ಥಾಣೆಯ ಫ್ಲೈ ಓವರ್ ಬಂದ್
Team Udayavani, Dec 31, 2020, 4:59 PM IST
ಥಾಣೆ: ನಿರ್ಲಕ್ಷ್ಯ ಅಥವಾ ಪಾನ ಮತ್ತರಾಗಿ ವಾಹನ ಚಲಾಯಿಸುವುದರಿಂದ ಉಂಟಾಗುವ ಅಪಘಾತ ಗಳನ್ನು ತಡೆಗಟ್ಟುವ ಉದ್ದೇಶದಿಂದ ಥಾಣೆ ಪೊಲೀಸರು ಹೊಸ ವರ್ಷದ ಸಂಭ್ರಮಾಚರಣೆ ವೇಳೆ ನಗರದ ಹಲವಾರು ಪ್ರಮುಖ ಫ್ಲೈ ಓವರ್ ಗಳನ್ನು ಮುಚ್ಚಲು ನಿರ್ಧರಿಸಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ ರೋಗ ವನ್ನು ದೃಷ್ಟಿಯಲ್ಲಿಟ್ಟುಕೊಂಡು ಗುರುವಾರ ಮತ್ತು ಶುಕ್ರವಾರದ ಮಧ್ಯರಾತ್ರಿಯಲ್ಲಿ ಹೊಸ ವರ್ಷದ ಯಾವುದೇ ಸಾರ್ವಜನಿಕ ಆಚರಣೆಯನ್ನು ನಡೆಸದಂತೆ ಮತ್ತು ಆ ಅವಧಿಯಲ್ಲಿ ಕಟ್ಟಡದ ಟೆರೇಸ್‌ಗಳನ್ನು ಮುಚ್ಚುವಂತೆ ಪೊಲೀಸರು ನಗರದ ವಸತಿ ಸೊಸೈಟಿಗಳಿಗೂ ಸೂಚನೆ ನೀಡಿದ್ದಾರೆ.
ಹೊಸ ವರ್ಷವನ್ನು ಸರಳವಾಗಿ ಆಚರಿಸುವಂತೆ, ಜನರಿಗೆ ಹೊರಗೆ ಹೋಗದಂತೆ ಮತ್ತು ಜನಸಂದಣಿಯನ್ನು ತಪ್ಪಿಸುವಂತೆ ಕೇಳಿಕೊಳ್ಳಲಾಗಿದೆ. ಬಿಗು ಬಂದೋಬಸ್ತ್ ಆಯುಕ್ತಾಲಯದಲ್ಲಿರುವ ಎಲ್ಲ ಡಿಸಿಪಿಗಳು, 17 ಸಹಾಯಕ ಪೊಲೀಸ್ ಆಯುಕ್ತರು (ಎಸಿಪಿಗಳು), 128 ಇನ್ ಸ್ಪೆಕ್ಟರ್‌ಗಳು, 150 ಸಹಾಯಕ ಪೊಲೀಸ್ ಇನ್‌ಸ್ಪೆಕ್ಟರ್‌ಗಳು, 3,500 ಇತರ ಪೊಲೀಸರು, 950 ಮಹಿಳಾ ಪೊಲೀಸ್ ಸಿಬಂದಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕರ್ತವ್ಯದಲ್ಲಿರುತ್ತಾರೆ.
ಇದನ್ನೂ ಓದಿ:ರೂಪಾಂತರಿತ ಕೋವಿಡ್: ವರದಿಯಾಗಿಲ್ಲ
ರಾಜ್ಯ ಮೀಸಲು ಪೊಲೀಸ್ ಪಡೆಯ (ಎಸ್‌ಆರ್‌ಪಿಎಫ್) ಮೂರು ಕಂಪೆನಿಗಳು ಮತ್ತು 300 ಹೋಂ ಗಾರ್ಡ್‌ಗಳನ್ನು ಕೂಡ ನಿಯೋಜಿಸಲಾಗಿದೆ. ಬಾರ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಇತರ ಸ್ಥಳಗಳ ಮೇಲೆ ಪೊಲೀಸರು ನಿಗಾ ಇಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.