ತುಳುಕೂಟ ಐರೋಲಿ ವಾರ್ಷಿಕೋತ್ಸವದಲ್ಲಿ ಸಾಧಕರಿಗೆ ಸಮ್ಮಾನ
Team Udayavani, Feb 8, 2017, 11:41 AM IST
ನವಿಮುಂಬಯಿ: ತುಳುಕೂಟ ಐರೋಲಿಯ 9ನೇ ವಾರ್ಷಿಕೋತ್ಸವ ಸಮಾರಂಭವು ಜ. 28ರಂದು ಬೆಳಗ್ಗೆ ಐರೋಲಿಯ ಹೆಗ್ಗಡೆ ಭವನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ತುಳುಕೂಟ ಐರೋಲಿ ಅಧ್ಯಕ್ಷ ಹರೀಶ್ ಶೆಟ್ಟಿ ಪಡುಬಿದ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾ ರಂಭದಲ್ಲಿ ತುಳುಕೂಟ ಐರೋಲಿಯ ಹಿರಿಯ ನಾಗರಿಕ ಸದಸ್ಯರಾದ ದೊಂಬ ಎ. ಕುಕ್ಯಾನ್, ಪದ್ಮ ಕೆ. ಗೌಡ, ನೃತ್ಯ ಸಂಯೋಜನೆಗೆ ಸಹಕಾರ ನೀಡಿದ ಲಾವಣ್ಯಾ, ಅನಂತೇಶ ಮುದ್ದು ಅಂಚನ್ ಅವರನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಗೌರವಿಸಲಾಯಿತು. ಹೆಗ್ಗಡೆ ಸೇವಾ ಸಂಘ ಮುಂಬಯಿ ಅಧ್ಯಕ್ಷ ವಿಜಯ ಬಿ. ಹೆಗ್ಡೆ, ಕುಲಾಲ ಸಂಘ ನವಿಮುಂಬಯಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ರಘು ಮೂಲ್ಯ ಪಿ., ಬಿಲ್ಲವರ ಅಸೋಸಿಯೇಶನ್ ನವಿಮುಂಬಯಿ ಸ್ಥಳೀಯ ಸಮಿತಿಯ ಉಪಾಧ್ಯಕ್ಷ ವಿ. ಕೆ. ಪೂಜಾರಿ, ಕರ್ನಾಟಕ ಸಂಘ ಪನ್ವೇಲ್ ಅಧ್ಯಕ್ಷ ಕೊಲ್ಪೆ ಧನಂಜಯ ಶೆಟ್ಟಿ, ಬಂಟರವಾಣಿಯ ಗೌರವ ಸಂಪಾದಕ ಅಶೋಕ್ ಪಕ್ಕಳ, ನವಿಮುಂಬಯಿ ಹೊಟೇಲ್ ಓನರ್ ಅಸೋಸಿಯೇಶನ್ ಅಧ್ಯಕ್ಷ ದಯಾನಂದ ಶೆಟ್ಟಿ, ದೆಹಲಿ ಕರ್ನಾಟಕ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ, ವಾರ್ಷಿಕೋತ್ಸವ ಸಮಾರಂಭದ ಕಾರ್ಯಾಧ್ಯಕ್ಷ ಅನಿಲ್ ಶೆಟ್ಟಿ ಪಾಂಗಳ, ಹರೀಶ್ ಶೆಟ್ಟಿ, ಅಮರ್‌ನಾಥ್ ಶೆಟ್ಟಿ, ಅನಿಲ್ ಶೆಟ್ಟಿ, ವೇದಿಕೆಯಲ್ಲಿ ಅತಿಥಿಗಳಾಗಿ ಶ್ರೀ ಆದಿಶಕ್ತಿ ಕನ್ನಡ ಸಂಘ ಮಾಜಿವಾಡಾದ ಕಾರ್ಯದರ್ಶಿ ವಾದಿರಾಜ್ ಶೆಟ್ಟಿ, ಸಂಘದ ಉಪಾಧ್ಯಕ್ಷ ಕೆ. ಕೆ. ಹೆಬ್ಟಾರ್, ಉಪಾಧ್ಯಕ್ಷ ನಾಗೇಶ್ ಎ. ಶೆಟ್ಟಿ, ಕಾರ್ಯದರ್ಶಿ ರಾಜೇಶ್ ಬಿ. ಶೆಟ್ಟಿ, ಕೋಶಾಧಿಕಾರಿ ಗಂಗಾಧರ ಬಂಗೇರ, ಸಾಂಸ್ಕೃತಿಕ ಸಮಿತಿಯ ಅಮರನಾಥ ಶೆಟ್ಟಿ ಕಳತ್ತೂರು, ನಾಟ್ಯಗುತ್ಛ 2017 ರ ಕಾರ್ಯಾಧ್ಯಕ್ಷ ಗಿರೀಶ್ ಶೆಟ್ಟಿ, ಐರೋಲಿ ಮಾಜಿ ಅಧ್ಯಕ್ಷ ನಾಡಾಜೆಗುತ್ತು ಜಗದೀಶ್ ಶೆಟ್ಟಿ, ಜಗದೀಶ್ ಶೆಟ್ಟಿ ಕಟಪಾಡಿ, ಉಪಾಧ್ಯಕ್ಷ ನಾಗೇಶ್ ಎ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಚಿತ್ರ-ವರದಿ: ಸುಭಾಷ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ
ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ
ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.