನುಮತಿಯನ್ನು ನೀಡಲಾಗಿದ್ದು, ಅದರಲ್ಲಿ 25 ಸಾವಿರ ಕಂಪೆನಿಗಳಲ್ಲಿ ಉತ್ಪಾದನೆ ಪ್ರಾರಂಭವಾಗಿದ್ದು, ಈ ಕಂಪೆನಿಗಳಲ್ಲಿ ಸುಮಾರು 6.5 ಲಕ್ಷ ಕಾರ್ಮಿಕರು ಕೆಲಸಕ್ಕೆ ಹಾಜರಾಗಿದ್ದಾರೆ ಎಂದು ಕೈಗಾರಿಕಾ ಸಚಿವ ಸುಭಾಷ್ ದೇಸಾಯಿ ಹೇಳಿದ್ದಾರೆ.
ಕೆಂಪು ವಲಯವನ್ನು ಹೊರತುಪಡಿಸಿ, ರಾಜ್ಯದಲ್ಲಿ ಈವರೆಗೆ 57,745 ಕೈಗಾರಿಕೆಗಳಿಗೆ ಪರವಾನಗಿ ನೀಡಲಾಗಿದ್ದು, ಅದರಲ್ಲಿ 25,000 ಕಂಪೆನಿಗಳು ಉತ್ಪಾದನೆಯನ್ನು ಪ್ರಾರಂಭಿಸಿವೆ. ಇದರಲ್ಲಿ ಸುಮಾರು ಆರೂವರೆ ಲಕ್ಷ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಪಶ್ಚಿಮ ಮಹಾರಾಷ್ಟ್ರದ 9,147 ಕಾರ್ಖಾನೆಗಳಿಗೆ ಪರವಾನಗಿ ನೀಡಲಾಗಿದೆ. ಈ ಪೈಕಿ 5 ಸಾವಿರ 774 ಕಾರ್ಖಾನೆಗಳು ಉತ್ಪಾದನೆಯನ್ನು ಪ್ರಾರಂಭಿಸಿವೆ ಎಂದು ಕೈಗಾರಿಕಾ ಸಚಿವ ದೇಸಾಯಿ ಹೇಳಿದ್ದಾರೆ.
ಪುಣೆಯಲ್ಲಿ ಮರಾಠಾ ಚೇಂಬರ್ಸ್ ಆಫ್ ಕಾಮರ್ಸ್, ಇಂಡಸ್ಟ್ರಿ ಮತ್ತು ಅಗ್ರಿಕಲ್ಚರ್ ಆಯೋಜಿಸಿದ ವೆಬ್‌ನಾರ್‌ನಲ್ಲಿ ಸಚಿವ ಸುಭಾಷ್ ದೇಸಾಯಿ ಅವರು ಮಾತನಾಡಿ, ಮುಂಬಯಿ, ಥಾಣೆ, ಪುಣೆ, ಪಿಂಪ್ರಿ-ಚಿಂಚಾಡ್ ಕೆಂಪು ವಲಯಕ್ಕೆ ಸೇರಿವೆ. ಇಲ್ಲಿ ಉದ್ಯಮವನ್ನು ಪ್ರಾರಂಭಿಸಲು ಅನುಮತಿ ನೀಡಬೇಕೆಂದು ಬೇಡಿಕೆಯು ಮಾಡಲಾಗುತ್ತಿದೆ. ಆದರೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮೇ ಅಂತ್ಯದ ವೇಳೆಗೆ ಮಹಾರಾಷ್ಟ್ರವನ್ನು ಹಸಿರು ವಲಯವನ್ನಾಗಿ ಮಾಡಲು ನಿರ್ಧರಿಸಿದ್ದಾರೆ. ಅಲ್ಲಿಯವರೆಗೆ ಎಲ್ಲರೂ ಸಹಕರಿಸಬೇಕೆಂದು ಹೇಳಿದ್ದಾರೆ.
ಸ್ಥಿರ ವಿದ್ಯುತ್ ಬಿಲ್‌ಗಳ ಕುರಿತು ಇಂಧನ ಸಚಿವರೊಂದಿಗೆ ಸಭೆ ನಡೆಸಿದ್ದೇವೆ ಮತ್ತು ಬಳಸಲಾಗುವಷ್ಟು ವಿದ್ಯುತ್ ಶುಲ್ಕ ವಿಧಿಸಲು ನಿರ್ಧರಿಸಿದ್ದೇವೆ. ಇದಲ್ಲದೆ ಸಾಲದ ಕಂತುಗಳನ್ನು ಮರುಪಾವತಿಸಲು ಸಹ ರಿಯಾಯಿತಿಗಳನ್ನು ಘೋಷಿಸಲಾಗಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸಣ್ಣ ಕೈಗಾರಿಕೆ ಉದ್ಯಮಕ್ಕೆ ಬೆಂಬಲಿಸಲು ಕೇಂದ್ರ ಸರಕಾರ ಶೀಘ್ರದಲ್ಲೇ ಹಣಕಾಸು ಪ್ಯಾಕೇಜ್ ಘೋಷಿಸಲಿದೆ. ಅದಕ್ಕೆ ಸಂಬಂಧಿಸಿದ ಕೆಲಸ ಅಂತಿಮ ಹಂತದಲ್ಲಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಸದಾನಂದ ಗೌಡ ಮತ್ತು ಪೀಯೂಷ್ ಗೋಯಲ್ ಅವರೊಂದಿಗೆ ಚರ್ಚೆ ನಡೆಯುತ್ತಿದೆ. ಇದರ ಹೊರತಾಗಿ ರಾಜ್ಯ ಸರಕಾರ ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ಇತರ ಸೌಲಭ್ಯಗಳನ್ನು ಒದಗಿಸುವ ನೀತಿಯನ್ನು ರೂಪಿಸುತ್ತಿದೆ ಎಂದರು.
ಗಮನಾರ್ಹ ವಿಷಯವೆಂದರೆ ಮಹಾ ರಾಷ್ಟ್ರದಲ್ಲಿ ವಿದೇಶಿ ಹೂಡಿಕೆ ಕುರಿತು ಮಾತುಕತೆ ನಡೆಯುತ್ತಿದೆ. ಯುನೈಟೆಡ್ ಸ್ಟೇಟ್ಸ್, ಇಂಗ್ಲೆಂಡ್, ಜರ್ಮನಿ, ಜಪಾನ್, ತೈವಾನ್ ಮತ್ತು ದಕ್ಷಿಣ ಕೊರಿಯಾದ ಪ್ರತಿನಿಧಿಗಳು ರಾಜ್ಯ ಕೈಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅನೇಕ ದೊಡ್ಡ ಯೋಜನೆಗಳು ಪ್ರಾರಂಭವಾಗುವುದರಿಂದ, ಸಣ್ಣ ಪ್ರಮಾಣದ ಕೈಗಾರಿಕೆ ಉದ್ಯಮಿಗಳು ಸೇವೆಗಳನ್ನು ಒದಗಿಸಲು ಸಿದ್ಧರಾಗಿರಬೇಕು ಎಂದು ಕೈಗಾರಿಕಾ ಸಚಿವ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.