ಕನ್ನಡ ಸೇವಾ ಸಂಘದ ಸೇವಾ ಕಾರ್ಯ ಅಭಿನಂದನೀಯ
ಕನ್ನಡ ಸೇವಾ ಸಂಘ ಪೊವಾಯಿ: ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರವೀಣ್ ಭೋಜ ಶೆಟ್ಟಿ
Team Udayavani, Aug 19, 2019, 5:07 PM IST
ಮುಂಬಯಿ, ಆ. 18: ಸಂಘ ಸಂಸ್ಥೆಗಳ ಮೂಲಕ ಜನಸೇವೆ ಮಾಡುವುದೆಂದರೆ ಅದು ದೇವರ ಸೇವೆ ಮಾಡಿದಂತೆ. ಕಳೆದ 22 ವರ್ಷಗಳಿಂದ ಸಮಾಜಸೇವೆಯಲ್ಲಿ ತೊಡಗಿ ಕೊಂಡಿರುವ ಕನ್ನಡ ಸೇವಾ ಸಂಘ ಪೊವಾಯಿ ಸ್ಥಳೀಯ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ನೆರವು ನೀಡುತ್ತಿರುವುದು ಅಭಿನಂದನೀಯ ಎಂದು ಮುಂಬಯಿ ಬಂಟರ ಸಂಘದ ಕೋಶಾಧಿಕಾರಿ ಪ್ರವೀಣ್ ಭೋಜ ಶೆಟ್ಟಿ ಅವರು ಹೇಳಿದರು.
ಅವರು ಆ.17ರಂದು ಘಾಟ್ಕೋಪರ್ ಪಶ್ಚಿಮದ ಶ್ರೀ ಜಂಗಲೇಶ್ವರ ದೇವಸ್ಥಾನ ಸಭಾಗೃಹ ದಲ್ಲಿ ಕನ್ನಡ ಸೇವಾ ಸಂಘ ಪೊವಾಯಿ ಇದರ 22ನೇ ವರ್ಷದ ವಾರ್ಷಿ ಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. 22 ವರ್ಷಗಳ ಹಿಂದೆ ಸದುದ್ದೇಶದಿಂದ ಸ್ಥಾಪಿತವಾದ ಈ ಸಂಸ್ಥೆ ಇಂದು ಉತ್ತಮ ಕಾರ್ಯಕರ್ತರು ಹಾಗೂ ದಾನಿಗಳ ಪ್ರಯತ್ನದಿಂದ ಮುಂಬಯಿ ಮಹಾ ನಗರದಲ್ಲಿ ಒಂದು ಮಾದರಿ ಸಂಸ್ಥೆಯಾಗಿ ಬೆಳೆ ಯುತ್ತಿರುವುದು ಅಭಿನಂದನೀಯ ಎಂದರು.
ಗೌರವ ಅತಿಥಿಯಾಗಿ ಉಪಸ್ಥಿತರಿದ್ದ ಬಂಟರ ಸಂಘ ಮುಂಬಯಿಯ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಡಾ| ಆರ್. ಕೆ. ಶೆಟ್ಟಿ ಅವರು ಮಾತನಾಡಿ, ಈ ಸಂಸ್ಥೆಯು ಮಾಡುತ್ತಿರುವ ಜನಪರ ಕಾರ್ಯ ಗಳನ್ನು ನಾನು ಹತ್ತಿರದಿಂದ ಬಲ್ಲೆನು. ಶೈಕ್ಷಣಿಕ ಕ್ಷೇತ್ರದಲ್ಲಿ ಕಳೆದ 22 ವರ್ಷಗಳಿಂದ ಸಂಘವು ಸದಾ ಕಾರ್ಯನಿರತವಾಗಿರುವುದು ಮುನ್ಸಿಪಾಲಿಟಿ ಶಾಲೆ ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳನ್ನು ಪ್ರೋತ್ಸಾಹಿಸುವ ಕಾರ್ಯವನ್ನು ಮಾಡುತ್ತ ಬಂದಿದೆ. ಇಂತಹ ಕಾರ್ಯಗಳಿಗೆ ನಾವೆಲ್ಲರೂ ಸದಾ ಪ್ರೋತ್ಸಾಹ ವನ್ನು ನೀಡಬೇಕಾದ ಅಗತ್ಯವಿದೆ ಎಂದರು.
ಉಮಾಮಹೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ್ ಉಡುಪ ಅವರು ಮಾತನಾಡಿ, ಕನ್ನಡ ಸೇವಾ ಸಂಘದ ಕಾರ್ಯಚಟುವಟಿಕೆಯನ್ನು ಸಂಘವು ಸ್ಥಾಪನೆಯಾದ ದಿನದಿಂದ ನಾನು ಹತ್ತಿರದಿಂದ ಬಲ್ಲೆ. ಈ ಸಂಸ್ಥೆಯಲ್ಲಿ ಅನೇಕ ದಾನಿಗಳು ಸದಾ ಸಕ್ರಿಯರಾಗಿದ್ದು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಸಮಾಜ ಸೇವಕರನ್ನು ಗುರುತಿಸುವ ಕೆಲಸವನ್ನು ಈ ಸಂಸ್ಥೆಯು ಮಾಡುತ್ತಿರುವುದು ಅಭಿನಂದನೀಯ ಎಂದು ತಿಳಿಸಿದರು.
ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಅಧ್ಯಕ್ಷ ಚಂದ್ರಶೇಖರ್ ಪೂಜಾರಿ ಅವರು ಮಾತನಾಡುತ್ತ, ಶ್ರದ್ಧೆಯಿಂದ ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡಿದಾಗ ಆ ಸಂಸ್ಥೆಯು ಜನರಿಗೆ ಹತ್ತಿರವಾಗಿ ಬೆಳೆಯುತ್ತದೆ. ನಮ್ಮ ಸಂಪ್ರದಾಯ, ಸಂಸ್ಕೃತಿಯ ಬಗ್ಗೆ ಸಂಸ್ಥೆಯ ಮೂಲಕ ಸಮಾಜದ ಯುವ ಜನರಿಗೆ ತಿಳಿಯಪಡಿಸುವ ಕೆಲಸವಾಗಬೇಕು ಎಂದರು. ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಇದರ ಅಧ್ಯಕ್ಷ ನವೀನ್ ಶೆಟ್ಟಿ ಇನ್ನಬಾಳಿಕೆ ಅವರು ಮಾತನಾಡಿ, ಸಂಘದ ಕಾರ್ಯಚಟುವಟಿಕೆಗಳು ನಿರಂತರವಾಗಿ ಜರಗುತ್ತಿದ್ದು ಸಮಾಜಪರ ಕಾರ್ಯಗಳೊಂದಿಗೆ ಶೈಕ್ಷಣಿಕ ಕ್ಷೇತ್ರದಲ್ಲೂ ಪೊವಾಯಿ ಕನ್ನಡ ಸೇವಾ ಸಂಘದ ಕಾರ್ಯ ಅಭಿನಂದನೀಯ ಎಂದರು. ಮುಲುಂಡ್ ಬಂಟ್ಸ್‌ನ ಜತೆ ಕಾರ್ಯದರ್ಶಿ ವೇಣುಗೋಪಾಲ್ ಶೆಟ್ಟಿ ಅವರು ಮಾತನಾಡಿ, ಪ್ರತಿಭಾ ಪುರಸ್ಕಾರ, ಸಾಧಕರನ್ನು ಗೌರವಿಸುವುದು ಹಾಗೂ ಕನ್ನಡದ ಸಂಸ್ಕೃತಿಯನ್ನು ಬೆಳಗಿಸುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರನ್ನು ಗೌರವಿಸುವ ಕೆಲಸಗಳನ್ನು ಮಾಡುತ್ತಿರುವ ಈ ಸಂಸ್ಥೆ ಇತರ ಸಂಸ್ಥೆಗಳಿಗೆ ಮಾದರಿ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಸೇವಾ ಸಂಘ ಪೊವಾಯಿ ಇದರ ಅಧ್ಯಕ್ಷ ಕರುಣಾಕರ ವಿ. ಶೆಟ್ಟಿ ಅವರು, ಪರಿಸರದ ತುಳು ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಸ್ಥಾಪಿತ ಗೊಂಡು ಇದೀಗ ನಿರಂತರ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಬಂದಿದೆ. ಗಣ್ಯರು ನೀಡಿದ ಸಹಕಾರ ಹಾಗೂ ಪ್ರೋತ್ಸಾಹದಿಂದ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಸಹಾಯ ಮಾಡುವುದರೊಂದಿಗೆ ನಮ್ಮ ಸಂಸ್ಥೆಯ ಮಹಿಳಾ ವಿಭಾಗ ಹಾಗೂ ಯುವ ವಿಭಾಗವು ಸಕ್ರಿಯವಾಗಿ ತುಳುನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡುತ್ತಿದೆ. ದಾನಿಗಳು ತಮ್ಮ ಸಹಕಾರವನ್ನು ಸದಾ ಈ ಸಂಸ್ಥೆಗೆ ನೀಡಿ ಪ್ರೋತ್ಸಾಹಿಸಬೇಕು ಎಂದು ನುಡಿದರು. ಸಮಾರಂಭದಲ್ಲಿ ಸಮಾಜರತ್ನ ಪ್ರಶಸ್ತಿಯನ್ನು ಸಮಾಜಸೇವಕ ಎಲ್ಲೂರು ರಘುವೀರ್ ಎ. ಶೆಟ್ಟಿ ಅವರಿಗೆ ಹಾಗೂ ಕನ್ನಡ ಜ್ಯೋತಿ ಪ್ರಶಸ್ತಿಯನ್ನು ಮುಂಬಯಿಯ ಲೇಖಕ ಕರುಣಾಕರ ಶೆಟ್ಟಿ ಪಣಿಯೂರು ಅವರಿಗೆ ನೀಡಿ ಗೌರವಿಸಲಾಯಿತು. ಕಲಾಪೋಷಕ ಅಜಿತ್ ಶೆಟ್ಟಿ ಬೆಳ್ಮಣ್ ಮತ್ತು ಸಮಾಜಸೇವಕ ಉಮೇಶ್ ಜಿ. ಆಚಾರ್ಯ ದಂಪತಿಗಳನ್ನು ಈ ಸಂದರ್ಭ ಸಮ್ಮಾನಿಸಲಾಯಿತು. ಪ್ರಸಕ್ತ ವರ್ಷದ ಸಿಎ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿ ಅಶ್ಮಿತಾ ಚಂದ್ರಹಾಸ್ ರೈ ಬೊಲ್ನಾಡುಗುತ್ತು ಹಾಗೂ ಆಶೀಷ್ ಸೀತಾರಾಮ್ ಶೆಟ್ಟಿ ಇವರನ್ನು ಗೌರವಿಸಲಾಯಿತು. ಪಾಸ್‌ಪೋಲಿ ಕನ್ನಡ ಶಾಲೆಯ ಮಕ್ಕಳಿಗೆ ಮಹೇಶ್ ಶೆಟ್ಟಿ ಅವರ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಾಗರಾಜ್ ಗುರುಪುರ ಅವರು ನಿರೂಪಿಸಿದರು. ಪ್ರಶಾಂತಿ ಡಿ. ಶೆಟ್ಟಿ, ಜ್ಯೋತಿ ಆರ್. ಶೆಟ್ಟಿ, ಪ್ರವೀಣಾ ಡಿ. ಸಾಲ್ಯಾನ್ ಹಾಗೂ ಪ್ರಭಾಕರ್ ಶೆಟ್ಟಿ ಪಣಿಯೂರು ಅವರು ಸಮ್ಮಾನ ಪತ್ರವನ್ನು ವಾಚಿಸಿದರು. ವೇದಿಕೆಯಲ್ಲಿ ಗೌರವ ಅತಿಥಿಗಳಾದ ಸಮಾಜಸೇವಕ ರಮೇಶ್ ಶೆಟ್ಟಿ ಸಿದ್ಧಕಟ್ಟೆ, ವನಿತಾ ಪಾಂಡುರಂಗ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸವಿತಾ ಕರುಣಾಕರ್ ಶೆಟ್ಟಿ, ಸಂಘದ ಉಪಾಧ್ಯಕ್ಷ ಅಶೋಕ್ ಶೆಟ್ಟಿ ಸಾಂತೂರ್, ಮಹಾಪೋಷಕ ಮಹೇಶ್ ಎಸ್. ಶೆಟ್ಟಿ, ಸಲಹೆಗಾರರಾದ ನ್ಯಾಯವಾದಿ ಆರ್. ಜಿ. ಶೆಟ್ಟಿ, ಕೋಶಾಧಿಕಾರಿ ಸಂದೇಶ್ ಆರ್. ಶೆಟ್ಟಿ ಮೂಡುಬೆಳ್ಳೆ, ಯುವ ವಿಭಾಗದ ಪ್ರವೀಣ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ವಿಭಾಗದ ವರದಿಯನ್ನು ಕಾರ್ಯಾಧ್ಯಕ್ಷೆ ಕವಿತಾ ಶೆಟ್ಟಿ ಅವರು ವಾಚಿಸಿದರು. ಪ್ರಶಾಂತಿ ಡಿ. ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು. ಅತಿಥಿ ಗಣ್ಯರನ್ನು ಸಂಸ್ಥೆಯ ಪದಾಧಿಕಾರಿಗಳು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.
ಮನೋರಂಜನಾ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳು ಮತ್ತು ಮಹಿಳಾ ವಿಭಾಗದ ಸದಸ್ಯರಿಂದ ನೃತ್ಯ ವೈಭವ, ಬಿಲ್ಲವರ ಅಸೋಸಿಯೇಶನ್ ಸ್ಥಳೀಯ ಕಚೇರಿಯ ಸದಸ್ಯರಿಂದ ಬಾಬಾಪ್ರಸಾದ್ ಅರಸ ಕುತ್ಯಾರು ರಚಿಸಿ ನಿರ್ದೇಶಿಸಿದ ಸೋತು ಗೆಂದಿಯೊಲು ಏಕಾಂಕ ನಾಟಕ ಪ್ರದರ್ಶನ ಗೊಂಡಿತು. ಸಂಘದ ಪ್ರಧಾನ ಕಾರ್ಯದರ್ಶಿ ಬಾಬಾಪ್ರಸಾದ ಅರಸ ಕುತ್ಯಾರು ಇವರು ನಿರೂಪಿಸಿ ಕೋಶಾಧಿಕಾರಿ ಸಂದೇಶ್ ಆರ್. ಶೆಟ್ಟಿ ಮೂಡುಬೆಳ್ಳೆ ಅವರು ವಂದಿಸಿದರು.
ಚಿತ್ರ-ವರದಿ: ಸುಭಾಷ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.