ಧರ್ಮ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಲಿ 

Team Udayavani, Dec 15, 2021, 11:33 AM IST

ಧರ್ಮ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಲಿ 

ಮೀರಾರೋಡ್‌: ಕಳೆದ ಎರಡು ವರ್ಷಗಳಿಂದ ಕೋವಿಡ್‌ ಹಾವಳಿಯಿಂದಾಗಿ ಅಸ್ತವ್ಯಸ್ತಗೊಂಡ ಜನಜೀವನ ಯಥಾಸ್ಥಿತಿಗೆ ಬರುತ್ತಿದ್ದು, ಬಂಟರ ಸಂಘ ಮುಂಬಯಿ ಇದರ ಮೀರಾ-ಭಾಯಂದರ್‌ ಪ್ರಾದೇಶಿಕ ಸಮಿತಿಯು ಸಾಂಪ್ರದಾಯಿಕ ಶೈಲಿಯಲ್ಲಿ ಇಲ್ಲಿನ ತುಳು-ಕನ್ನಡಿಗ ಜನತೆಗೆ ಜನಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇಂದಿನ ಸ್ಪರ್ಧಾತ್ಮಕ ಜೀವನದ ಹಾದಿಯಲ್ಲೂ ಇಂತಹ ಭಕ್ತಿಪ್ರಧಾನ ಪರಂಪರೆಯನ್ನು ಮೇಳೈಸುವ ಇಂದಿನ ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ಅಭಿನಂದನೀಯ. ಇಂತಹ ಕಾರ್ಯಕ್ರಮಗಳಿಂದ ಯುವ ಪೀಳಿ ಗೆಗಳಲ್ಲೂ ಧಾರ್ಮಿಕ ಜಾಗೃತಿ ಮೂಡು ತ್ತದೆ. ಸ್ಥಳೀಯ ಸಮಿತಿಯಿಂದ ಇಂತಹ ಬಾಂಧವ್ಯ ಮೂಡಿಸುವ ಕಾರ್ಯಕ್ರಮ ಗಳು ಸದಾ ನಡೆಯುತ್ತಿರಲಿ ಎಂದು ಮೀರಾ-ಭಾಯಂದರ್‌ನ ಮಾಜಿ ಎಂಎಲ…ಎ ನರೇಂದ್ರ ಮೆಹ್ತಾ ತಿಳಿಸಿದರು.

ಸೆವೆನ್‌ ಸ್ಕ್ವೇರ್‌ ಸ್ಕೂಲ್‌ ಗ್ರೌಂಡ್‌ನ‌ಲ್ಲಿ  ಡಿ. 12ರಂದು ಬಂಟರ ಸಂಘ ಮುಂಬಯಿ ಇದರ ಮೀರಾ-ಭಾಯಂದರ್‌ ಪ್ರಾದೇಶಿಕ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ ವಿಜಯಕುಮಾರ್‌ ಕೊಡಿಯಾಲ್‌ಬೈಲ್‌ ನೇತೃತ್ವದ ಕಲಾಸಂಗಮ ತಂಡದ ಶಿವಧೂತೆ ಗುಳಿಗೆ ತುಳು ನಾಟಕ ಪ್ರದರ್ಶನದ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ  ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಮೀರಾ – ಭಾಯಂದರ್‌ನಲ್ಲಿ ಸುಸಜ್ಜಿತ ಸಭಾಭವನದ ಕೊರತೆಯಿತ್ತು. ಮುಂದಿನ ವರ್ಷದಲ್ಲಿ  ನೂತನ ಸಭಾಭವನವು ಜನತೆಗೆ ಅರ್ಪಣೆಯಾಗಲಿದೆ. ಇದು ಎಲ್ಲ  ಸಮುದಾಯಗಳ ಜನತೆಗೆ ಸಹಕಾರಿಯಾಗಲಿದೆ. ಈಗಾಗಲೇ ನಾನು ಇಲ್ಲಿನ ಜನತೆಗಾಗಿ ದುಡಿದಿದ್ದೇನೆ. ಬಹುಪಯೋಗಿ ಮೆಟ್ರೋದಂತಹ ಯೋಜನೆಗಳ ಕೆಲಸ ಕಾರ್ಯಗಳು, ಮಾತ್ರವಲ್ಲದೆ ಮೀರಾ-ಭಾಯಂದರ್‌ ನಗರವನ್ನು ಮಾದರಿ ನಗರವನ್ನಾಗಿ ಪರಿವರ್ತಿಸುವ ಇನ್ನಿತರ ಹಲವಾರು ಯೋಜನೆಗಳ ಕಾರ್ಯಗಳು ಉತ್ತಮವಾಗಿ ನಡೆಯುತ್ತಿವೆ. ತುಳು-ಕನ್ನಡಿಗರ ಆಶೋತ್ತರಗಳಿಗೆ ಸ್ಪಂದಿಸಿದ್ದೇನೆ. ಅದರಲ್ಲೂ ಬಂಟ್ಸ್‌ ಸಮುದಾಯಕ್ಕೆ ನನ್ನ ನಿರಂತರ ಬೆಂಬಲವಿದೆ. ಮೀರಾ-ಭಾಯಂದರ್‌ ಅಭಿವೃದ್ಧಿಗಾಗಿ ನಾವೆಲ್ಲರು ಒಂದಾಗಿ ಶ್ರಮಿಸೋಣ ಎಂದರು.

ಮುಖ್ಯ ಅತಿಥಿಯಾಗಿದ್ದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ  ಮಾತನಾಡಿ, ಮುಂಬಯಿಯÇÉೇ ಹುಟ್ಟಿ  ಬೆಳೆದ ನಮ್ಮವರಿಗೆ ಆಚಾರ-ವಿಚಾರ, ಸಂಸ್ಕೃತಿ, ಸಂಸ್ಕಾರಗಳ ಬಗ್ಗೆ ಅರಿವು ಮೂಡಿಸುವ ಇಂತಹ ಧಾರ್ಮಿಕ ಮಹತ್ವದ ನಾಟಕಗಳು ನಿಜವಾಗಿಯೂ ನಮ್ಮ ಜೀವನದಲ್ಲಿ ಮಾನಸಿಕ ನೆಮ್ಮದಿ ತರುತ್ತದೆ. ದೈವ-ದೇವರ ಮಹತ್ವದ ಅರಿವನ್ನು ನಾವು ಗಣನೆಗೆ ತೆಗೆದುಕೊಂಡರೆ ಜೀವನ ಸಾರ್ಥಕವಾಗುತ್ತದೆ. ದೈವ-ದೇವರ ಭಕ್ತಿ, ದೇಶ ಭಕ್ತಿ, ಸಂಪ್ರದಾಯ ಜೀವನ ಶೈಲಿಯನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂತಹ ಭಕ್ತಿ ಪ್ರಧಾನವಾದ ನಾಟಕಗಳು ಸದಾ ಮೂಡಿಬರಲಿ ಎಂದರು.

ಇನ್ನೋರ್ವ ಅತಿಥಿ ಬಂಟರ ಸಂಘದ ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಕರ್ನೂರು ಮೋಹನ್‌ ರೈ ಮಾತನಾಡಿ, ಮೀರಾ-ಭಾಯಂದರ್‌ ಪರಿಸರದಲ್ಲಿ ಅನೇಕ ವರ್ಷಗಳನ್ನು ಕಳೆದ ನನಗೆ ಇಲ್ಲಿನ ತುಳು-ಕನ್ನಡಿಗರು ನಮ್ಮೂರ ಚಟುವಟಿಕೆಗಳಲ್ಲಿ ಭಾಗವಹಿಸಿ ಬೆಂಬಲ ನೀಡುವಷ್ಟು ಬೇರೆ ಎಲ್ಲೂ ಕಾಣಸಿಗುವುದಿಲ್ಲ. ದೇವಾಲಯವಿರಲಿ, ಸಂಘಟನೆಯಿರಲಿ ಅಲ್ಲಿ ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದರೆ ಮಾತ್ರ ಅದಕ್ಕೆ ಪೂರ್ಣ ಪ್ರಮಾಣದ ಅರ್ಥವಿದೆ. ಮೀರಾ-ಭಾಯಂದರ್‌ನಲ್ಲಿ ಇಂತಹ ಕಾರ್ಯಕ್ರಮಗಳು ಸದಾ ನಡೆಯುತ್ತಿರಲಿ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಲಾ ಸಂಗಮದ ನಾಟಕ ನಿರ್ದೇಶಕ ವಿಜಯಕುಮಾರ್‌ ಕೊಡಿಯಾಲ್‌ಬೈಲ್‌ ಅವರನ್ನು  ಗೌರವಿಸಲಾಯಿತು. ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಸಮಿತಿಯ ಉಪ ಕಾರ್ಯಾಧ್ಯಕ್ಷ ಕಿಶೋರ್‌ ಕುಮಾರ್‌ ಕುತ್ಯಾರ್‌, ಮಹಿಳಾ ವಿಭಾಗದ ಜತೆ ಕಾರ್ಯದರ್ಶಿ ರತ್ನಾ ಶೆಟ್ಟಿ, ಸuಳೀಯ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಶಿವರಾಮ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರವೀಂದ್ರ ಶೆಟ್ಟಿ  ಕೊಟ್ರಪಾಡಿಗುತ್ತು, ಜತೆ ಕಾರ್ಯದರ್ಶಿ ಶಂಕರ್‌ ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ದಾಮೋದರ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಲಿನಿ ಎಸ್‌. ಶೆಟ್ಟಿ ಸಚ್ಚೇರಿಗುತ್ತು ಉಪಸ್ಥಿತರಿದ್ದರು.

ಸuಳೀಯ ಸಮಿತಿಯ ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ವಸಂತಿ ಎಸ್‌. ಶೆಟ್ಟಿ  ಪ್ರಾರ್ಥನೆಗೈದರು. ಕವಿತಾ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು. ಸ್ಥಳೀಯ ಮಕ್ಕಳಿಂದ ನೃತ್ಯ ವೈವಿಧ್ಯ ಹಾಗೂ ವಿಜಯ್‌ ಕುಮಾರ್‌ ಕೊಡಿಯಾಲ್‌ಬೈಲ್‌ ನೇತೃತ್ವದ ಕಲಾ ಸಂಗಮ ತಂಡದಿಂದ ಶಿವಧೂತೆ ಗುಳಿಗೆ ತುಳು ನಾಟಕ ಪ್ರದರ್ಶನಗೊಂಡಿತು.

-ಚಿತ್ರ-ವರದಿ: ವೈ. ಟಿ. ಶೆಟ್ಟಿ  ಹೆಜಮಾಡಿ

ಟಾಪ್ ನ್ಯೂಸ್

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Bid for 2036 Olympics: Official application from India to IOC

Olympics; 2036ರ ಒಲಿಂಪಿಕ್ಸ್‌ಗೆ ಬಿಡ್‌: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ

R.Ashok

Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್‌ ರಾಜೀನಾಮೆಗೆ ಬಿಜೆಪಿ ಪಟ್ಟು

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !

ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !

Supreme Court upheld the validity of the UP Madarsa Act

Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

9-desi

Kannada Alphanbets: “ಕ’ ಕಾರದಲ್ಲಿನ ವಿಶೇಷ:‌ ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ

8-

ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Bid for 2036 Olympics: Official application from India to IOC

Olympics; 2036ರ ಒಲಿಂಪಿಕ್ಸ್‌ಗೆ ಬಿಡ್‌: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ

R.Ashok

Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್‌ ರಾಜೀನಾಮೆಗೆ ಬಿಜೆಪಿ ಪಟ್ಟು

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.