ಸಮಿತಿಯ ಸಮಾಜಪರ ಕಾರ್ಯಗಳಿಗೆ ಎಲ್ಲರ ಸಹಕಾರ ಅಗತ್ಯ: ಪ್ರದೀಪ್ ಶೆಟ್ಟಿ
Team Udayavani, Sep 27, 2019, 6:20 PM IST
ಮುಂಬಯಿ, ಸೆ. 26: ಸಾಯಿ ಬಾಬಾ ಪೂಜಾ ಸಮಿತಿಯ ವತಿಯಿಂದ ನಡೆಯುತ್ತಿರುವ ಅಬಲೆಹಾಗೂ ಆರ್ಥಿಕವಾಗಿ ಹಿಂದುಳಿದ ಮಹಿಳೆಯರ ಹೊಲಿಗೆ ತರಬೇತಿ ಕೇಂದ್ರದ ಪ್ರಸಕ್ತ ಸಾಲಿನ ಅರ್ಹತಾ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮವು ಸೆ. 15ರಂದು ಬೊರಿವಲಿ ಪೂರ್ವದ ಚುಕ್ಕುವಾಡಿಯ ಭೂಷಣ್‌ಪಾರ್ಕ್ ಸಂಕೀರ್ಣದಲ್ಲಿರುವ ಸಮಿತಿ ಕಚೇರಿಯ ಆವರಣದಲ್ಲಿ ಜರಗಿತು.
ಸಮಾರಂಭದ ಮುಖ್ಯ ಅತಿಥಿಯಾಗಿ ಬೊರಿವಲಿ ಜಯರಾಜ್ ನಗರದ ಮಹಿಷ ಮರ್ದಿನಿ ಮಂದಿರದ ಆಡಳಿತ ಟ್ರಸ್ಟಿ ಪ್ರದೀಪ್ ಸಿ. ಶೆಟ್ಟಿಯವರ ಆಗಮಿಸಿ ಅರ್ಹತಾ ಪ್ರಯಾಣ ಪತ್ರ ಹಾಗೂ ಹೊಲಿಗೆ ಯಂತ್ರವನ್ನು ಮಹಿಳೆಯರಿಗೆ ವಿತರಿಸಿದರು. ಈ ವೇಳೆ ಸಂಸ್ಥೆಯ ಬಗ್ಗೆ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ಧಾರ್ಮಿಕ, ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದ ಮೂಲಕ ಸಮಾಜ ಸೇವೆ ಮಾಡುತ್ತಿರುವ ಈ ಸಂಸ್ಥೆಯು ಸುವರ್ಣ ಮಹೋತ್ಸವಕ್ಕೆ ಅಣಿಯಾಗಿ ನಿಂತಿರುವುದು ಸಂತಸದ ವಿಷಯ. ಸಾಯಿಯ ಅಪಾರ ಆಶೀರ್ವಾದದಿಂದ ಸದಸ್ಯರು ನಿಸ್ವಾರ್ಥ ಸೇವೆ ಸಲ್ಲಿಸುತ್ತಾ ಬಂದಿ ದ್ದಾರೆ. ಸಮಿತಿಯ ಮಂದಿರವನ್ನು ಮಹಾನಗರ ಪಾಲಿಕೆ ಕೆಡವಿದರೂ ಸಮಿತಿಯು ಯಾವುದೇ ಲೋಪ ದೋಷವಿಲ್ಲದೆ ಮುನ್ನಡೆಸುತ್ತಿರುವುದು ಅಭಿಮಾನದ ಸಂಗತಿಯಾಗಿದೆ. ಇಂತಹ ಸಂಸ್ಥೆಯ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ ಸದಾಯಿರಲಿ ಎಂದು ನುಡಿದು ಸದಸ್ಯರೆಲ್ಲರೂ ಅಭಿನಂದನೆಗೆ ಅರ್ಹರು ಎಂದರು.
ಅತಿಥಿ ಅವರನ್ನು ಶಾಲು, ಫಲಪುಷ್ಪ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಅಧ್ಯಕ್ಷ ಮಾಧವ ಎನ್. ಹೆಗ್ಡೆ ಗೌರವಿಸಿದರು. ಕೋಶಾಧಿಕಾರಿ ರವಿ ಡಿ. ಶೇಣವ ವಂದಿಸಿದರು. ಕಾರ್ಯಕ್ರಮವನ್ನು ಗೌರವ ಕಾರ್ಯದರ್ಶಿ ಪ್ರೊ| ಕೆ. ಎಚ್ ಕರ್ಕೇರ ನಿರೂಪಿಸಿ ಸಂಸ್ಥೆಯ ಬಗ್ಗೆ ವಿವರಿಸಿದರು. ಉಪಾಧ್ಯಕ್ಷ ಜಯ ಎಸ್. ಶೆಟ್ಟಿ , ಜತೆ ಕಾರ್ಯದರ್ಶಿ ಮಿಜಾರ್ ರಮೇಶ್ ಬಿ. ಶೆಟ್ಟಿ, ಜತೆ ಕೋಶಾಧಿಕಾರಿ ಬಿ. ಎಂ. ಶೆಟ್ಟಿ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಅನಂತರ ಸಮಿತಿಯ 25ನೇ ವಾರ್ಷಿಕ ಮಹಾಸಭೆಯು ಅಧ್ಯಕ್ಷ ಮಾಧವ ಎಸ್. ಶೆಟ್ಟಿಯವರಅಧ್ಯಕ್ಷತೆಯಲ್ಲಿ ಜರಗಿತು.
ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರವನ್ನು ಮಂಡಿಸಲಾಯಿತು. ಈ ವರ್ಷ 49ನೇ ವಾರ್ಷಿಕ ಮಹಾಪೂಜೆಯನ್ನು ಅ. 27ರಂದು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಯಿತು. ಹಾಗೂ 2020ನೇ ಸಾಲಿನ ಸುವರ್ಣ ಮಹೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ವೈದ್ಯಕೀಯ ಸೇವೆಯನ್ನು ಆಯೋಜಿಸಲು ನಿರ್ಧರಿಸಲಾಯಿತು. ಸದಸ್ಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.