ಥಾಣೆ ಬಂಟ್ಸ್ ಅಸೋಸಿಯೇಶನ್: ಸಂಸ್ಕಾರ ಸೌರಭ ವಿಶೇಷ ಕಾರ್ಯಕ್ರಮ
Team Udayavani, Jul 27, 2018, 4:02 PM IST
ಥಾಣೆ: ಥಾಣೆ ಬಂಟ್ಸ್ ಅಸೋಸಿಯೇಶನ್ ವತಿಯಿಂದ ಸಂಸ್ಕಾರ ಸೌರಭ ಕಾರ್ಯಕ್ರಮವು ಜು. 8 ರಂದು ಅಸೋಸಿಯೇಶನ್‌ನ ಸಭಾಗೃಹದಲ್ಲಿ ಜರಗಿತು. ಥಾಣೆ ಪರಿಸರದ ಪಾಲಕರಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಥಾಣೆ ಬಂಟ್ಸ್‌ನ ಶೈಕ್ಷಣಿಕ ಸಮಿತಿಯ ಅಡಿಯಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಥಾಣೆ ಬಂಟ್Åದ ಅಧ್ಯಕ್ಷ ಕುಶಲ್ ಸಿ. ಭಂಡಾರಿ ಅವರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಲುಂಡ್‌ನ ಪ್ರಸಿದ್ಧ ಮಕ್ಕಳ ತಜ್ಞ, ಮುಲುಂಡ್ ಬಂಟ್ಸ್‌ನ ಮಾಜಿ ಅಧ್ಯಕ್ಷ ಡಾ| ಸತ್ಯಪ್ರಕಾಶ್ ಶೆಟ್ಟಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಉಪನ್ಯಾಸ ನೀಡಿ, ಬದಲಾದ ತಂತ್ರಜ್ಞಾನ ಯುಗದಲ್ಲಿ ಧರ್ಮ, ಭಾಷೆ ಮತ್ತು ಜಾತೀಯ ಅವಶ್ಯಕತೆಯನ್ನು ತಿಳಿಯಬೇಕು. ವಾಟ್ಸಾಪ್, ಫೇಸ್‌ಬುಕ್ ಇತ್ಯಾದಿಗಳಿಂದ ಮಕ್ಕಳ ಮೇಲೆ ಆಗುತ್ತಿರುವ ಪರಿಣಾಮವನ್ನು ಪಾಲಕರಿಗೆ ತಿಳಿಸಿದರು. ನಮ್ಮ ಧರ್ಮ ಭಾಷೆಗಳು ಉಳಿದಾಗ ಮಾತ್ರ ಒಂದು ಸಮಾಜ ಆರೋಗ್ಯಕರ ಸಮಾಜವಾಗಿರಲು ಸಾಧ್ಯ ಎಂದ ಅವರು, ಮಕ್ಕಳ ಆಚಾರ, ವಿಚಾರ, ನಡೆ-ನುಡಿಗಳಲ್ಲಿಯ ಮೌಲ್ಯ, ಕುಟುಂಬದಲ್ಲಿ ಪಾಲಕರ ಪಾತ್ರ ಅತೀ ಮುಖ್ಯ. ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ನೀಡಿದಲ್ಲಿ ಮಾತ್ರ ವೃದ್ಯಾಪ್ಯದಲ್ಲಿ ಪಾಲಕರು ಎದುರಿಸಬಹುದಾದ ಹಲವಾರು ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು. ಪಾಲಕರು ತಮ್ಮ ಮಕ್ಕಳ ವಿಚಾರಶಕ್ತಿ ಆಸಕ್ತಿಗೆ ಅನುಗುಣವಾಗಿ ಭವಿಷ್ಯ ರೂಪಿಸಿಕೊಳ್ಳುವಲ್ಲಿ ಸಹಕರಿಸಬೇಕು. ಅನವಶ್ಯಕವಾಗಿ ಮಕ್ಕಳ ಮೇಲೆ ಒತ್ತಡ ತರದೆ ಪ್ರೀತಿ, ಸೌಹಾರ್ಧಯುತ ಪರಿಸರವನ್ನು ಮನೆಯಲ್ಲಿ ಉಂಟಾಗುವಂತೆ ನೋಡಿಕೊಳ್ಳಬೇಕಾದುದು ಪಾಲಕರ ಕರ್ತವ್ಯ. ಮಕ್ಕಳ ಬಾಲ್ಯಾವಸ್ಥೆಯಿಂದ ಯೌವನಾಸ್ಥೆಗೆ ಕಾಲಿಡುವ ಸಂದರ್ಭದಲ್ಲಿ ಆಗುವ ಕೆಲವೊಂದು ಶಾರೀರಿಕ ಹಾಗೂ ಮಾನಸಿಕ ಬದಲಾವಣೆಗಳನ್ನು ವೈದ್ಯಕೀಯ ನೆಲೆಯಲ್ಲಿ ಪಾಲಕರಿಗೆ ತಿಳಿ ಹೇಳಿ, ಈ ಸಂದರ್ಭದಲ್ಲಿ ಪಾಲಕರು ಸಂಯಮದಿಂದ ವರ್ತಿಸಿ ಅವರನ್ನು ಹತೋಟಿಯಲ್ಲಿಡುವ ಪ್ರಯತ್ನ ಮಾಡಬೇಕು ಎಂದು ನುಡಿದು, ಪಾಲಕರು ಕೇಳಿದ ಹಲವಾರು ಪ್ರಶ್ನೆಗಳಿಗೆ ಸಮರ್ಪಕವಾದ ಉತ್ತರ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕುಶಲ್ ಸಿ. ಭಂಡಾರಿ ಇವರು ಮಾತನಾಡಿ, ಕಾರ್ಯಕ್ರಮವನ್ನು ಆಯೋಜಿಸುವಲ್ಲಿ ಶ್ರಮಿಸಿದ ಸೀತಾರಾಮ್ ಜೆ. ಶೆಟ್ಟಿ ಅವರನ್ನು ಅಭಿನಂದಿಸಿದರು. ನಮ್ಮ ಥಾಣೆ ಬಂಟ್ಸ್ ಜಾತಿ, ಬಾಂಧವರಿಗಾಗಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಪಾಲಕರು ಇದರ ಸದುಪಯೋಗವನ್ನು ಪಡೆಯಬೇಕು. ನಮ್ಮ ಮೂಲ ಉದ್ಧೇಶವೇ ಪರಿಸರದಲ್ಲಿ ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವುದಾಗಿದೆ. ಅದನ್ನು ಯಶಸ್ವಿಯಾಗಿ ನಿರ್ವಹಿಸಲು ಸಹಕಾರ ನೀಡುತ್ತಿರುವ ಎಲ್ಲಾ ದಾನಿಗಳನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಡಾ| ಸತ್ಯಪ್ರಕಾಶ್ ಶೆಟ್ಟಿ ಅವರನ್ನು ಶಾಲು ಹೊದೆಸಿ, ಪುಷ್ಪಗುಚ್ಚವನ್ನಿತ್ತು ಸತ್ಕರಿಸಲಾಯಿತು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ಕೋಶಾಧಿಕಾರಿ ಭಾಸ್ಕರ ಎನ್. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಮತಿ ಕೆ. ಶೆಟ್ಟಿ, ಜತೆ ಕೋಶಾಧಿಕಾರಿ ಅಶೋಕ್ ಎಂ. ಶೆಟ್ಟಿ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷರುಗಳಾದ ಭಾಸ್ಕರ ಎಂ. ಶೆಟ್ಟಿ, ಡಿ. ಜಿ. ಬೋಳಾರ್ ಉಪಸ್ಥಿತರಿದ್ದರು. ಕೋಶಾಧಿಕಾರಿ ಭಾಸ್ಕರ ಎನ್. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸುಮತಿ ಕೆ. ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desiswara: ನ್ಯೂಯಾರ್ಕ್ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ
Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…
Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ
Kannada Alphanbets: “ಕ’ ಕಾರದಲ್ಲಿನ ವಿಶೇಷ: ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ
ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.