ಹೆಗ್ಗಡೆ ಭವನದಲ್ಲಿ ದಿ| ವಿ. ಟಿ. ಹೆಗ್ಡೆ ಅವರಿಗೆ ಶ್ರದ್ಧಾಂಜಲಿ ಸಭೆ
Team Udayavani, Jul 12, 2017, 3:05 PM IST
ನವಿಮುಂಬಯಿ: ಹೆಗ್ಗಡೆ ಸೇವಾ ಸಂಘ ಮುಂಬಯಿ ವತಿಯಿಂದ ಜು. 8ರಂದು ಸಂಜೆ ಐರೋಲಿಯ ಹೆಗ್ಗಡೆ ಭವನದಲ್ಲಿ ದಿ| ವಿ. ಟಿ. ಹೆಗ್ಡೆ ಅವರಿಗೆ ಶ್ರದ್ದಾಂಜಲಿ ಸಭೆಯನ್ನು ಏರ್ಪಡಿಸಲಾಗಿತ್ತು.
ಹೆಗ್ಗಡೆ ಸೇವಾ ಸಂಘದ ಅಧ್ಯಕ್ಷ ವಿಜಯ ಬಿ. ಹೆಗ್ಡೆ ಅವರು ದಿ| ವಿ. ಟಿ. ಹೆಗ್ಡೆ ಅವರ ಭಾವಚಿತ್ರಕ್ಕೆ ಪುಷ್ಪವೃಷ್ಟಿಗೈದು ನುಡಿನಮನ ಸಲ್ಲಿಸಿ, ಸಹೃದಯತೆ, ಪ್ರೀತಿ ವಿಶ್ವಾಸಗಳಿಂದ ಸದಾ ಬೆರೆತು, ಸದಾ ಹೆಗ್ಗಡೆ ಸಮಾಜದ ಉನ್ನತಿಯನ್ನು ಬಯಸಿದ ವಿ. ಟಿ. ಹೆಗ್ಡೆ ಅವರು ಮುಂಬಯಿ ಮಹಾನಗರದಲ್ಲಿ ಸಮಾಜದ ಮಿತ್ರರನ್ನು ಒಂದುಗೂಡಿಸಿ ಹೆಗ್ಗಡೆ ಸೇವಾ ಸಂಘ ಎಂಬ ಸಂಸ್ಥೆಯನ್ನು ಹುಟ್ಟು ಹಾಕಲು ಕಾರಣೀಭೂತರಾಗಿದ್ದರು. ಅಲ್ಲದೆ ಸಂಸ್ಥೆಯ ಶ್ರೇಯೋಭಿವೃದ್ದಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಸಂಸ್ಥೆಯ ಉನ್ನತ ಹುದ್ದೆ ಅಧ್ಯಕ್ಷೀಯ ಪದವಿಯನ್ನು ಅಲಂಕರಿಸಿ ಉತ್ತಮ ಸಮಾಜಮುಖೀ ಕಾರ್ಯಕ್ರಮಗಳನ್ನು ಮಾಡಿ ಐರೋಲಿಯಲ್ಲಿ ನಿರ್ಮಿತಗೊಂಡ ಹೆಗ್ಗಡೆ ಭವನ ಇದರ ಸಭಾ ಭವನವನ್ನು ಅವರ ಪತ್ನಿ ದಿ| ಜಯಂತಿ ಹೆಗ್ಡೆ ಅವರ ಸವಿನೆನಪಿಗಾಗಿ ನಿರ್ಮಿಸಿ ಅದರಿಂದ ಸಮಾಜ ಮುಖೀ ಕಾರ್ಯಕ್ರಮಗಳನ್ನು ನೀಡಲು ಸಹಕರಿಸಿದ ಒಬ್ಬ ನಿಜವಾದ ಸಮಾಜ ಪ್ರೇಮಿಯಾಗಿ ಯುವ ಪೀಳಿಗೆಗೆ ದಾರಿದೀಪವಾಗಿದ್ದಾರೆ ಎಂದು ಹೇಳಿದರು.
ಮಾಜಿ ಅಧ್ಯಕ್ಷ ವಿ. ಎಸ್. ಹೆಗ್ಡೆ ಅವರು ಮಾತನಾಡಿ, ಸಮಾಜಕ್ಕಾಗಿ ತನ್ನ ಜೀವನವನ್ನೇ ಅರ್ಪಣೆ ಮಾಡಿದ ಸಂಘಟಕ ವಿ. ಟಿ. ಹೆಗ್ಡೆ ಅವರಾಗಿದ್ದಾರೆ. ಸಂಘಟನೆಗಾಗಿ ಹಗಲಿರುಳು ಶ್ರಮಿಸುವುದರೊಂದಿಗೆ ಸಂಸ್ಥೆಯು ಬಲಾಡ್ಯಗೊಳ್ಳುವಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎಂದರು.
ಹೆಗ್ಗಡೆ ಸೇವಾ ಸಂಘದ ಮಾಜಿ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ ಅವರು ಮಾತನಾಡಿ, ತಾನು ಶಿಸ್ತಿನ ಸಿಪಾಯಿಯಾಗಿ, ಸಮಾಜಕ್ಕೂ ಶಿಸ್ತನ್ನು ರೂಪಿಸುವಲ್ಲಿ ಅವರ ಕಾರ್ಯ ಅಭಿನಂದನೀಯ. ಅವರ ಆದರ್ಶಗಳು ನಮಗೆಲ್ಲ ದಾರಿದೀಪವಾಗಿದೆ. ಭವನ ನಿರ್ಮಾಣದ ಸಂದರ್ಭದಲ್ಲಿ ಅವರು ನೀಡಿದ ಸಹಾಯ, ಪ್ರೋತ್ಸಾಹ ಅವಿಸ್ಮರಣೀಯವಾಗಿದೆ ಎಂದು ಹೇಳಿದರು.
ಸಮಾಜದ ಸಂಘಟಕ, ಕಲಾವಿದ ಅನಿಲ್ ಹೆಗ್ಡೆ ಅವರು ಮಾತನಾಡಿ, ಪ್ರಸಿದ್ಧಿಗೆ, ಹೆಸರಿಗೋಸ್ಕರ ದಾನಮಾಡದೆ ಸಮಾಜದ ಮೇಲಿನ ಪ್ರೀತಿಯಿಂದ ಸಂಘಟನೆಗೆ ದೇಣಿಗೆ ನೀಡಿದ ಮಹಾನ್ ನಾಯಕ ಅವರಾಗಿದ್ದಾರೆ. ಸಮಾಜದ ಈ ಸಂಘನೆಯಲ್ಲಿ ಅವರ ಹೆಸರು ಸ್ಮರಣೀಯವಾಗಲಿದೆ ಎಂದು ಹೇಳಿದರು.
ಮಾಜಿ ಅಧ್ಯಕ್ಷ ರತ್ನಾಕರ ಹೆಗ್ಡೆ ಅವರು ಮಾತನಾಡಿ, ಇಟ್ಟದ್ದು ತನಗೆ ಬಚ್ಚಿಟ್ಟದ್ದು ಪರರಿಗೆ ಎಂಬ ಸಿದ್ಧಾಂತವನ್ನು ರೂಪಿಸಿಕೊಂಡ ಸಮಾಜದ ನಾಯಕ ಅವರಾಗಿದ್ದಾರೆ ಎಂದರು. ಎಲ್. ಸಿ. ಹೆಗ್ಡೆ ಅವರು ಮಾತನಾಡಿ, ಅನೇಕ ವರ್ಷಗಳಿಂದ ಅವರೊಂದಿಗೆ ಸಂಘಟನೆಯೊಂದಿಗೆ ಸೇವೆ ಮಾಡುವ ಭಾಗ್ಯ ನನಗೆ ದೊರೆತಿದೆ. ಸಮಾಜ ಸೇವೆಯ ಪಾಠವನ್ನು ಅವರಿಂದ ನಾನು ಕಲಿತಿದ್ದೇನೆ ಎಂದರು.
ದಿ| ವಿ. ಟಿ. ಹೆಗ್ಡೆ ಅವರ ಪುತ್ರ ದಿನೇಶ್ ಹೆಗ್ಡೆ ಅವರು ಮಾತನಾಡಿ, ತಂದೆಗಿಂತಲೂ ಓರ್ವ ಉತ್ತಮ ಗುರುವಿನಂತೆ ನಮಗೆ ಮಾರ್ಗದರ್ಶನ ನೀಡಿ ನಮ್ಮನ್ನು ಬೆಳೆಸಿದ್ದಾರೆ. ಅವರಂತಹ ತಂದೆ ನನ್ನ ಪಾಲಿಗೆ ದೊರೆತದ್ದು ಪೂರ್ವ ಜನ್ಮದ ಪುಣ್ಯದ ಫಲವಾಗಿದೆ ಎಂದು ಹೇಳಿದರು.
ಹೆಗ್ಗಡೆ ಸೇವಾ ಸಂಘ ಮುಂಬಯಿ ಗೌರವಾಧ್ಯಕ್ಷ ಸಂಜೀವ ಪಿ. ಹೆಗ್ಡೆ, ಉಪಾಧ್ಯಕ್ಷರಾದ ಬಿ. ಗೋಪಾಲ್ ಹೆಗ್ಡೆ, ಜಯರಾಮ ಹೆಗ್ಡೆ, ಕಾರ್ಯದರ್ಶಿ ಶಂಕರ್ ಆರ್. ಹೆಗ್ಡೆ, ಕೋಶಾಧಿಕಾರಿ ರಮೇಶ್ ಎಂ. ಹೆಗ್ಡೆ,
ಜತೆ ಕಾರ್ಯದರ್ಶಿ ರವಿ ಎಸ್. ಹೆಗ್ಡೆ, ಜತೆ ಕೋಶಾಧಿಕಾರಿ ಚಂದ್ರಶೇಖರ ಬಿ. ಹೆಗ್ಡೆ, ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಯುವ ವಿಭಾಗ, ಮಹಿಳಾ ವಿಭಾಗದ ಪದಾಧಿಕಾರಿಗಳು, ಸದಸ್ಯ ಬಾಂಧವರು ಉಪಸ್ಥಿತರಿದ್ದು, ದಿ| ವಿ. ಟಿ. ಹೆಗ್ಡೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಚಿತ್ರ-ವರದಿ: ಸುಭಾಷ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Weightlifting: ಏಷ್ಯನ್ ವೇಟ್ ಲಿಫ್ಟಿಂಗ್; ಭಾರತಕ್ಕೆ ಎರಡು ಬೆಳ್ಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.