ಥಾಣೆ ಸ್ತ್ರೀ ಶಕ್ತಿ ಮಹಿಳಾ ಮಂಡಳಿ: ಉಚಿತ ಪುಸ್ತಕ ವಿತರಣೆ
Team Udayavani, Jun 26, 2018, 4:27 PM IST
ಥಾಣೆ: ಸ್ತ್ರೀ ಶಕ್ತಿ ಮಹಿಳಾ ಮಂಡಳಿ ಥಾಣೆ ವತಿಯಿಂದ ಪರಿಸರದ ತುಳು-ಕನ್ನಡಿಗರ ಹಾಗೂ ಇತರ ಭಾಷಿಗರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವು ಜೂ. 16 ರಂದು ಸಂಸ್ಥೆಯ ಕಚೇರಿಯಲ್ಲಿ ನಡೆಯಿತು.
ಸಂಸ್ಥೆಯ ಅಧ್ಯಕ್ಷೆ ಉಷಾ ಪಿ. ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ ನಿಶಾ ಕಪೂರ್ ಮತ್ತು ಅಮಣಿ ಅಮೀನ್ ಅವರು ದೀಪಪ್ರಜ್ವಲಿಸುವುದರ ಮೂಲಕ ಚಾಲನೆ ನೀಡಿದರು. ವೇದಾ ವಿ. ಶೆಟ್ಟಿ ಅವರು ಪ್ರಾರ್ಥನೆಗೈದರು.
ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಅಧ್ಯಕ್ಷೆ ಉಷಾ ಪಿ. ಹೆಗ್ಡೆ ಅವರು, ಇಂದು ನೀಡುವ ಪಡೆಯುತ್ತಿರುವ ಪುಸ್ತಕದಿಂದ ಕಲಿತು ದೊಡ್ಡವರಾಗಿ ಒಳ್ಳೆಯ ಆದರ್ಶ ಪ್ರಜೆಗಳಾಗಿ ಬಾಳಿ ಮುಂದಿನ ದಿನಗಳಲ್ಲಿ ಸಹಾಯ ಪಡೆದ ಮಕ್ಕಳೂ ಕೂಡಾ ಇಂತಹ ಸಮಾಜಮುಖೀ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ನುಡಿದು ಶುಭಹಾರೈಸಿದರು.
ಸಂಘದ ಕಾರ್ಯವೈಖರಿಯನ್ನು ಕಂಡು ಅತಿಥಿಗಣ್ಯರು ಶ್ಲಾಘಿಸಿದರು. ಮಹಿಳೆಯರಿಂದಲೇ ನಡೆಸಲ್ಪಡುವ ಈ ಸಂಸ್ಥೆಯು ಇನ್ನೂ ಒಳ್ಳೆಯ ಕಾರ್ಯಗಳನ್ನು ನಿರಂತರವಾಗಿ ಮಾಡುವಂತಾಗಲಿ ಎಂದು ಹಾರೈಸಿದರು.
ಸಂಸ್ಥೆಯ ಸದಸ್ಯೆಯರುಗಳಾದ ಲಲಿತಾ ಗೌಡ, ಪೂರ್ಣಿಮಾ ಅಮೀನ್, ಸುಕನ್ಯಾ ಶೆಟ್ಟಿ, ಪ್ರೇಮಾ ಶೆಟ್ಟಿ, ವೇದಾ ಶೆಟ್ಟಿ, ಸುಗಂಧಿ ಸಾಲ್ಯಾನ್, ಉಷಾ ಶೆಟ್ಟಿ ಹಾಗೂ ಪಾಲಕರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಲಘು ಉಪಾಹಾರದೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.