ಥಾಣೆ ಶ್ರೀ ಆದಿಶಕ್ತಿ ಕನ್ನಡ ಶಾಲೆಯ 43ನೇ ವಾರ್ಷಿಕೋತ್ಸವ
Team Udayavani, Jan 6, 2018, 4:43 PM IST
ಥಾಣೆ: ನಲ್ವತೂ¾ರು ವರ್ಷಗಳ ಹಿಂದೆ ಒಂದು ಶಿಕ್ಷಣ ಸಂಸ್ಥೆಯನ್ನು ಹುಟ್ಟುಹಾಕಿ, ಈ ಮರಾಠಿ ಮಣ್ಣಿನಲ್ಲಿ ಕನ್ನಡತನವನ್ನು ಉಳಿಸಿ-ಬೆಳೆಸುವ ಸಾಧನಾಯುಕ್ತ ಕೆಲಸವನ್ನು ಮಾಡಿ ತಮ್ಮ ಮಕ್ಕಳಿಗೆ ತವರೂರ ಭಾಷೆ, ಕನ್ನಡ ಅಕ್ಷರವನ್ನು ಬೋಧಿಸುತ್ತಾ ಬಂದಿದ್ದು, ಇಂತಹ ಸಾಧನಾಯುಕ್ತ ಕಾರ್ಯ ಅಭಿನಂದನೀಯವಾಗಿದೆ ಎಂದು ಕಲ್ವಾ ನ್ಯೂ ಇಂಗ್ಲಿಷ್ ಸ್ಕೂಲ್‌ನ ಕಾರ್ಯಾಧ್ಯಕ್ಷ ವಿ. ಎನ್. ಹೆಗ್ಡೆ ಅವರು ನುಡಿದರು.
ಡಿ. 19ರಂದು ಥಾಣೆ ಪಶ್ಚಿಮದ ಕಾಶೀನಾಥ್ ಘಾಣೇಕರ್ ಸಭಾಗೃಹದಲ್ಲಿ ನಡೆದ ಶ್ರೀ ಆದಿಶಕ್ತಿ ಕನ್ನಡ ಸಂಘ ಸಂಚಾಲಕತ್ವದ ಶ್ರೀ ಆದಿಶಕ್ತಿ ಕನ್ನಡ ಶಾಲೆಯ 43 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಸಂಘದ ನಾಡು-ನುಡಿಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಕಂಡಾಗ ಸಂತೋಷವಾಗುತ್ತದೆ. ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಲಿ ಎಂದು ಹಾರೈಸಿದರು.
ಗೌರವ ಅತಿಥಿಯಾಗಿ ಥಾಣೆ ಬಂಟ್ಸ್ ಅಸೋಸಿಯೇಶನ್‌ನ ಅಧ್ಯಕ್ಷ ಕುಶಲ್ ಸಿ. ಭಂಡಾರಿ ಅವರು ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕೃತಿಯ ತಿಳಿವಳಿಕೆಯನ್ನು ಶ್ರೀ ಆದಿಶಕ್ತಿ ಕನ್ನಡ ಶಾಲೆ ಮಾಡುತ್ತಾ ಬಂದಿದೆ ಎನ್ನುವುದಕ್ಕೆ ಶಾಲೆಯ ಪ್ರಗತಿಯೇ ಸಾಕ್ಷಿಯಾಗಿದೆ. ಥಾಣೆ ಬಂಟ್ಸ್ ಈ ಶಾಲೆಗೆ ನಿರಂತರವಾಗಿ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ. ಭವಿಷ್ಯದಲ್ಲಿ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ನಮ್ಮೆಲ್ಲರ ಸಹಕಾರವಿದೆ ಎಂದು ಭರವಸೆ ನೀಡಿದರು.
ಇನ್ನೋರ್ವ ಗೌರವ ಅತಿಥಿ ಮದ್ಭಾರತ ಮಂಡಳಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನ ಅಂಧೇರಿ ಅಧ್ಯಕ್ಷ ಜಗನ್ನಾಥ ಪುತ್ರನ್ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪಾಲಕರು ಪೂರೈಸುವ ಸೌಲಭ್ಯಗಳ ಸದುಪಯೋಗವನ್ನು ಮಾಡಿಕೊಂಡು ಸುಸಂಸ್ಕೃತರಾಗಿ ಬದುಕುವ ಕಲೆಯನ್ನು ಕಲಿತುಕೊಳ್ಳಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಜಾನು ಶೆಟ್ಟಿ ಮೆಮೋರಿಯಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಸೀತಾರಾಮ್ ಶೆಟ್ಟಿ ಮತ್ತು ಶ್ರೀ ಆದಿಶಕ್ತಿ ಕನ್ನಡ ಶಾಲೆಯಲ್ಲಿ ಕಳೆದ 25 ವರ್ಷಗಳಿಂದ ಸಹಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ವೆಂಕಟರಮಣ ಶೆಣೈ ದಂಪತಿಯನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶ್ರೀ ಆದಿಶಕ್ತಿ ಕನ್ನಡ ಸಂಘ ಮತ್ತು ಶಾಲೆಯ ಅಧ್ಯಕ್ಷ ಭಾಸ್ಕರ ಶೆಟ್ಟಿ ಅವರು ಮಾತನಾಡಿ, 43 ವರ್ಷದ ಇತಿಹಾಸಹೊಂದಿರುವ ಶ್ರೀ ಆದಿಶ+ಕ್ತಿ ಕನ್ನಡ ಸಂಘ ಹಾಗೂ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಕಾರಣಕರ್ತರಾದ ಸ್ಥಾಪಕರು, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಶಿಕ್ಷಕವೃಂದದವರು ಹಾಗೂ ಮಹಾನ್ ದಾನಿಗಳ ಶ್ರಮ, ಪ್ರೀತಿ, ವಿಶ್ವಾಸ ಅವಿಸ್ಮರಣೀಯವಾಗಿದೆ. ಈ ಶಾಲೆಯು ಮುಂದಿನ ದಿನಗಳಲ್ಲೂ ಶತಪ್ರತಿಶತ ಫಲಿತಾಂಶ ಪಡೆದು ದೊಡ್ಡ ಶಿಕ್ಷಣ ಸಂಸ್ಥೆಯಾಗಿ ಬೆಳಗಲಿ ಎಂದು ಶುಭಹಾರೈಸಿದರು.
ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರವೀಂದ್ರ ಬಿ. ಅವರು ಸ್ವಾಗತಿಸಿದರು. ಮಾಧ್ಯಮಿಕ ಶಾಲಾ ಮುಖ್ಯ ಶಿಕ್ಷಕಿ ವಿಮಲಾ ಕರ್ಕೇರ ಅವರು ಶಾಲಾ ವಾರ್ಷಿಕ ವರದಿಯನ್ನು ಮಂಡಿಸಿದರು.
ಅತಿಥಿ-ಗಣ್ಯರುಗಳನ್ನು ಸಹಶಿಕ್ಷಕರುಗಳಾದ ಸುಜಯ ಜೈನ್, ನಳಿನಾಕ್ಷೀ ಸಂತೋಷ್ ದೊಡ್ಮನೆ, ಶರ್ಮಿಳಾ ಶೆಟ್ಟಿ ಅವರು ಪರಿಚಯಿಸಿದರು.
ಶಾಲಿನಿ ಶೆಟ್ಟಿ ಮತ್ತು ಪ್ರಕಾಶ್ ಚಿಂತಾಮಣಿ ಅವರು ವಾಚಿಸಿದರು.
2017-2018 ನೇ ಶೈಕ್ಷಣಿಕ ಸಾಲಿನ ವಿಭಾಗದಲ್ಲಿ ಸಾಧನೆಗೈದ ಶಾಲಾ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು. ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು. ಸುಜಯಾ ಜೈನ್ ಮತ್ತು ಮಮತಾ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು.
ಸಮಾರಂಭದ ವೇದಿಕೆಯಲ್ಲಿ ಶ್ರೀ ಆದಿಶಕ್ತಿ ಕನ್ನಡ ಸಂಘದ ಗೌರವ ಕಾರ್ಯದರ್ಶಿ ವಾದಿರಾಜ್ ಶೆಟ್ಟಿ, ಕೋಶಾಧಿಕಾರಿ ಮನೋಹರ ಅಂಚನ್, ಜತೆ ಕಾರ್ಯದರ್ಶಿ ಹರೀಶ್ ಎಂ. ಶೆಟ್ಟಿ, ಜತೆ ಕೋಶಾಧಿಕಾರಿ ಏಕನಾಥ್ ಕುಂದರ್ ಅವರು ಉಪಸ್ಥಿತರಿದ್ದರು. ಸಂಪೂರ್ಣ ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿ ಪ್ರಮೋದಾ ಮಾಡಾ ಅವರು ನಿರ್ವಹಿಸಿದರು. ಅತಿಥಿಗಳ ಯಾದಿಯನ್ನು ಆಶಾ ಶೆಟ್ಟಿ ಓದಿದರು. ಸಹಶಿಕ್ಷಕಿ ಪುಷ್ಪಾ ಕುಂಬಳೆ ವಂದಿಸಿದರು.
ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.