ಸುರೇಶ್ ಕೋಟ್ಯಾನ್ ವೈದ್ಯಕೀಯ ನೆರವಿಗೆ ಮನವಿ
Team Udayavani, May 7, 2021, 1:21 PM IST
ಮುಂಬಯಿ: ರಸ್ತೆ ಅಪಘಾತಕ್ಕೊಳಗಾಗಿ ನಡೆಯಲಾಗದ ಸ್ಥಿತಿಯಲ್ಲಿರುವ ಸುರೇಶ್ ಬಿ. ಕೋಟ್ಯಾನ್ ಅವರ ಶಸ್ತ್ರಚಿಕಿತ್ಸೆಗೆ ಸಹೃದಯ ದಾನಿಗಳು ನೆರವಾಗುವಂತೆ ಮನವಿ ಮಾಡಲಾಗಿದೆ.
ಇತ್ತೀಚೆಗೆ ಕೆಲಸಕ್ಕೆಂದು ಹೊರಟು ಬಸ್‌ಗಾಗಿ ಕಾಯುತ್ತಿದ¤ ಸಂದರ್ಭ ಅತೀ ವೇಗದಿಂದ ಬಂದ ಬೈಕ್ ಸವಾರನೋರ್ವ ಸುರೇಶ್ ಕೋಟ್ಯಾನ್ ಅವರಿಗೆ ಢಿಕ್ಕಿ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ಅವರನ್ನು ವಿಕ್ರೋಲಿ ಪೂರ್ವದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಇಲ್ಲಿ ಶಸ್ತ್ರಚಿಕಿತ್ಸೆ ವ್ಯವಸ್ಥೆಯಿಲ್ಲದ ಕಾರಣ ಬಳಿಕ ಮುಲುಂಡ್ ಪಶ್ಚಿಮದ ಉಪಾಸಿನಿ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರ ಸಲಹೆಯಂತೆ ಶಸ್ತ್ರಚಿಕಿತ್ಸೆ ನಡೆಯಿತು.
ಆರ್ಥಿಕವಾಗಿ ಹಿಂದುಳಿದ ಇವರ ಕುಟುಂಬವು ಅವರ ಮಿತ್ರರ ಸಹಾಯದಿಂದ ಮೊದಲ ಶಸ್ತ್ರಚಿಕಿತ್ಸೆಗೆ ಈಗಾಗಲೇ ಲಕ್ಷಾಂತರ ರೂ. ಗಳನ್ನು ವ್ಯಯಿಸಿದೆ. ಶಸ್ತ್ರಚಿಕಿತ್ಸೆ ಮಾಡಿದರೂ ಸುರೇಶ್ ಕೋಟ್ಯಾನ್ ನಡೆಯಲಾಗದೆ ಮಲಗಿದ್ದಲ್ಲೇ ಇದ್ದಾರೆ. ಅಪಘಾತದಿಂದ ಅವರ ಬೆನ್ನಿಗೆ ಗಂಭೀರ ಗಾಯವಾಗಿದ್ದು, ವೈದ್ಯರು ಇನ್ನೊಂದು ಶಸ್ತ್ರಚಿಕಿತ್ಸೆಗೆ ಸೂಚಿಸಿದ್ದಾರೆ. ಇದ್ದ ಹಣವನ್ನು ಮೊದಲ ಶಸ್ತ್ರಚಿಕಿತ್ಸೆಗೆ ಖರ್ಚು ಮಾಡಿದ್ದ ಇವರ ಪ್ರಸ್ತುತ ಆರ್ಥಿಕ ಸ್ಥಿತಿ ತೀರಾ ಹದಗೆಟ್ಟಿದೆ.
ಮನೆಯ ಆಧಾರಸ್ತಂಭವಾಗಿದ್ದ ಪತಿಯ ಶಸ್ತ್ರಚಿಕಿತ್ಸೆಗೆ ನೆರವಾಗುವಂತೆ ಸುರೇಶ್ ಕೋಟ್ಯಾನ್ ಅವರ ಪತ್ನಿ ಮಮತಾ ಕೋಟ್ಯಾನ್ ಅವರು ಸಹೃದಯ ದಾನಿಗಳು, ಸಂಘ-ಸಂಸ್ಥೆಗಳ ಮೊರೆ ಹೋಗಿದ್ದಾರೆ. ನೆರವು ನೀಡಲಿಚ್ಛಿಸುವ ದಾನಿಗಳು, ಸಂಘ-ಸಂಸ್ಥೆಗಳು Mamata Suresh Kotian, ICICI Bank, A/c No : 008801016417, IFSC : ICIC0000088, Dombivili East Branch ಇಲ್ಲಿ ಜಮಾ ಮಾಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.