ಅಧ್ಯಕ್ಷರಾಗಿ ಸುರೇಂದ್ರ ಕುಮಾರ್‌ ಹೆಗ್ಡೆ ಮರು ಆಯ್ಕೆ

Team Udayavani, Dec 28, 2017, 3:13 PM IST

25-Mum06a.jpg

ಮುಂಬಯಿ: ಕನ್ನಡಿಗ ಕಲಾವಿದರ ಪರಿಷತ್‌ ಮಹಾರಾಷ್ಟ್ರ ಇದರ ನೂತನ ಅಧ್ಯಕ್ಷರಾಗಿ ಸಮಾಜ ಸೇವಕ, ಉದ್ಯಮಿ,  ರಂಗಕರ್ಮಿ ಸುರೇಂದ್ರ ಕುಮಾರ್‌ ಹೆಗ್ಡೆ ಅವರು ಪುನರಾಯ್ಕೆಗೊಂಡಿದ್ದಾರೆ.

ಡಿ. 22ರಂದು ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದಲ್ಲಿ ನಡೆದ ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ  ಘಟಕದ 10ನೇ ವಾರ್ಷಿಕ ಮಹಾಸಭೆಯಲ್ಲಿ ಅವರನ್ನು ಸರ್ವಾನುಮತದಿಂದ ಅವಿರೋಧವಾಗಿ ಮರು ನೇಮಿಸಲಾಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುರೇಂದ್ರ ಕುಮಾರ್‌ ಹೆಗ್ಡೆ ಅವರು, ಇಲ್ಲಿ ನೆಲೆಸಿರುವ ಕನ್ನಡಿಗ ಕಲಾವಿದರು ಯಾವುದೇ ಸಂಘ-ಸಂಸ್ಥೆಗಳಲ್ಲಿ ಕಲಾಸೇವೆ ಮಾಡುತ್ತಿದ್ದರೂ ಕೂಡಾ, ಪರಿಷತ್‌ನಲ್ಲಿ ಎಲ್ಲರೂ ಒಂದಾಗಿ ಈ ಸಂಸ್ಥೆಯನ್ನು ಬಲಗೊಳಿಸಲು ಸಹಕಾರ ನೀಡಬೇಕು. ಇದು ಕಲಾವಿದರ  ಶ್ರೇಯೋಭಿವೃದ್ಧಿಗಾಗಿ ಹುಟ್ಟಿಕೊಂಡ ಸಂಸ್ಥೆಯಾಗಿದ್ದು, ಕಲಾವಿದರಿಗಾಗಿ ಅನೇಕ ಯೋಚನೆ-ಯೋಜನೆಗಳು ನಮ್ಮಲ್ಲಿದ್ದು ಎಲ್ಲರ ಸಹಕಾರದ ನಿರೀಕ್ಷೆಯಲ್ಲಿ ನಾವಿದ್ದೇವೆ. ಎಲ್ಲರೂ ಒಗ್ಗಟ್ಟಿನಿಂದ ಇದರಲ್ಲಿ ತೊಡಗಿಸಿಕೊಂಡರೆ, ಯೋಜನೆಗಳು ಸಾಕಾರಗೊಳ್ಳುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ನುಡಿದು, ಈ ಸಂಸ್ಥೆಗೆ ಒಂದು ಸ್ವಂತ ಕಚೇರಿಯ ಅಗತ್ಯವಿದ್ದು, ಆ ಬಗ್ಗೆ ನಾವೆಲ್ಲರೂ ಶ್ರಮಿಸಬೇಕಾದ ಅಗತ್ಯವಿದೆ ಎಂದು ನುಡಿದರು.

ಸಭಿಕರ ಪರವಾಗಿ ಮಾತನಾಡಿದ ಹಿರಿಯ ಸದಸ್ಯ, ಸಮಾಜ ಸೇವಕ ಜಿ. ಟಿ. ಆಚಾರ್ಯ ಅವರು, ಕಲಾವಿದರ ಮಾಹಿತಿ ಪುಸ್ತಕ ಕೈಪಿಡಿಯ ಬಗ್ಗೆ ಮಾಹಿತಿ ನೀಡಿದರು. ಶೀಘ್ರದಲ್ಲೇ ಈ ಬೃಹತ್‌ ಕೈಪಿಡಿಯು ಬಿಡುಗಡೆಗೊಳ್ಳಲಿದ್ದು, ಆದಷ್ಟು ಬೇಗನೆ ಕಲಾವಿದರ ತಮ್ಮ ಹೆಸರು ಮತ್ತು ಪರಿಚಯವನ್ನು ನೀಡಿ ಸಹಕರಿಸಬೇಕು. ಇದು ಭವಿಷ್ಯದಲ್ಲಿ ಎಲ್ಲರಿಗೂ ಪ್ರಯೋಜನಕಾರಿಯಾಗಲಿದೆ ಎಂದರು.

ಹಿರಿಯ ಸಲಹೆಗಾರರಾದ ಸಾಹಿತಿ ಡಾ| ಸುನೀತಾ ಎಂ. ಶೆಟ್ಟಿ ಮಾತನಾಡಿ, ಉತ್ತಮ ಕಲಾವಿದರನ್ನು ಆಯ್ಕೆ ಮಾಡಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸುವ ಕೆಲಸವನ್ನು ಪರಿಷತ್ತು ಮಾಡಬೇಕು. ಈ ನಿಟ್ಟಿನಲ್ಲಿ ಪರಿಷತ್ತಿಗೆ ಎಲ್ಲರ ಸಹಕಾರ, ಪ್ರೋತ್ಸಾಹ ಇರಬೇಕು ಎಂದರು.

ಗೌರವ ಪ್ರಧಾನ ಕಾರ್ಯದರ್ಶಿ ರಾಜು ಶ್ರೀಯಾನ್‌ ಅವರು ವಾರ್ಷಿಕ ವರದಿ ವಾಚಿಸಿದರು. ಇದೇ ಸಂದರ್ಭದಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಉಪಾಧ್ಯಕ್ಷರಾಗಿ  ಕಮಲಾಕ್ಷ ಸರಾಫ್‌ ಮತ್ತು ಅರವಿಂದ ಶೆಟ್ಟಿ ಕೊಜಕ್ಕೊಳಿ, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಬಾಬಾ ಪ್ರಸಾದ್‌ ಅರಸ ಕುತ್ಯಾರ್‌, ಜತೆ ಕಾರ್ಯದರ್ಶಿಯಾಗಿ ಚಂದ್ರಾವತಿ ದೇವಾಡಿಗ, ಗೌರವ ಕೋಶಾಧಿಕಾರಿಯಾಗಿ ಪಿ. ಬಿ. ಚಂದ್ರಹಾಸ್‌, ಜತೆ  ಕೋಶಾಧಿಕಾರಿಯಾಗಿ ನವೀನ್‌ ಶೆಟ್ಟಿ ಇನ್ನಬಾಳಿಕೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ತಾರಾ ಬಂಗೇರ, ಸಂಚಾಲಕಿಯಾಗಿ ಕುಸುಮಾ ಪೂಜಾರಿ ಅವರು ಆಯ್ಕೆಯಾದರು.

ಸಭಿಕರ ಪರವಾಗಿ ಸ್ಥಾಪಕಾಧ್ಯಕ್ಷ ಎಸ್‌. ಟಿ. ವಿಜಯ ಕುಮಾರ್‌, ಜಿ. ಎಸ್‌. ನಾೖಕ್‌, ನಿತ್ಯಾನಂದ ಡಿ. ಕೋಟ್ಯಾನ್‌, ವಾಸುದೇವ ಮಾರ್ನಾಡ್‌, ದಾಮೋದರ ಶೆಟ್ಟಿ ಇರುವೈಲು, ಅರವಿಂದ ಕೊಜಕ್ಕೊಳಿ, ಬಾಬಾ ಪ್ರಸಾದ್‌ ಅರಸ, ದಯಾ ಸಾಗರ್‌ ಚೌಟ, ಕೆ. ಕೆ. ಶೆಟ್ಟಿ ಮೊದಲಾದವರು ಸಂದಭೋìಚಿತವಾಗಿ ಮಾತನಾಡಿ ಸಲಹೆ-ಸೂಚನೆಗಳನ್ನು ನೀಡಿದರು.

ಜತೆ ಕೋಶಾಧಿಕಾರಿ ನವೀನ್‌ ಶೆಟ್ಟಿ ಇನ್ನಬಾಳಿಕೆ ವಂದಿಸಿದರು. ಮಹಾಸಭೆಯ ಅನಂತರ ಸುರೇಂದ್ರ ಕುಮಾರ್‌ ಹೆಗ್ಡೆ, ಅರವಿಂದ ಶೆಟ್ಟಿ ಕೊಜಕ್ಕೊಳಿ, ಜೂಲಿಯೆಟ್‌ ಪೆರೇರಾ ಅವರ ಪ್ರಾಯೋಜಕತ್ವದಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಸಂಸ್ಥೆಯ ಸದಸ್ಯ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.