ತುಳುನಾಡ ವೈಭವದ ಅನಾವರಣ ಅಭಿನಂದನೀಯ: ಕುಶಲ್ ಸಿ. ಭಂಡಾರಿ
Team Udayavani, Aug 23, 2019, 1:33 PM IST
ಥಾಣೆ, ಆ.22: ನಮ್ಮ ಸಂಸ್ಕೃತಿ ನಾಶವಾದರೆ ಒಂದು ಜನಾಂಗವೇ ನಾಶವಾದಂತೆ. ನಮ್ಮ ತುಳುನಾಡು ಭವ್ಯ ಸಂಸ್ಕೃತಿಯ ಬೀಡಾಗಿದೆ. ಇಲ್ಲಿ ಅನೇಕ ಜಾತಿ ಧರ್ಮ, ಪಂಗಡಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿದ ಹಿರಿಮೆ ನಮ್ಮ ಈ ಭವ್ಯ ಸಂಸ್ಕೃತಿಗೆ ಸಲ್ಲುವಂತಿದೆ. ಆದ್ದರಿಂದ ನಾವು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ಥಾಣೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ಕುಶಲ್ ಸಿ. ಭಂಡಾರಿ ಅವರು ಹೇಳಿದರು.
ಆ. 11ರಂದು ರವಿವಾರ ಥಾಣೆ ಪಶ್ಚಿಮದ ಘೋಡ್‌ಬಂದರ್ ರೋಡ್‌ನಲ್ಲಿರುವ ಹೊಟೇಲ್ ವಿಹಾಂ ಗ್‌ಇನ್ ಸಭಾಂಗಣದಲ್ಲಿ ಥಾಣೆ ಬಂಟ್ಸ್ ಅಸೋಸಿಯೇಶನ್ ಇದರ ಮಹಿಳಾ ವಿಭಾಗದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತುಳುನಾಡಿನ ಸಂಸ್ಕೃತಿಯನ್ನು ಸಾರುವ ಆಟಿ ತಿಂಗಳ ಮಹತ್ವತೆಯನ್ನು ಬಿತ್ತರಿಸುವ ತುಳುನಾಡ್ದ್ ಪೊರ್ಲು- ಆಟಿದ ನೆಂಪು ಎಂಬ ವಿಶೇಷ ಕಾರ್ಯಕ್ರಮದ ಅಧ್ಯಕ್ಷತೆ ಸ್ಥಾನವನ್ನು ವಹಿಸಿ ಮಾತನಾಡಿ, ಇಂದು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿರುವ ಸುಮತಿ ಕೆ. ಶೆಟ್ಟಿ ಮತ್ತು ಅವರ ಸಮಿತಿಯ ಎಲ್ಲಾ ಮಹಿಳಾ ಸದಸ್ಯರು ಸೇರಿ ಅರ್ಥಪೂರ್ಣ ಕಾರ್ಯಕ್ರಮದೊಂದಿಗೆ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಾತ್ರವಲ್ಲದೆ ಆರ್ಥಿಕವಾಗಿ ತೊಂದರೆಯಲ್ಲಿರುವ ಓರ್ವ ಮಹಿಳೆಯನ್ನು ಗುರುತಿಸಿ ಅವರ ಕಷ್ಟಕ್ಕೆ ನೆರವಾಗುವ ಕೆಲಸವನ್ನೂ ಈ ಸಂದರ್ಭದಲ್ಲಿ ಮಾಡಿದ್ದಾರೆ. ನಿಜವಾಗಿಯೂ ಮಹಿಳಾ ವಿಭಾಗದವರು ಹಮ್ಮಿಕೊಂಡ ತುಳುನಾಡಿನ ಸಂಸ್ಕೃತಿ, ವೈಭವವನ್ನು ಆನಾವರಣಗೊಳಿಸಿದ ಕಾರ್ಯವೈಖರಿ ಶ್ಲಾಘನೀಯ. ಸಂಸ್ಥೆಯ ಮಹಿಳಾ ವಿಭಾಗದ ಕಾರ್ಯವೈಖರಿಯನ್ನು ಅಭಿನಂದಿಸಿದರು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಮುಲುಂಡ್ ಬಂಟ್ಸ್ ಇದರ ಉಪಾಧ್ಯಕ್ಷ ಶಾಂತಾರಾಮ್ ಬಿ. ಶೆಟ್ಟಿ, ಮುಲುಂಡ್ ಬಂಟ್ಸ್ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ವಿನುತಾ ಶೇಖರ್ ಶೆಟ್ಟಿ, ವಿಲಾಸಿನಿ ಕುಶಲ್ ಭಂಡಾರಿ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಸಮಿತಿ ಕೆ. ಶೆಟ್ಟಿ ಹಾಗೂ ಮಹಿಳಾ ವಿಭಾಗದ ಪದಾಧಿಕಾರಿಗಳಾದ ಕುಶಲಾ ಶೆಟ್ಟಿ, ಶರ್ಮಿಳಾ ಶೆಟ್ಟಿ, ಮೋಹಿನಿ ಶೆಟ್ಟಿ, ತಾರಾ ಶೆಟ್ಟಿ ಉಪಸ್ಥಿತರಿದ್ದರು.
ಮಹಿಳಾ ವಿಭಾಗದ ಸದಸ್ಯೆ ಜ್ಯೋತಿ ಎನ್. ಶೆಟ್ಟಿಯವರು ಪ್ರಾರ್ಥನೆಗೈದರು. ಅತಿಥಿ-ಗಣ್ಯರು, ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳ, ಸ್ಥಾಪಕ ಸದಸ್ಯರು, ಮಹಿಳಾ ವಿಭಾಗದ ಪದಾಧಿಕಾರಿಗಳು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಮತಿ ಕೆ. ಶೆಟ್ಟಿ ಸ್ವಾಗತಿಸಿದರು. ಮಹಿಳಾ ವಿಭಾಗದ ಪದಾಧಿಕಾರಿಗಳಾದ ಶರ್ಮಿಳಾ ಶೆಟ್ಟಿ, ತಾರಾ ಶೆಟ್ಟಿ, ಮೋಹಿನಿ ಶೆಟ್ಟಿ ಅವರು ಅತಿಥಿ ಗಣ್ಯರನ್ನು ಪರಿಚಯಿಸಿದರು.
ಅತಿಥಿ ಗಣ್ಯರನ್ನು ಅಧ್ಯಕ್ಷ ಹಾಗೂ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮತ್ತು ಪದಾಧಿಕಾರಿಗಳು ಶಾಲು ಹೊದಿಸಿ, ಹೂಗುಚ್ಛ ನೀಡಿ ಗೌರವಿಸಿದರು. ಇದೇ ವೇಳೆ ಮಹಿಳಾ ವಿಭಾಗದ ವತಿಯಿಂದ ಅಧ್ಯಕ್ಷ ಕುಶಲ್ ಸಿ. ಭಂಡಾರಿ ಮತ್ತು ವಿಲಾಸಿನಿ ಕುಶಲ್ ಭಂಡಾರಿ ದಂಪತಿಯನ್ನು ಶಾಲು ಹೊದಿಸಿ, ಪುಷ್ಪಗುಚ್ಛದೊಂದಿಗೆ ಸಮ್ಮಾನಿಸಿ ಅಭಿನಂದಿಸಲಾಯಿತು. ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಾರಿಜಾ ಶೆಟ್ಟಿ ಅವರಿಗೆ ಮಹಿಳಾ ವಿಭಾಗದ ವತಿಯಿಂದ ಆರ್ಥಿಕ ನೆರವನ್ನು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಮತಿ ಕೆ. ಶೆಟ್ಟಿ ಮತ್ತು ಪದಾಧಿಕಾರಿಗಳು ನೀಡಿ ಸಹಕರಿಸಿದರು.
ಲತಾ ಶೆಟ್ಟಿ ಮತ್ತು ತನಿಷ್ ಅವರಿಂದ ಆಟಿ ಕಳೆಂಜಾದ ಪ್ರಾತ್ಯಕ್ಷಿತೆ ನಡೆಯಿತು. ಸಂಘದ ಸದಸ್ಯರ ಮಕ್ಕಳಿಂದ ಹುಲಿವೇಷ ನೃತ್ಯದ ಪ್ರಾತ್ಯಕ್ಷಿಕೆ , ಕೋಳಿಕಟ್ಟ, ತೆಂಗಿನಕಾಯಿ ಒಡೆಯುವ ಆಟ, ತುಳುನಾಡಿನ ಸೊಗಸನ್ನು ಬಣ್ಣಿಸುವ ಮಹಿಳಾ ವಿಭಾಗದ ಸದಸ್ಯೆಯರಿಂದ ಸಮೂಹಗೀತೆ, ತುಳುನಾಡಿನ ವೈಭವವನ್ನು ಸಾರುವ ಮನೋರಂಜನಾ ಕಾರ್ಯಕ್ರಮಗಳು ಜರಗಿತು. ಕಾರ್ಯಕ್ರಮವನ್ನು ಗೌರವ ಪ್ರಧಾನ ಕಾರ್ಯದರ್ಶಿ ಸುನಿಲ್ ಜೆ. ಶೆಟ್ಟಿಯವರು ನಡೆಸಿಕೊಟ್ಟರು.
ತುಳುನಾಡಿನ ವಿಶೇಷತೆಯಿಂದ ಕೂಡಿದ ಕೆಲವು ಸ್ಪರ್ಧೆಗಳನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದ ಆಡ್ವಕೇಟ್ ಪದ್ಮನಾಭ ಶೆಟ್ಟಿ, ಸುಲೋಚನ ಬಿ, ಶೆಟ್ಟಿ, ಸುಪ್ರಿತಾ ಶೆಟ್ಟಿ, ವಿದ್ಯಾ ಶೆಟ್ಟಿ, ಉಮೇಶ್ ಶೆಟ್ಟಿ ಮೊದಲಾದವರಿಗೆ ಅತಿಥಿ ಗಣ್ಯರು, ಸಂಘದ ಪದಾಧಿಕಾರಿಗಳು ಬಹುಮಾನವನ್ನು ನೀಡಿ ಅಭಿನಂದಿಸಿದರು. ಸುಲೋಚನಾ ಬಿ. ಶೆಟ್ಟಿ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ರೇವತಿ ಎಸ್. ಶೆಟ್ಟಿ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಪ್ರಮೋದಾ ಮಾಡ ಕ್ರಮವಾಗಿ ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಮುಂದಿನ ಕಾರ್ಯಕ್ರಮಗಳ ಮಾಹಿತಿಯನ್ನು ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಕರ್ನೂರು ಮೋಹನ್ ರೈಯವರು ತಿಳಿಸಿದರು. ಶರ್ಮಿಳಾ ಶೆಟ್ಟಿ ವಂದಿಸಿದರು. ಸಂಘದ ಸ್ಥಾಪಕ ಸದಸ್ಯ ಕೇಶವ ಎಂ. ಆಳ್ವರವರ ಮುಂದಾಳತ್ವದಲ್ಲಿ ನಿರ್ಮಿತ ತುಳುನಾಡಿನ ವೈಭವವನ್ನು ಬಿತ್ತರಿಸುವ ಸುಂದರ ವೇದಿಕೆ ಮತ್ತು ತುಳುನಾಡಿನ ಸಂಸ್ಕೃತಿಯ ಪ್ರತೀಕವಾದ ಕೆಲವು ವಸ್ತುಗಳ ಪ್ರದರ್ಶನ ಕಾರ್ಯಕ್ರಮಕ್ಕೆ ಹೆಚ್ಚಿನ ಮೆರಗನ್ನು ನೀಡಿತ್ತು. ಇತ್ತೀಚೆಗೆ ನಿಧನರಾದ ಹಿರಿಯ ಸಾಹಿತಿ ಏರ್ಯ ಲಕ್ಷ್ಮೀ ನಾರಾಯಣ ಶೆಟ್ಟಿ , ಮಾಜಿ ಅಧ್ಯಕ್ಷರುಗಳಾದ ಪ್ರೊ. ಸೀತಾರಾಮ್ ಆರ್. ಶೆಟ್ಟಿ, ಸಂಜೀವ ಶೆಟ್ಟಿ, ಜ್ಯೋತಿ ಶೆಟ್ಟಿ ಮತ್ತು ಜೆ. ಕೆ. ಪೈಲ್ಸ್ನ ಸಂಜೀವ ಶೆಟ್ಟಿ ಅವರ ಪತ್ನಿ ಕುಮಾರಿ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.