ಪೂಜೆಯಲ್ಲಿ ತುಳಸಿಯ ಮಹತ್ವ ಅನನ್ಯ: ಧರ್ಮದರ್ಶಿ ಅಶೋಕ ದಾಸು ಶೆಟ್ಟಿ
Team Udayavani, Nov 30, 2020, 10:06 AM IST
ಡೊಂಬಿವಲಿ, ನ. 29: ಡೊಂಬಿವಲಿ ಪರಿಸರದ ಪ್ರತಿಷ್ಠಿತ ಧಾರ್ಮಿಕ ಹಾಗೂ ಸಾಮಾಜಿಕ ಸಂಸ್ಥೆಗಳಲ್ಲಿ ಒಂದಾದ ಡೊಂಬಿವಲಿ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ ವತಿಯಿಂದ ಮಂದಿರದ ಸಭಾಂಗಣದಲ್ಲಿ ಕಾರ್ತಿಕ ಮಾಸದ ದ್ವಾದಶಿಯ ನಿಮಿತ್ತ ಶ್ರೀ ತುಳಸಿ ಪೂಜೆಯು ನ. 27ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ವೇದಮೂರ್ತಿ ಪಂಡಿತ್ ಶುಭಕರ ಭಟ್ ಮತ್ತು ರಾಜೇಶ್ ಭಟ್ ಅವರ ಪೌರೋಹಿತ್ಯದಲ್ಲಿ ವೇದ ಘೋಷಗಳ ಮಧ್ಯೆ ಮಂಡಳದ ಧರ್ಮದರ್ಶಿ ಅಶೋಕ್ ದಾಸು ಶೆಟ್ಟಿ ಮತ್ತು ಚಾರುಲತಾ ಅಶೋಕ್ ಶೆಟ್ಟಿ ದಂಪತಿ ತುಳಸಿ ಪೂಜೆಯ ವಿವಿಧ ಪೂಜಾ ಕೈಂಕರ್ಯಗಳ ಯಜಮಾನತ್ವ ವಹಿಸಿದ್ದರು. ತುಳಸಿ ಪೂಜೆಯ ನಿಮಿತ್ತ ತುಳಸಿ ಕಟ್ಟೆಯ ಪರಿಸರವನ್ನು ದೀಪಗಳಿಂದ ಸಿಂಗರಿಸಲಾಗಿತ್ತು. ಡೊಂಬಿವಲಿ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ ಮಹಿಳಾ ವಿಭಾಗದಿಂದ ಭಜನ ಕಾರ್ಯಕ್ರಮ ನಡೆಯಿತು.
ತುಳಸಿ ಪೂಜೆಯ ಬಳಿಕ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಮಂಡಳದ ಧರ್ಮದರ್ಶಿ ಅಶೋಕ ದಾಸು ಶೆಟ್ಟಿ ಅವರು, ಪರಮಾತ್ಮನ ಪೂಜೆಯಲ್ಲಿ ತುಳಸಿಯ ಮಹತ್ವ ಅನನ್ಯವಾಗಿದೆ. ನಮ್ಮ ಸನಾತನ ಭಾರತೀಯ ಸಂಸ್ಕೃತಿ ಹಾಗೂ ಆಯುರ್ವೇದದಲ್ಲಿಯೂ ತುಳಸಿ ಮಹತ್ವ ಪಡೆದ ದಿವ್ಯೌಷಧೀಯು ಹೌದು ಎಂದು ಹೇಳಿದ ಅವರು, ತುಳಸಿ ಪೂಜೆಯನ್ನು ಪ್ರತೀ ವರ್ಷ ನಡೆಸುವ ಮೂಲಕ ನಮ್ಮ ಹಿರಿಯರು ಭಾವೈಕ್ಯತೆಗೆ ಭದ್ರ ಬುನಾದಿಯನ್ನು ಹಾಕಿದ್ದಾರೆ. ನಮ್ಮ ಹಿರಿಯರು ಹಾಕಿ ಕೂಟ್ಟ ಮಾರ್ಗದಲ್ಲಿ ನಡೆದು ಸಾರ್ಥಕ ಜೀವನ ಸಾಗಿಸೋಣ. ಮಂಡಳಿಯ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿ ತುಳು, ಕನ್ನಡಿಗರು, ಭಕ್ತಾದಿಗಳು ಪಾಲ್ಗೊಂಡು ಸಹಕರಿಸಿ, ಪ್ರೋತ್ಸಾಹಿಸಬೇಕು ಎಂದು ಕರೆ ನೀಡಿ ಶುಭಕೋರಿದರು.
ಮಂಡಳದ ಅಧ್ಯಕ್ಷ ಗೋಪಾಲ ಕೆ. ಶೆಟ್ಟಿ ಅವರು ಮಾತನಾಡಿ, ನಮ್ಮ ಸನಾತನ ಭಾರತೀಯ ಸಂಸ್ಕೃತಿಯಲ್ಲಿ ದೀಪಾವಳಿಗೆ ಮಹತ್ವವಿದೆ. ನಾವೆಲ್ಲರೂ ದೀಪಗಳನ್ನು ಹಚ್ಚುವ ಮೂಲಕ ನಮ್ಮ ಮನದ ಅಂಧಕಾರವನ್ನು ದೂರಗೂಳಿಸಿ ಸಾರ್ಥಕ ಜೀವನ ಸಾಗಿಸೋಣ ಎಂದು ಶುಭಹಾರೈಸಿದರು.
ಕೊನೆಯಲ್ಲಿ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಪ್ರಾರಂಭದಲ್ಲಿ ಮಂಡಳದ ಆರಾಧ್ಯ ದೇವರಾದ ದೇವಿಗೆ ವಿಶೇಷ ಪೂಜೆ ನಡೆಸಲಾಯಿತು. ಮಂಡಳದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯ-ಸದಸ್ಯೆಯರು, ಭಕ್ತರು ಉಪಸ್ಥಿತರಿದ್ದು ಸಹಕರಿಸಿದರು. ಸ್ಥಳೀಯ ವಿವಿಧ ಸಮುದಾಯ ಮತ್ತು ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು, ಉದ್ಯಮಿಗಳು, ತುಳು, ಕನ್ನಡಿಗರು ಉಪಸ್ಥಿತರಿದ್ದು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಪ್ರಸಾದ ಸ್ವೀಕರಿಸಿದರು.
ಚಿತ್ರ-ವರದಿ: ಗುರುರಾಜ ಪೊತನೀಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ಹೊಸ ಸೇರ್ಪಡೆ
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
Kollywood: ಸೂರ್ಯ – ಕಾರ್ತಿಕ್ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್ ಫಿಕ್ಸ್
Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.