ತುಳುನಾಡ  ಸೇವಾ ಸಮಾಜ ಮೀರಾ-ಭಾಯಂದರ್‌ ಪ್ರತಿಭಾ ಪುರಸ್ಕಾರ,ಸಮ್ಮಾನ

Team Udayavani, Jul 25, 2018, 4:41 PM IST

2407mum10.jpg

ಮುಂಬಯಿ: ತುಳುನಾಡ ಸೇವಾ ಸಮಾಜ ಮೀರಾ- ಭಾಯಂದರ್‌ ಇದರ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಸಮ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜು. 22 ರಂದು ಅಪರಾಹ್ನ ಮೀರಾರೋಡ್‌ ಶೀತಲ್‌ ನಗರದ ಮಹಾರಾಜ ಬ್ಯಾಂಕ್ವೆಟ್‌ ಸಭಾಗೃಹದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಯುನೈಟೆಡ್‌ ರಬ್ಬರ್‌ ಇಂಡಸ್ಟಿÅàಸ್‌ ಇದರ ಮಾಲಕ ಅಜಿತ್‌ ರೈ ಅವರು ಮಾತನಾಡಿ, ಮುಗª ಮಕ್ಕಳ ಮೇಲೆ ಸ್ಪರ್ಧೆ ಎಂಬ  ದಾಳಿ ಬೇಡ. ಇದರಿಂದ ಕೀಳರಿಮೆ ಉಂಟಾಗಿ ಮಾನಸಿಕ ಸ್ಥೈರ್ಯ ಕುಂದುತ್ತದೆ. ಗೊಂದಲದ ಗೂಡಾಗಿರುವ ಪುಟಾಣಿಗಳನ್ನು ಪ್ರೀತಿ, ವಾತ್ಸಲ್ಯದ ಹಾರೈಕೆಯೊಂದಿಗೆ ಬೆಳೆಸಬೇಕು. ಅಂಕಗಳು ಬದುಕಿನ ಮಾನದಂಡವಾಗಬಾರದು. ವಿದ್ಯಾರ್ಥಿಗಳ ಅಭಿರುಚಿಗೆ ತಕ್ಕಂತೆ ಪೂರಕ ವಾತಾವರಣವನ್ನು ಪಾಲಕರು ನಿರ್ಮಿಸಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಭಾಯಂದರ್‌ ಸಾಯಿ ಬಾಬಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಎನ್‌. ಎ. ಹೆಗ್ಡೆ ಇವರು ಮಾತನಾಡಿ, ಮಕ್ಕಳ ಕಲಾ ಸಂಸ್ಕೃತಿಗೆ ಮೆರುಗು ನೀಡುತ್ತಿರುವ ತುಳುನಾಡ ಸೇವಾ ಸಮಾಜದ ಶ್ರಮ ಅಭಿನಂದನೀಯ. ಡಾಕ್ಟರ್‌, ಎಂಜಿನೀಯರ್‌ ಎಂಬ ಒತ್ತಡವನ್ನು ಹೇರದೆ ಮಕ್ಕಳ ಮಾನಸಿಕ ನೆಮ್ಮದಿ ಮತ್ತು ಮನೋಸ್ಥೈರ್ಯವನ್ನು ಹೆಚ್ಚಿಸಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ಚಲನಚಿತ್ರ ಮತ್ತು ರಂಗಭೂಮಿ ಕಲಾವಿದ ಜಿ. ಕೆ. ಕೆಂಚನಕೆರೆ, ಕರಾಟೆಪಟು ರಿಯಾ ಆರ್‌. ಶೆಟ್ಟಿ, ಸಂಘಟಕ ನವೀನ್‌ ಪೂಜಾರಿ ಅವರನ್ನು ವೇದಿಕೆಯ ಗಣ್ಯರು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿದರು. ಮೀರಾ-ಭಾಯಂದರ್‌ ನಗರ ಪಾಲಿಕೆಯ ಸಭಾಪತಿ ಅರವಿಂದ ಶೆಟ್ಟಿ, ಉದ್ಯಮಿ ಭಾರತಿ ಮೋಹನ್‌ ಅಮೀನ್‌ ಮಾತನಾಡಿ ಶುಭಹಾರೈಸಿದರು. ತುಳುನಾಡ ಸೇವಾ ಸಂಘದ ಅಧ್ಯಕ್ಷ ಡಾ| ರವಿರಾಜ ಸುವರ್ಣ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಧ್ಯೇಯೋದ್ಧೇಶಗಳನ್ನು ವಿವರಿಸಿದರು.

ಸಂಸ್ಥೆಯ ಗೌರವಾಧ್ಯಕ್ಷ ಶಂಭು ಕೆ. ಶೆಟ್ಟಿ, ಉಪಾಧ್ಯಕ್ಷರುಗಳಾದ ಧನಂಜಯ ಅಮೀನ್‌ ಹಾಗೂ ವಸಂತ ಶೆಟ್ಟಿ, ಧರ್ಮದರ್ಶಿ ಶೋಭಾ ಉಡುಪ, ಕೋಶಾಧಿಕಾರಿ ರವೀಂದ್ರ ಶೆಟ್ಟಿ ಸೂಡಾ, ರಾಜೇಶ್‌ ಶೆಟ್ಟಿ ಕಾಪು, ಮಂಜಯ್ಯ ಶೆಟ್ಟಿ, ನಾರಾಯಣ ಮೂಡಬಿದ್ರೆ, ಚಂದ್ರಹಾಸ ಶೆಟ್ಟಿ, ರವಿ ಶೆಟ್ಟಿ ಶೃಂಗೇರಿ, ಜಯಪ್ರಕಾಶ್‌ ಪೂಜಾರಿ, ಮಂಜುನಾಥ ಬಿ. ಕೆ., ಶೈಲೇಶ್‌ ಉದ್ಯಾವರ, ರಾಮಚಂದ್ರ ಉಚ್ಚಿಲ್‌, ಮಹಿಳಾ ವಿಭಾಗದ ಅಮಿತಾ ಶೆಟ್ಟಿ, ಕುಶಲಾ ಶೆಟ್ಟಿ, ರೋಹಿಣಿ ರೈ, ಪ್ರತೀಮಾ ಬಂಗೇರ, ಜಯಲಕ್ಷಿ¾à ಸುವರ್ಣ, ಸುಜಾತಾ ಕೋಟ್ಯಾನ್‌, ಸುನೀತಾ ಸುವರ್ಣ, ವಸಂತಿ ಶೆಟ್ಟಿ, ಶಾಲಿನಿ ಶೆಟ್ಟಿ, ರೇಖಾ ಪೂಜಾರಿ ಇವರು ಗೌರವಿಸಿದರು.

2017-2018 ನೇ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಸಿ ಮತ್ತು ಎಚ್‌ಎಸ್‌ಸಿ ಪರೀಕ್ಷೆಯಲ್ಲಿ ಶೇ. 85 ಕ್ಕಿಂತ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಗೌರವಿಸಲಾಯಿತು. ಕಾರ್ಯಕ್ರಮವನ್ನು ನಟ ಜಿ. ಕೆ. ಕೆಂಚನಕೆರೆ ಮತ್ತು ವಾಣಿ ಶೆಟ್ಟಿ ಇವರು  ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಮಹಿಳಾ ಸದಸ್ಯೆಯರಿಂದ ಅರ್ತಿದ ಪೂ ತುಳುನಾಟಕ, ಸ್ಥಳೀಯ ಮಕ್ಕಳಿಂದ ನೃತ್ಯ ವೈಭವ ಹಾಗೂ ಗಣೇಶ್‌ ಎರ್ಮಾಳ್‌ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು. 

ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Man enters church and chants Jai Shri Ram in Meghalaya: Case registered

Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್‌ ಘೋಷಣೆ: ಕೇಸು ದಾಖಲು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Man enters church and chants Jai Shri Ram in Meghalaya: Case registered

Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್‌ ಘೋಷಣೆ: ಕೇಸು ದಾಖಲು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.