ಕುಲಾಲ ಸಂಘ ಮುಂಬಯಿ ಇದರ 88 ನೇ ವಾರ್ಷಿಕ ಮಹಾಸಭೆ
Team Udayavani, Oct 31, 2018, 1:23 PM IST
ಮುಂಬಯಿ: ನಗರದ ಹಿರಿಯ ಜಾತೀಯ ಸಂಸ್ಥೆಗಳಲ್ಲಿ ಒಂದಾಗಿರುವ ಕುಲಾಲ ಸಂಘ ಮುಂಬಯಿ ಇದರ 88 ನೇ ವಾರ್ಷಿಕ ಮಹಾಸಭೆಯು ಅ. 28 ರಂದು ವಡಾಲದ ಎನ್‌ಕೆಇಎಸ್ ಶಿಕ್ಷಣ ಸಂಸ್ಥೆಯ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ಕುಲಾಲ ಸಂಘ ಮುಂಬಯಿ ಅಧ್ಯಕ್ಷ ಪಿ. ದೇವದಾಸ್ ಎಲ್. ಕುಲಾಲ್ ಅವರು ಮಹಾಸಭೆಗೆ ಚಾಲನೆ ನೀಡಿ ಮಾತನಾಡಿ, ಸಂಘದ ಪ್ರತಿಯೊಂದು ಸಮಾಜಪರ ಕಾರ್ಯಗಳನ್ನು ಸಮಾಜ ಬಾಂಧವರ ಮನೆ-ಮನಗಳಿಗೆ ತಲುಪಿಸುವಲ್ಲಿ ಸ್ಥಳೀಯ ಸಮಿತಿಗಳ ಪಾತ್ರ ಮಹತ್ತರವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಸಮಿತಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಹಿರಿಯರು ಕಟ್ಟಿದ ಈ ಸಂಸ್ಥೆಯನ್ನು ಹಿರಿಯರ ಮಾರ್ಗದರ್ಶನದೊಂದಿಗೆ ಅರ್ಥಪೂರ್ಣವಾಗಿ ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ. ಸಮಿತಿಯ ಪ್ರತಿಯೋರ್ವ ಸದಸ್ಯರು ಸಂಘದ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಮಂಗಳೂರಿನಲ್ಲಿ ಕುಲಾಲ ಭವನದ ಕಾರ್ಯವು ಶೀಘ್ರ ಗತಿಯಲ್ಲಿ ನಡೆಯುತ್ತಿದ್ದು, ಒಂದು ವರ್ಷದೊಳಗೆ ಲೋಕಾರ್ಪಣೆಗೊಳಿಸುವ ಯೋಜನೆಯನ್ನು ಹೊಂದಿದ್ದೇವೆ. ಈ ಬೃಹತ್ ಯೋಜನೆಗೆ ಸಮಾಜ ಬಾಂಧವರು ಒಮ್ಮತದಿಂದ ಸಹಕರಿಸಬೇಕು. ನಮ್ಮ ಸಂಸ್ಥೆಯು ನಮ್ಮ ಮನೆಯಿದ್ದಂತೆ. ಇದರ ಅಭಿವೃದ್ಧಿಗೆ ಎಲ್ಲರ ಅಗತ್ಯತೆಯಿದ್ದು, ಒಮ್ಮತ ಹಾಗೂ ಒಗ್ಗಟ್ಟಿನಿಂದ ಸಂಘವನ್ನು ಅಭಿವೃದ್ಧಿಯತ್ತ ಕೊಂಡೊಯ್ಯೋಣ ಎಂದು ನುಡಿದರು.
ಕುಲಾಲ ಸಂಘ ಮುಂಬಯಿ ಗೌರವ ಪ್ರಧಾನ ಕಾರ್ಯದರ್ಶಿ ಕರುಣಾಕರ ಸಾಲ್ಯಾನ್ ಅವರು ವಾರ್ಷಿಕ ವರದಿ ಮತ್ತು ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿ ಅನುಮೋದಿಸಿಕೊಂಡರು. ಲೆಕ್ಕ ಪರಿಶೋಧಕರನ್ನಾಗಿ ಆರ್. ಕೆ. ಕಾರಂತ್ ಆ್ಯಂಡ್ ಕಂಪೆನಿಯನ್ನು ಮರು ನೇಮಿಸಲಾಯಿತು. ಮಹಾಸಭೆಯಲ್ಲಿ ಸಂಘದ ಬೆಳವಣಿಗೆಗೆ ಹಾಗೂ ಸಮಾಜದಲ್ಲಿ ವಿಶೇಷ ಸಾಧನೆಗೈದ ಜಾನಕಿ ವಿಠಲ್ ಮೂಲ್ಯ ಸಯಾನ್, ರಾಜೇಶ್ವರಿ ನಾರಾಯಣ ನೇತ್ರಕರೆ ಪನ್ವೇಲ್, ಕೇಶವ ಕೆ. ಮೂಲ್ಯ ವಸಾಯಿ ಅವರನ್ನು ಸಮ್ಮಾನಿಸಲಾಯಿತು.
ರಾಷ್ಟ್ರಪತಿ ಸುವರ್ಣ ಪದಕ ವಿಜೇತರಾದ ಡಾ| ಕೃಷ್ಣರಾಜ್ ಕೆ. ಮೂಲ್ಯ ಹಾಗೂ ಸುಮಿತ್ರಾರಾಜು ಅವರನ್ನು ಗೌರವಿಸಲಾಯಿತು. ದಿ| ಪಿ. ಜಿ. ಮೂಲ್ಯ ರೋಲಿಂಗ್ ಕಪ್‌ನ್ನು ಚಂದ್ರಹಾಸ ಮೂಲ್ಯ ಮೀರಾರೋಡ್, ಕುಲಾಲ ಕಣ್ಮಣಿ ದಿ| ಪಿ. ಕೆ. ಸಾಲ್ಯಾನ್ ಚಲಿತ ಫಲಕವನ್ನು ಆನಂದ ಕುಲಾಲ್ ಜೋಗೇಶ್ವರಿ ಅವರಿಗೆ ಪ್ರದಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಿಸಲಾಯಿತು. ಪೋಷಕರನ್ನು ಗುರುತಿಸಿ ಸಮ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಅಮೂಲ್ಯ ತ್ತೈಮಾಸಿಕದ 20 ನೇ ಹುಟ್ಟುಹಬ್ಬದ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯದರ್ಶಿ ಕರುಣಾಕರ ಸಾಲ್ಯಾನ್ ಕಾರ್ಯಕ್ರಮ ನಿರ್ವಹಿಸಿದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ರಾಘು ಎ. ಮೂಲ್ಯ, ಜತೆ ಕಾರ್ಯದರ್ಶಿಗಳಾದ ಬಿ. ಅಣ್ಣಿ ಮೂಲ್ಯ, ರಾಘು ಬಿ. ಮೂಲ್ಯ, ಕೋಶಾಧಿಕಾರಿ ಜಯ ಎಸ್. ಅಂಚನ್ ಮತ್ತು ಜತೆ ಕೋಶಾಧಿಕಾರಿ ಸುನೀಲ್ ಕೆ. ಕುಲಾಲ್ ಅವರು ಉಪಸ್ಥಿತರಿದ್ದರು. ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಗಿರೀಶ್ ಬಿ. ಸಾಲ್ಯಾನ್, ಡೊಂಬಯ್ಯ ಐ. ಮೂಲ್ಯ, ಕೆ. ಗೋಪಾಲ್ ಬಂಗೇರ, ಶಂಕರ ವೈ. ಮೂಲ್ಯ, ಪಿ. ಶೇಖರ್ ಮೂಲ್ಯ, ಚಂದ್ರಹಾಸ ಎನ್. ಸಾಲ್ಯಾನ್, ಉಮೇಶ್ ಎಂ. ಬಂಗೇರ, ಮಮತಾ ಎಸ್. ಗುಜರನ್, ಸೀನ ಎಂ. ಮೂಲ್ಯ, ಸುರೇಶ್ ಕೆ. ಕುಲಾಲ್, ಆನಂದ ಕೆ. ಕುಲಾಲ್, ಆಶೀಷ್ ವಿ. ಕರ್ಕೇರ, ಆನಂದ ಬಿ. ಮೂಲ್ಯ, ಜೈರಾಜ್ ಪಿ. ಸಾಲ್ಯಾನ್, ಗಣೇಶ್ ಬಿ. ಸಾಲ್ಯಾನ್, ಸುಂದರ ಎನ್. ಮೂಲ್ಯ, ಸಂಜೀವ ಎನ್. ಬಂಗೇರ, ಪುಷ್ಪಲತಾ ವಿ. ಸಾಲ್ಯಾನ್ ಅವರು ಉಪಸ್ಥಿತರಿದ್ದರು.
ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಆನಂದ ಕೆ. ಕುಲಾಲ್, ಸದಸ್ಯತ್ವ ನೋಂದಣಿ ಸಮಿತಿಯ ಕಾರ್ಯಾಧ್ಯಕ್ಷ ಪಿ. ಶೇಖರ್ ಮೂಲ್ಯ, ವಿದ್ಯಾರ್ಥಿ ಕೌನ್ಸಿಲ್ ಸಮಿತಿಯ ಕಾರ್ಯಾಧ್ಯಕ್ಷ ಉಮೇಶ್ ಎಂ. ಬಂಗೇರ, ಆರೋಗ್ಯ ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್ ಕೆ. ಕುಲಾಲ್, ಧಾರ್ಮಿಕ ಸಮಿತಿಯ ಕಾರ್ಯಾಧ್ಯಕ್ಷ ಸೀನ ಜಿ. ಮೂಲ್ಯ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಮತಾ ಎಸ್. ಗುಜರನ್, ಪ್ರಾಪರ್ಟಿ ಸಮಿತಿಯ ಕಾರ್ಯಾಧ್ಯಕ್ಷ ಕೆ. ಗೋಪಾಲ್ ಬಂಗೇರ, ಕಟ್ಟಡ ಸಮಿತಿಯ ಕಾರ್ಯಾಧ್ಯಕ್ಷ ಗಿರೀಶ್ ಬಿ. ಸಾಲ್ಯಾನ್, ಮೀರಾರೋಡ್-ವಿರಾರ್ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಸುಂದರ ಮೂಲ್ಯ, ಥಾಣೆ-ಭಿವಂಡಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಡೊಂಬಯ್ಯ ಐ. ಮೂಲ್ಯ, ನವಿಮುಂಬಯಿ ಸಮಿತಿಯ ಕಾರ್ಯಾಧ್ಯಕ್ಷ ವಾಸು ಎಸ್. ಬಂಗೇರ, ಚರ್ಚ್‌ಗೇಟ್-ದಹಿಸರ್ ಸಮಿತಿಯ ಕಾರ್ಯಾಧ್ಯಕ್ಷ ಗಣೇಶ್ ಬಿ. ಸಾಲ್ಯಾನ್, ಸಿಎಸ್‌ಟಿ-ಮಾನ್‌ಖುರ್ಡ್ ಸಮಿತಿಯ ಕಾರ್ಯಾಧ್ಯಕ್ಷ ಶೇಖರ್ ಬಿ. ಮೂಲ್ಯ, ಮಂಗಳೂರು ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ ಬಂಗೇರ ಹಾಗೂ ಅಮೂಲ್ಯ ತ್ತೈಮಾಸಿಕದ ಸಂಪಾದಕ ಶಂಕರ್ ವೈ. ಮೂಲ್ಯ, ಇತರ ಸದಸ್ಯ ಬಾಂಧವರು ಉಪಸ್ಥಿತರಿದ್ದರು.
ಚಿತ್ರ-ವರದಿ : ಸುಭಾಶ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.