ತುಳು ಸಂಘ ಬರೋಡ ಇದರ ಮೂವತ್ತನೇ ವಾರ್ಷಿಕ ಮಹಾಸಭೆ
Team Udayavani, Aug 23, 2017, 1:53 PM IST
ಬರೋಡ: ತುಳು ಸಂಘ ಬರೋಡ ಇದರ ಮೂವತ್ತರ ಸಂಭ್ರಮದ ಅಂಗವಾಗಿ ವಿಶೇಷ ಕಾರ್ಯಕ್ರಮವು ಆ. 15ರಂದು ಸ್ವಾತಂತ್ರ್ಯ ದಿನಾಚರಣೆಯ ದಿನದಂದು ನಡೆಯಿತು. ಮಕ್ಕಳಿಗಾಗಿ ವೈವಿಧ್ಯಮಯ ಕಾರ್ಯಕ್ರಮ ಹಾಗೂ ವಾರ್ಷಿಕ ಮಹಾಸಭೆಯು ಇದೇ ಸಂದರ್ಭದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ತುಳು ಸಂಘ ಬರೋಡ ಅಧ್ಯಕ್ಷ ಶಶಿಧರ ಬಿ. ಶೆಟ್ಟಿ ಬೆಳ್ತಂಗಡಿ ಅವರು ವಹಿಸಿದ್ದರು. ದಯಾನಂದ ಬೋಂಟ್ರಾ, ಎಸ್ಕೆ ಹಳೆಯಂಗಡಿ, ವಾಸು ಪೂಜಾರಿ, ಬಾಲಕೃಷ್ಣ ಶೆಟ್ಟಿ, ಸರಳಾ ಬಿ. ಶೆಟ್ಟಿ ಹಾಗೂ ಸಂಸ್ಥೆಯ ಹಿರಿಯ ಗಣ್ಯರು ಉಪಸ್ಥಿತರಿದ್ದರು. ರಾಷ್ಟ್ರಗೀತೆಯೊಂದಿಗೆ ವಾರ್ಷಿಕ ಮಹಾಸಭೆಯು ನಡೆಯಿತು.
ಸಂಸ್ಥೆಯ ಪದಾಧಿಕಾರಿಗಳು ವಾರ್ಷಿಕ ವರದಿ ಮತ್ತು ಲೆಕ್ಕಪತ್ರಗಳನ್ನು ಮಂಡಿಸಿ ಸರ್ವಾನುಮತದಿಂದ ಮಂಜೂರು ಗೊಳಿಸಿಕೊಂಡರು. ಮುಂದಿನ ಎರಡು ವರ್ಷಗಳಿಗಾಗಿ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸ ಲಾಯಿತು. ಅಧ್ಯಕ್ಷರಾಗಿ ಶಶಿಧರ ಬಿ. ಶೆಟ್ಟಿ ಬೆಳ್ತಂಗಡಿ, ಉಪಾಧ್ಯಕ್ಷರಾಗಿ ರವಿ ಸಾಲ್ಯಾನ್, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಬಾಲಕೃಷ್ಣ ಶೆಟ್ಟಿ, ಜತೆ ಕಾರ್ಯದರ್ಶಿಗಳಾಗಿ ವಾಸು ಸುವರ್ಣ ಮತ್ತು ಬಾಲಕೃಷ್ಣ ರೈ, ಜತೆ ಕೋಶಾಧಿಕಾರಿಯಾಗಿ ಪ್ರಶಾಂತ್ ಹೆಗ್ಡೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ ದಯಾನಂದ ಬೋಂಟ್ರಾ ಹಾಗೂ ಹಿರಿಯರಾದ ಎಸ್ಕೆ ಹಳೆಯಂಗಡಿ ಮತ್ತು ಎಸ್. ಜಯರಾಮ ಶೆಟ್ಟಿ ಅವರನ್ನು ಪ್ರಧಾನ ಸಲಹೆಗಾರರು ಮತ್ತು ಸಂಯೋಜಕರನ್ನಾಗಿ ನೇಮಿಸಲಾಯಿತು.
ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಡಾ| ಶರ್ಮಿಳಾ ಜೈನ್, ಉಪಾಧ್ಯಕ್ಷೆಯರಾಗಿ ಸವಿತಾ ಸೋಮನಾಥ್ ಪೂಜಾರಿ ಪ್ರಧಾನ ಕಾರ್ಯದರ್ಶಿಯಾಗಿ ಮಂಜುಳಾ ಗೌಡ ಅವರು ಆಯ್ಕೆಯಾದರು.
ಅಧ್ಯಕ್ಷ ಶಶಿಧರ ಬಿ. ಶೆಟ್ಟಿ ಬೆಳ್ತಂಗಡಿ ಅವರು ಮಾತನಾಡಿ, ಕಳೆದ ಮೂರು ದಶಕಗಳ ತುಳು ಸಂಘದ ಸಾಧನೆಗಳು ನಾಡು, ಸೇರಿದಂತೆ ದೇಶ-ವಿದೇಶಗಳ ತುಳು-ಕನ್ನಡಿಗ ಬಾಂಧವರ ಮನಸೂರೆಗೊಂಡಿದೆ. ಒಳ್ಳೆಯ ಸಾಧನೆಗಳಿಗೆ ಎಲ್ಲರ ಪ್ರೋತ್ಸಾಹ, ಸಹಕಾರ ಸದಾಯಿರಬೇಕು. ಮುಂದಿನ ವರ್ಷಗಳಲ್ಲಿ ಇನ್ನೂ ಹೆಚ್ಚಿನ ತಾಯಿ ನುಡಿಯ ಸೇವೆಯನ್ನು ಮಾಡುವ ಸಂಕಲ್ಪ ನಮ್ಮದು ಎಂದರು.
ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಜಿನರಾಜ್ ಪೂಜಾರಿ ನೂತನ ಕಾರ್ಯಕಾರಿ ಸಮಿತಿಯನ್ನು ಘೋಷಿಸಿರು. ಮಕ್ಕಳಿಗಾಗಿ ತುಳು ಭಾಷಣ ಸ್ಪರ್ಧೆ, ದೇಶಭಕ್ತಿ, ಛದ್ಮವೇಷ ಇತ್ಯಾದಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪದಾಧಿಕಾರಿಗಳು ಬಹುಮಾನ ವಿತರಿಸಿ ಶುಭ ಹಾರೈಸಿದರು. ವಂದನಾ ಆರ್. ಸಾಲ್ಯಾನ್ ಮತ್ತು ತಂಡದವರಿಂದ ಮಕ್ಕಳ ಶೈಕ್ಷಣಿಕ ಕಾರ್ಯಕ್ರಮ ನಡೆಯಿತು. ಸ್ಫರ್ಧೆಗಳ ತೀರ್ಪುಗಾರರಾಗಿ ಶರ್ಮಿಳಾ ಜೈನ್, ಮಂಜುಳಾ ಗೌಡ, ಸುನೀತಾ ಪೂಜಾರಿ ಅವರು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ಹೊಸ ಸೇರ್ಪಡೆ
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್‍ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..
Mangaluru: MCC ಬ್ಯಾಂಕ್ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.