ಆರೋಗ್ಯ ಇಲಾಖೆ ಆಸ್ಪತ್ರೆಗಳಲ್ಲಿ  ಹೆಚ್ಚಿನ ಕೊರೊನಾ ರೋಗಿಗಳಿಗೆ ಚಿಕಿತ್ಸೆ


Team Udayavani, Jun 26, 2021, 1:20 PM IST

Treatment of Corona Patients

ಮುಂಬಯಿ: ರಾಜ್ಯ ಸರಕಾರದ ವತಿಯಿಂದ ಅಸಮರ್ಪಕ ನಿಧಿ ಮತ್ತು ಸಿಬಂದಿ ಕೊರತೆಯ ಹೊರತಾಗಿಯೂ ಕೊರೊನಾ ಆತಂಕದ ಸಂದರ್ಭ ರಾಜ್ಯದ ಆರೋಗ್ಯ ಇಲಾಖೆಯ ಆಸ್ಪತ್ರೆಗಳಲ್ಲಿ ಹೆಚ್ಚಿನ ಸಂಖ್ಯೆಯ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡುವುದರ ಜತೆಗೆ ರಾಜ್ಯ ಆರೋಗ್ಯ ಇಲಾಖೆಯು ಕಡಿಮೆ ಮರಣ ಪ್ರಮಾಣವನ್ನು ಹೊಂದಿದೆ.

ಆರೋಗ್ಯ ಇಲಾಖೆಯ ಆಸ್ಪತ್ರೆಗಳಲ್ಲಿನ ವೈದ್ಯರು ಒಂದು ವರ್ಷಕ್ಕೂ ಹೆಚ್ಚು ಕಾಲ ದಿಂದ ಹಗಲು-ರಾತ್ರಿ ಕೆಲಸ ಮಾಡುತ್ತಿದ್ದಾರೆ. ಅಂತೆಯೇ ಮನಪಾ ಆಸ್ಪತ್ರೆಗಳು ಮತ್ತು ಇತರ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೊರೊನಾ ಚಿಕಿತ್ಸೆಯನ್ನು ನೀಡಲಾಗಿದೆ. ಆರೋಗ್ಯ ಇಲಾಖೆಯ ಆಸ್ಪತ್ರೆಗಳಲ್ಲಿನ ವೈದ್ಯರಿಗೆ ಕೊರೊನಾ ರೋಗಿಗಳ ಚಿಕಿತ್ಸೆಯ ಜತೆಗೆ ವ್ಯಾಕ್ಸಿನೇಶನ್‌, ಮಕ್ಕಳ ಆರೋಗ್ಯದ ಕಾಳಜಿ ಮತ್ತು ವಿವಿಧ ರಾಷ್ಟ್ರೀಯ ಮಟ್ಟದ ಆರೋಗ್ಯ ಸಂಬಂಧಿತ ಅಭಿಯಾನಗಳಲ್ಲಿ ಪಾಲ್ಗೊಳ್ಳ ಬೇಕಾಯಿತು. ಕೊರೊನಾ ಅವಧಿ ಯಲ್ಲಿ ಗರ್ಭವತಿಯರ, ತಾಯಿ ಮತ್ತು ಮಕ್ಕಳ ಮರಣ ಪ್ರಮಾಣವನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಜಾಗರೂಕತೆಯಿಂದ ಕಾರ್ಯ ನಿರ್ವಹಿಸುತ್ತಿದೆ ಎಂದು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ| ಪ್ರದೀಪ್‌ ವ್ಯಾಸ್‌ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯಿಂದ ಮಹತ್ತರ ಪಾತ್ರ

ರಾಜ್ಯದ ಸಮಗ್ರ ಆರೋಗ್ಯ ಮತ್ತು ಕೊರೊನಾ ಚಿಕಿತ್ಸಾ ಯೋಜನೆಯಲ್ಲಿ ಆರೋಗ್ಯ ಇಲಾಖೆಯ ಪ್ರಮುಖ ಪಾತ್ರವಿದೆ. ಆರೋಗ್ಯ ಇಲಾಖೆಯ ಆಸ್ಪತ್ರೆ ಗಳಲ್ಲಿ ಶೇ. 38.31ರಷ್ಟು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಎಲ್ಲ ಮನಪಾ ಆಸ್ಪತ್ರೆಗಳಲ್ಲಿ ಒಟ್ಟು ಶೇ. 32.76ರಷ್ಟು ರೋಗಿಗಳು, ಖಾಸಗಿ ಆಸ್ಪತ್ರೆಗಳಲ್ಲಿ ಶೇ. 16.75 ಮತ್ತು 18 ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ. 1.22ರಷ್ಟು ರೋಗಿಗಳು ಚಿಕಿತ್ಸೆ ಪಡೆದಿದ್ದಾರೆ. ಇದಲ್ಲದೆ ಕೆಲವು ಕೊರೊನಾ ರೋಗಿಗಳಿಗೆ ಕೇಂದ್ರ ಸರಕಾರಿ ಆಸ್ಪತ್ರೆ, ರೈಲ್ವೇ, ರಕ್ಷಣಾ ಇಲಾಖೆ ಆಸ್ಪತ್ರೆಗಳು ಮತ್ತು ಮಹಾತ್ಮಾ ಫುಲೆ ಜನ ಆರೋಗ್ಯ ಯೋಜನೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಆರೋಗ್ಯ ಇಲಾಖೆಯ ಜಿÇÉಾ ಆಸ್ಪತ್ರೆ ಗಳು ಮತ್ತು ಗ್ರಾಮೀಣ ಆಸ್ಪತ್ರೆಗಳಲ್ಲಿ ಸುಮಾರು 48,000 ಹಾಸಿಗೆಗಳು ಲಭ್ಯ ವಿವೆ. ಇವುಗಳಲ್ಲಿ ಹೆಚ್ಚಿನವು ಕೊರೊನಾ ರೋಗಿಗಳಿಗೆ ಮೀಸಲಾಗಿವೆ. ಈ ಆಸ್ಪತ್ರೆಗಳಲ್ಲಿ ಈ ವರೆಗೆ 22,72,283 ರೋಗಿಗಳು ಚಿಕಿತ್ಸೆ ಪಡೆದಿದ್ದಾರೆ. ಈ ಪೈಕಿ 22,25,839 ರೋಗಿಗಳು ಚೇತರಿಸಿಕೊಂಡಿದ್ದು, 33,808 ರೋಗಿಗಳು ಸಾವನ್ನಪ್ಪಿ¨ªಾರೆ. ಆರೋಗ್ಯ ಇಲಾಖೆಯ ಆಸ್ಪತ್ರೆಗಳಲ್ಲಿ ಕೊರೊನಾ ರೋಗಿಗಳ ಮರಣ ಪ್ರಮಾಣವು ಶೇ. 1.48 ರಷ್ಟಿದ್ದು, ಇದು ರಾಷ್ಟ್ರೀಯ ಮತ್ತು ರಾಜ್ಯದ ಮರಣ ಪ್ರಮಾಣಕ್ಕಿಂತ ಕಡಿಮೆಯಾಗಿದೆ.

ಮನಪಾ ಆಸ್ಪತ್ರೆಗಳಲ್ಲಿ  ಒಟ್ಟು 19,11,697 ರೋಗಿಗಳಿಗೆ ಚಿಕಿತ್ಸೆ

ಎಲ್ಲ ಮನಪಾ ಆಸ್ಪತ್ರೆಗಳಲ್ಲಿ ಒಟ್ಟು 19,11,697 ರೋಗಿಗಳು ಚಿಕಿತ್ಸೆ ಪಡೆ ದರೆ, 24,508 ರೋಗಿಗಳು ಸಾವನ್ನಪ್ಪಿ ¨ªಾರೆ. ಈ ಪೈಕಿ 7,21,963 ರೋಗಿಗಳು ಮುಂಬಯಿ ಮುನ್ಸಿಪಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಈ ವರೆಗೆ 15,338 ಮಂದಿ ಸಾವನ್ನಪ್ಪಿ¨ªಾರೆ. ಬಳಿಕದ ಸ್ಥಾನಗಳಲ್ಲಿ ಪುಣೆ, ನಾಗಪುರ ಮತ್ತು ಇತರ ಮಹಾನಗರ ಪಾಲಿಕೆಗಳು ಸೇರಿವೆ. ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟು 9,21,846 ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಈ ಪೈಕಿ 30,492 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಪ್ರಮಾಣವು ಶೇ. 3.11ರಷ್ಟಿದ್ದರೆ, ಮಹಾತ್ಮಾ ಫುಲೆ ಜನ ಆರೋಗ್ಯ ಯೋಜನೆಯ ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟು 74,538 ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. 5,183 ಸಾವುಗಳನ್ನು ದಾಖಲಿಸಿದ್ದು, ಮರಣ ಪ್ರಮಾಣ 6.94ರಷ್ಟಿದೆ. ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಒಟ್ಟು 71,286 ರೋಗಿ ಗಳಿಗೆ ಚಿಕಿತ್ಸೆ ನೀಡಲಾಗಿದೆ. 1,826 ಸಾವುಗಳು ವರದಿಯಾಗಿದ್ದು, ಮರಣ ಪ್ರಮಾಣ ಶೇ. 2.64ರಷ್ಟಿದೆ.

3ನೇ ಅಲೆ ಎದುರಿಸಲು ಸಿದ್ಧತೆ

ಜೂ. 16ರ ವರೆಗೆ ರಾಜ್ಯದಲ್ಲಿ ನೋಂದಾಯಿತ 58,33,865 ರೋಗಿ ಗಳಲ್ಲಿ 22,25,839 ರೋಗಿಗಳು ಅಥವಾ ಶೇ. 38.94 ರೋಗಿಗಳು ಆರೋಗ್ಯ ಇಲಾಖೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈಗ ಆರೋಗ್ಯ ಇಲಾಖೆ ಮೂರನೇ ಅಲೆಯನ್ನು ಎದುರಿಸಲು ಸಿದ್ಧತೆ ನಡೆಸುತ್ತಿದೆ. ಮಕ್ಕಳಿಗೆ ಪ್ರತ್ಯೇಕ ಹಾಸಿಗೆಗಳು, ಉಪಕರಣಗಳು ಮತ್ತು ಔಷಧಗಳನ್ನು ಒದಗಿಸುವುದರ ಜತೆಗೆ ಮಕ್ಕಳ ವೈದ್ಯರ ನೇಮಕಾತಿಯ ಕೆಲಸ ನಡೆಯುತ್ತಿದೆ. ಆಮ್ಲಜನಕ ಉತ್ಪಾದನೆಯ ಯೋಜನೆ ನಡೆಯುತ್ತಿದೆ. ಆರೋಗ್ಯ ಇಲಾಖೆ ಮಳೆಗಾಲದ ಸಾಂಕ್ರಾಮಿಕ ರೋಗಗಳನ್ನು ಎದುರಿಸಲು ಸಿದ್ಧತೆ ಮಾಡಿಕೊಂಡಿದೆ. ತಾಯಂದಿರು ಮತ್ತು ಮಕ್ಕಳ ಮರಣವನ್ನು ತಡೆಗಟ್ಟಲು ಲಸಿಕೆ ನೀಡುವ ಕಾರ್ಯಕ್ರಮವನ್ನು ಚುರುಕುಗೊಳಿಸಬೇಕಾಗಿದೆ ಎಂದು ಡಾ| ಪ್ರದೀಪ್‌ ವ್ಯಾಸ್‌ ಹೇಳಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.