ಆನ್‌ಲೈನ್‌ ಕಲಿಕೆಯಿಂದ ಬೋರ್ಡ್‌ ಪರೀಕ್ಷೆಗಳಿಗೆ ಹಾಜರಾಗಲು ವಿದ್ಯಾರ್ಥಿಗಳ ಹಿಂದೇಟು


Team Udayavani, Feb 14, 2021, 4:56 PM IST

Students hesitate to attend board exams through online learning

ಮುಂಬಯಿ: ಶೈಕ್ಷಣಿಕ ವರ್ಷದ ಸಂಪೂರ್ಣ ಆನ್‌ಲೈನ್‌ ಕಲಿಕೆಯ ಬಳಿಕ ಶೇ. 50.2ರಷ್ಟು ಎಸ್‌ಎಸ್‌ಸಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಗಳಿಗೆ ಹಾಜರಾಗುವ ವಿಶ್ವಾಸವಿಲ್ಲ ಎಂದು ಸಮೀಕ್ಷೆಯೊಂದು ತಿಳಿಸಿದೆ.

ವಾಸ್ತವವಾಗಿ ಶೇ. 68ರಷ್ಟು ವಿದ್ಯಾರ್ಥಿಗಳ ಕಲಿಕೆ ಆನ್‌ಲೈನ್‌ನಲ್ಲಿ ಆಗಿರುವುದರಿಂದ ಪರೀಕ್ಷೆಗಳನ್ನೂ ಆನ್‌ಲೈನ್‌ನಲ್ಲೇ ನಡೆಸಬೇಕು ಎಂದು ನಂಬಿದರೆ, ಶೇ. 80ರಷ್ಟು ವಿದ್ಯಾರ್ಥಿಗಳು ಆಂತರಿಕ ಮೌಲ್ಯಮಾಪನಗಳಲ್ಲಿ ಕನಿಷ್ಠ ಶೇ. 50ರಷ್ಟು ಪಠ್ಯವನ್ನು ಹೊಂದಿರಬೇಕು ಎಂದು ಅಭಿಪ್ರಾಯಪಟ್ಟಿ¨ªಾರೆ. ಈ ಮಧ್ಯೆ ಶೇ. 72ರಷ್ಟು ವಿದ್ಯಾರ್ಥಿಗಳು ತಾವು ಒತ್ತಡಕ್ಕೊಳಗಾಗಿದ್ದು, ಮಾರ್ಗದರ್ಶನ ಮತ್ತು ಸಮಾಲೋಚನೆಯ ಅಗತ್ಯವನ್ನು ತಿಳಿಸಿದ್ದಾರೆ. ಇದಲ್ಲದೆ ಶೇ. 80ರಷ್ಟು ವಿದ್ಯಾರ್ಥಿಗಳು ರಾಜ್ಯ ಮಂಡಳಿ ಒದಗಿಸುವ ಕೌನ್ಸೆಲಿಂಗ್‌ ಸೌಲಭ್ಯದ ಬಗ್ಗೆ ತಿಳಿದಿಲ್ಲ ಎಂಬುದು ಕುರ್ಲಾದ ಶಿಕ್ಷಕರೊಬ್ಬರು ನಡೆಸಿದ ಸಮೀಕ್ಷೆಯಲ್ಲಿ ಬಹಿರಂಗಗೊಂಡಿದೆ.ಆನ್‌ಲೈನ್‌ ಸಮೀಕ್ಷೆಯಲ್ಲಿ ಮುಂಬಯಿ, ಥಾಣೆ, ನವಿ ಮುಂಬಯಿಯಾದ್ಯಂತ 100ಕ್ಕೂ ಹೆಚ್ಚು ಶಾಲೆಗಳಿಂದ 1,050ಕ್ಕೂ ಹೆಚ್ಚು ಎಸ್‌ಎಸ್‌ಸಿ, ಎಚ್‌ಎಸ್‌ಸಿ ವಿದ್ಯಾರ್ಥಿಗಳಿಂದ ಪ್ರತಿಕ್ರಿಯೆ ಸಂಗ್ರಹಿಸಿದೆ. ಶಾಲೆಗಳು ಇನ್ನೂ ತೆರೆ ಯದಿ ರುವ ನಗರಗಳು ಇವು. ಶೇ. 31.8ರಷ್ಟು ವಿದ್ಯಾರ್ಥಿ ಗಳು ಒತ್ತಡದಿಂದ ಬಳಲುತ್ತಿದ್ದು, ಕಲಿಕೆ ಯಲ್ಲಿ ಹಿಂದುಳಿ ಯುವ ಭೀತಿಯೊಂದಿಗೆ ಸಾಂಕ್ರಾ ವಿ ುಕ ರೋಗದ ನಡುವೆ ಆತ್ಮವಿಶ್ವಾಸದ ನಷ್ಟ, ಕುಟುಂಬ ತೊಂದರೆಗಳಿಂದ ವಿದ್ಯಾರ್ಥಿ ಗಳು ಬಳಲುತ್ತಿರುವುದಾಗಿ ಸಮೀಕ್ಷೆಯು ಸೂಚಿಸಿದೆ.

ವಿದ್ಯಾರ್ಥಿಗಳಿಗೆ ವಿಶ್ರಾಂತಿಯ ಅಗತ್ಯವಿದೆ

ವಿದ್ಯಾರ್ಥಿಗಳು ಅನುಭವಿಸುತ್ತಿರುವ ಒತ್ತಡ ವನ್ನು ಸರಕಾರವು ಅರ್ಥಮಾಡಿಕೊಂಡು ಅವರಿಗೆ ಸ್ವಲ್ಪ ವಿಶ್ರಾಂತಿ ನೀಡುವುದು ಸಮೀಕ್ಷೆಯ ಉದ್ದೇಶ ವಾಗಿದೆ. ಈ ಮೂರು ನಗರಗಳ ಮಕ್ಕಳು ಒಂದು ದಿನವೂ ಶಾಲೆಗೆ ಹೋಗಿಲ್ಲ. ಸಾಂಪ್ರದಾಯಿಕ ಮಾದರಿಯಲ್ಲಿ ಅವರು ಬೋರ್ಡ್‌ ಪರೀಕ್ಷೆಗೆ ಹಾಜರಾಗಬೇಕೆಂದು ನಿರೀಕ್ಷಿಸುವುದು ಕಿರುಕುಳ ನೀಡಿದಂತೆ. ಅನೇಕ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಕಲಿಕೆಯಲ್ಲೂ ಹಲವಾರು ಸಮಸ್ಯೆಗಳಿವೆ ಎಂಬುದನ್ನು ಗಮನಿಸುವುದೂ ಮುಖ್ಯವಾಗಿದೆ ಎಂದು ಸಮೀಕ್ಷೆ ನಡೆಸಿದ ಕುರ್ಲಾದ ಗಾಂಧಿ ಬಲ್ಮಂದಿರ್‌ ಶಾಲೆಯ ಇಂಗ್ಲಿಷ್‌ ಶಿಕ್ಷಕ ಜಯವಂತ್‌ ಕುಲಕರ್ಣಿ ತಿಳಿಸಿದ್ದಾರೆ.

ಶೇ. 47ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಎಪ್ರಿಲ್ ಅಥವಾ ಮೇಗೆ ಮುಂದೂಡಿದರೆ ಸಾಲದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದು, ಶೇ. 10.6ರಷ್ಟು ವಿದ್ಯಾರ್ಥಿಗಳು ಮಾತ್ರ ಆನ್‌ಲೈನ್‌ ಕಲಿಕೆ ಪರಿಣಾಮಕಾರಿಯಾಗಿದೆ ಎಂದು ಹೇಳಿ ದ್ದಾರೆ. ಹೆಚ್ಚುವರಿಯಾಗಿ ಶೇ. 65.1ರಷ್ಟು ವಿದ್ಯಾ ರ್ಥಿ ಗಳು ಅಭ್ಯಾಸದ ಕೊರತೆ ಯಿಂದಾಗಿ ಪಠ್ಯವನ್ನು ಪೂರ್ಣಗೊಳಿಸಲು ಸಾಧ್ಯ ವಾಗು  ವುದಿಲ್ಲ ಎಂದು ಭಯಪಡುತ್ತಿದ್ದಾರೆ. ಇನ್ನೂ ಶೇ. 51.2ರಷ್ಟು ವಿದ್ಯಾರ್ಥಿಗಳು ಪಠ್ಯಕ್ರಮದಲ್ಲಿನ ಬದಲಾ ವಣೆಗಳ ಬಗ್ಗೆ ಇನ್ನೂ ಗೊಂದಲದಲ್ಲಿದ್ದಾರೆ.

ಟಾಪ್ ನ್ಯೂಸ್

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. Thumbay Moideen awarded with prestigious Global Visionary NRI Award

ಡಾ. ತುಂಬೆ ಮೊಯ್ದೀನ್ ಅವರಿಗೆ ಪ್ರತಿಷ್ಠಿತ ಗ್ಲೋಬಲ್ ವಿಷನರಿ ಎನ್‌ಆರ್‌ಐ ಪ್ರಶಸ್ತಿ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

ವೈಕುಂಠ ಏಕಾದಶಿ: ಅಮೆರಿಕ ದೇವಸ್ಥಾನದಲ್ಲಿ ಆಚರಣೆಗಳು

ವೈಕುಂಠ ಏಕಾದಶಿ: ಅಮೆರಿಕ ದೇವಸ್ಥಾನದಲ್ಲಿ ಆಚರಣೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.