ಪ್ರತಿಭಾವಂತರಿಗೆ ಪ್ರೋತ್ಸಾಹ ನೀಡುವುದೆ ಟ್ರಸ್ಟ್ ಉದ್ದೇಶ: ಜಯಂತಿ ರಾವ್
Team Udayavani, Jan 15, 2020, 6:21 PM IST
ಮುಂಬಯಿ, ಜ. 14: ದಿ| ಚಂದ್ರಶೇಖರ ರಾವ್ ಮೆಮೋರಿಯಲ್ ಟ್ರಸ್ಟ್ ಮತ್ತು ಮುಂಬಯಿ ಚುಕ್ಕಿ ಸಂಕುಲ ಸಹಕಾರದೊಂದಿಗೆ ಸ್ವರ್ಗೀಯ ಚಂದ್ರಶೇಖರ ರಾವ್ ಸಂಸ್ಮರಣಾ ಕಾರ್ಯಕ್ರಮವು ಜ. 9 ರಂದು ಭಾಂಡೂಪ್‌ನಲ್ಲಿ ಹಮ್ಮಿಕೊಳ್ಳಲಾಯಿತು.
ಜಯಂತಿ ಸಿ. ರಾವ್ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಚಂದ್ರಶೇಖರ ರಾವ್ ಅವರ ಆಶಯದಂತೆ ಈ ಟ್ರಸ್ಟ್ ರಚಿಸಲಾಗಿದ್ದು, ಮಕ್ಕಳ ಪ್ರತಿಭೆ ಪುರಸ್ಕಾರ, ಅಸಹಾಯಕರಿಗೆ ನೆರವು ಮತ್ತು ಅವರ ಆಸಕ್ತಿಯ ಕ್ಷೇತ್ರವಾದ ಸಾಹಿತ್ಯದಲ್ಲಿ ತೆರೆಮರೆಯಲ್ಲಿರುವ ಪ್ರತಿಭಾವಂತರಿಗೆ ಪ್ರೋತ್ಸಾಹ ನೀಡುವುದೇ ಉದ್ದೇಶವಾಗಿದೆ. ತಮ್ಮೆ ಲ್ಲರ ಸಹಕಾರದಿಂದ ಈ ನಿಟ್ಟಿಯಲ್ಲಿ ಮುಂದುವರಿಯುವ ಇಚ್ಛೆ ಇದೆ. ಇದೆಲ್ಲವನ್ನು ಸಾಧ್ಯವಾಗಿಸಲು ಸದಾ ಬೆನ್ನೆಲುಬಾಗಿರುವ ಚುಕ್ಕಿ ಸಂಕುಲದ ಕವಿ, ಸಾಹಿತಿ, ಕಲಾವಿದರಾದ, ರಾವ್ ಅವರ ನಿಕಟವರ್ತಿಗಳೂ ಆಗಿರುವ ಸಾ. ದಯಾ ಮತ್ತು ಗೋಪಾಲ ತ್ರಾಸಿ ಇವರ ಸಹಕಾರ ಅನುಪಮವಾದುದು ಎಂದರು.
ಈ ಸಂದರ್ಭದಲ್ಲಿ ನೆರೆದ ಕವಿಗಳಾದ ಶಾರದಾ ಅಂಬೆಸಂಗೆ, ಡಾ| ರಜನಿ ವಿ. ಪೈ, ಡಾ| ದಾಕ್ಷಾಯಣಿ ಯಡಹಳ್ಳಿ, ಸರೋಜ ಅಮಾತಿ, ಕುಮುದಾ ಶೆಟ್ಟಿ ಕಾವ್ಯ ವಾಚನ ಮಾಡಿದರು. ಅರುಣ್ ಶೇಠ್ ಮತ್ತು ಎಸ್. ಶೆಣೈ ಮಾತಾಡಿದರು. ಕಾರ್ಯಕ್ರಮದಲ್ಲಿ ಬಡ ವಿದ್ಯಾರ್ಥಿಗಳಿಗೆ ನೆರವು ನೀಡಲಾಯಿತು. ರಾವ್ ಅವರ ಹಿತೈಷಿಗಳು ಪಾಲ್ಗೊಂಡ ಈ ಕಾರ್ಯಕ್ರಮದಲ್ಲಿ, ಮಕ್ಕಳ ಹಾಡು, ನೃತ್ಯ ಮತ್ತು ಕಾವ್ಯ ವಾಚನಗೈದರು. ಹೋಪ್ ಫೌಂಡೇಶನ್ ಧಾರಾವಿ ಇದರ ಅನಿಲ ಬೊಡಲ್, ಭೀಮರಾಯ ಚಿಲ್ಕಾ ಮತ್ತಿತರರು ಉಪಸ್ಥಿತರಿದ್ದರು. ಕವಿ, ಕಥೆಗಾರ ಗೋಪಾಲ ತ್ರಾಸಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂದ್ರಶೇಖರ ರಾವ್ ಅವರ ಕವನ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು. ಸಾಹಿತ್ಯಾಭಿಮಾನಿ ಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desiswara: ನ್ಯೂಯಾರ್ಕ್ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ
Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…
Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ
Kannada Alphanbets: “ಕ’ ಕಾರದಲ್ಲಿನ ವಿಶೇಷ: ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ
ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.