ಥಾಣೆ ಶ್ರೀ ಆದಿಶಕ್ತಿ ಕನ್ನಡ ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ
Team Udayavani, Sep 4, 2018, 4:45 PM IST
ಥಾಣೆ: ಶ್ರೀ ಆದಿಶಕ್ತಿ ಕನ್ನಡ ಸಂಘ ಸಂಚಾಲಿತ ಶ್ರೀ ಆದಿಶಕ್ತಿ ಕನ್ನಡ ಶಾಲೆಯಲ್ಲಿ 72ನೇ ಸ್ವಾತಂತ್ರÂ ದಿನಾಚರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಆ. 15ರಂದು ಶಾಲಾ ಸಭಾಂಗಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಆದಿಶಕ್ತಿ ಕನ್ನಡ ಸಂಘ ಹಾಗೂ ಶಾಲೆಯ ಅಧ್ಯಕ್ಷ ಭಾಸ್ಕರ ಎಂ. ಶೆಟ್ಟಿ ಅವರು, ಸ್ವಾತಂತ್ರÂ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸಿ, ಇಂದಿನ ವಿದ್ಯಾರ್ಥಿಗಳು ತಮ್ಮ ಪ್ರತಿಯೊಂದು ಕರ್ತವ್ಯವನ್ನು ಪ್ರಾಮಾಣಿಕವಾಗಿ ಮಾಡಿದಾಗ ದೇಶವು ಸಮೃದ್ಧಿಯಾಗಿ ನಾವು ದೇಶ ಸೇವೆಗೆ ಹೆಗಲು ಕೊಟ್ಟಂತಾಗುತ್ತದೆ ಎಂದು ನುಡಿದರು.
ಗೌರವ ಅತಿಥಿಯಾಗಿ ಪಾಲ್ಗೊಂಡ ಉದಯ ಜೆ. ಶೆಟ್ಟಿ ಅವರು ಮಾತನಾಡಿ, ನಮ್ಮ ದೇಶವನ್ನು ರಕ್ಷಿಸುವಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸೈನಿಕರು ನಮ್ಮ ದೇಶದ ನಿಜವಾದ ನಾಯಕರು. ಅವರಿಗೆ ನಾವೆಲ್ಲರೂ ಸಹಕರಿಸಬೇಕು ಎಂದರು.
ಮತ್ತೋರ್ವ ಮುಖ್ಯ ಅತಿಥಿ, ಹೊಟೇಲ್ ಉದ್ಯಮಿ ರಾಘವ ಶೆಟ್ಟಿ ಅವರು ಮಾತನಾಡಿ, ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ತಮ್ಮ ಮಾಧ್ಯಮದ ಬಗ್ಗೆ ಕೀಳರಿಮೆ ತೋರದೆ ಮಾತೃಭಾಷೆಯಲ್ಲೇ ಕಲಿತು ಸಮಾಜದಲ್ಲಿ ದೊಡ್ಡ ವ್ಯಕ್ತಿಗಳಾಗಿ ಗುರುತಿಸಿಕೊಂಡರೆ ಅದೊಂದು ದೊಡ್ಡ ಸಾಧನೆಯಾಗಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿ ಶುಭಹಾರೈಸಿದರು.
ಸಂಘದ ಮಾಜಿ ಅಧ್ಯಕ್ಷ ಜಯರಾಮ ಜಿ. ಶೆಟ್ಟಿ ಅವರು ಮಾತನಾಡಿ, ದೇಶದಲ್ಲಿಯ ರಾಜಕಾರಣಿಗಳ ಭ್ರಷ್ಟಾಚಾರವನ್ನು ನಿರ್ಮೂಲನಗೊಳಿಸಿ ಬಡ ಮಕ್ಕಳಿಗೆ ಉತ್ತಮ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟು ದೇಶದ ಪ್ರಗತಿಯನ್ನು ಸಾಧಿಸುವಲ್ಲಿ ಎಲ್ಲರು ಸಹಕರಿಸಬೇಕು ಎಂದರು.
ಇನ್ನೋರ್ವ ಮಾಜಿ ಅಧ್ಯಕ್ಷ ಶಂಕರ್ ಶೆಟ್ಟಿ ಅವರು ಮಾತನಾಡಿ, ನಮ್ಮ ದೇಶದ ಬಗ್ಗೆ ಅಭಿಮಾನ ವ್ಯಕ್ತಪಡಿಸಿ, ಪ್ರತಿಯೋರ್ವ ಪ್ರಜೆ ತಮ್ಮ ಕರ್ತವ್ಯವನ್ನು ಅರಿತುಕೊಂಡು ದೇಶಕ್ಕಾಗಿ ಸತ್ಯ, ನಿಷ್ಠೆಯಿಂದ ದುಡಿಯಬೇಕು ಎಂದರು. ಸಂಘದ ರಮಾನಾಥ ಐಲ್ ಅವರು ಮಾತನಾಡಿ ಶುಭಹಾರೈಸಿದರು.
ಶಾಲೆಯ ಮಾಧ್ಯಮಿಕ ವಿಭಾಗದ ಮುಖ್ಯ ಶಿಕ್ಷಕಿ ವಿಮಲಾ ಕರ್ಕೇರ ಸ್ವಾಗತಿಸಿದರು. ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳನ್ನು ಗೌರವಿಸಲಾಯಿತು. ಮಾಧ್ಯಮಿಕ ವಿಭಾಗದ ಸಹ ಶಿಕ್ಷಕ ಸಂತೋಷ್ ದೊಡ್ಮನಿ, ಮಮತಾ ಶೆಟ್ಟಿ ಅವರು ಅತಿಥಿಗಳನ್ನು ಪರಿಚಯಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಡೇನಿಯಲ್ ಲಸ್ರಾದೋ, ಕಿಶೋರ್ ರಾವಲ್, ದೇವರಾಜ್ ಭೋಯಿರ್, ಪದ್ಮನಾಭ ಶೆಟ್ಟಿ, ಸೀತಾರಾಮ ಶೆಟ್ಟಿ, ಚಂದ್ರಕಾಂತ್ ನಾಮ್‌ದಾಸ್ ಅವರು ಮಕ್ಕಳಿಗೆ ಸಿಹಿತಿಂಡಿ ವಿತರಿಸಿದರು. ವೇದಿಕೆಯಲ್ಲಿ ಸಂಘದ ಕಾರ್ಯದರ್ಶಿ ವಾದಿರಾಜ್ ಶೆಟ್ಟಿ, ಕೋಶಾಧಿಕಾರಿ ಮನೋಹರ್ ಅಂಚನ್, ಜತೆ ಕಾರ್ಯದರ್ಶಿ ಹರೀಶ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರವೀಂದ್ರ ಬಿ. ಉಪಸ್ಥಿತರಿದ್ದರು. ಶಾಲಾ ಮಾಧ್ಯಮಿಕ ವಿಭಾಗದ ಸಹ ಶಿಕ್ಷಕಿ ಪ್ರಮೋದಾ ಎಸ್. ಮಾಡಾ ಕಾರ್ಯಕ್ರಮವನ್ನು ನಿರ್ವಹಿಸಿದರು. ಸಂತೋಷ್ ದೊಡ್ಮನಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.