ವಡಾಲ ಎನ್‌ಕೆಇಎಸ್‌ ಶಿಕ್ಷಣ ಸಂಸ್ಥೆಯಲ್ಲಿ  ಶ್ರೀ ಶಾರದಾಪೀಠ ಉದ್ಘಾಟನೆ

Team Udayavani, Jan 8, 2019, 7:02 AM IST

0601mum01.jpg

ಮುಂಬಯಿ: ಶಾಸ್ತ್ರ ದಲ್ಲಿ ಹೇಳಿದ ನ್ಯಾಯದಂತೆ ಪ್ರತಿ ಯೊಬ್ಬರಿಗೂ ಶಾರದಾ ಮಾತೆಯ ಅನುಗ್ರಹವು ಲಭ್ಯವಾಗುತ್ತದೆ. ಆರಂಭ  ಶೂರತ್ವದ ಬದಲು ಚಿಕ್ಕ ದಾಗಿ ಆರಂಭಿಸಿ ಹಂತ ಹಂತವಾಗಿ ಬೆಳೆದು ಸ್ವತಂತ್ರ ವಿಶ್ವವಿದ್ಯಾಲಯ ಮಟ್ಟಕ್ಕೆ ಬೆಳೆದು ನಿಂತಿರುವ ಈ ವಿದ್ಯಾಸಂಸ್ಥೆಯು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶೃಂಗೇರಿಯ ಶ್ರೀ ವಿದು ಶೇಖರ ಭಾರತಿ ಸ್ವಾಮೀಜಿ ಅವರು ನುಡಿದರು.

ಜ. 1ರಂದು ವಡಾಲ ಎನ್‌ಕೆಇಎಸ್‌ ಶಿಕ್ಷಣ ಸಂಸ್ಥೆಯ ಪದವಿ ಮತ್ತು ಮ್ಯಾನೇಜ್‌ಮೆಂಟ್‌ ಕಾಲೇಜಿನ ಕಟ್ಟಡದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಶಾರದಾಪೀಠವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀಗಳು, ವಿದ್ಯಾಸಂಸ್ಥೆಗಳಲ್ಲಿ ಸಂಸ್ಕಾರ ಬೋಧನೆ ಬಹಳ ಮುಖ್ಯವಾಗಿದೆ. ಪ್ರತಿಯೋರ್ವನ ಜೀವನಕ್ಕೆ ಉಪ ಯೋಗವಾಗುವಂತಹ ಜ್ಞಾನವನ್ನು ಪಡೆದು ತಮ್ಮ ಹಾಗೂ ಸಮಾಜವನ್ನು ಉದ್ಧಾರ ಮಾಡುವಂತಹ ಶಿಕ್ಷಣವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಶಿಕ್ಷಕನಾದವನು ಸತತವಾದ ಅಧ್ಯ ಯನದ ಮುಖಾಂತರ ಅತ್ಯಂತ ಹೆಚ್ಚಿನ ಜ್ಞಾನವನ್ನು ವಿದ್ಯಾರ್ಥಿಗಳಿಗೆ ನೀಡಬೇಕು. ವಿದ್ಯೆಯಲ್ಲಿ ಲೌಖೀಕ ಮತ್ತು ಅಲೌಖೀಕ ವಿದ್ಯೆ ಬಹಳ ಪ್ರಾಮುಖ್ಯತೆಯನ್ನು ಪಡೆದಿವೆ. ವೇದ-ವೇದಾಂತ, ಉಪನಿಷತ್‌, ಪುರಾಣಗಳನ್ನೊಳಗೊಂಡ ಶಾಸ್ತ್ರವಿದ್ಯೆ, ಸಾಂಪ್ರದಾಯಿಕ ವಿದ್ಯೆಯಾಗಿದ್ದು, ಅಂದು ದೊರೆಯುತ್ತಿದ್ದ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಇಂದು ಕೂಡ ದೊರೆಯಬೇಕಾಗಿದೆ. ಸಂಸ್ಕೃತಿಯ ಕುರಿತು ಗೌರವ ಬರುವಂತಹ ಶಿಕ್ಷಣವನ್ನು ನೀಡಬೇಕಾಗಿದೆ. ಧರ್ಮಶಾಸ್ತ್ರದಲ್ಲಿ ತಿಳಿಸಿದಂತೆ ಏಕಾದಶಿ ವ್ರತ, ಉಪವಾಸ ಮೊದಲಾದವುಗಳನ್ನು ಬೇರೆಯ ವರಿಂದ ತಿಳಿದುಕೊಳ್ಳುವ ಬದಲು ವಿದ್ಯಾಸಂಸ್ಥೆಗಳು ಸಂಸ್ಕಾರ ಬೋಧನೆ ಮಾಡಿದರೆ ಉತ್ತಮ ನಾಗರಿಕರಾಗಲು ಸಾಧ್ಯವಿದೆ ಎಂದು ನುಡಿದು, ಶೃಂಗೇರಿ ಶಾರದಾ ಪೀಠದ 36ನೇ ಗುರುಗಳಾದ ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರ ಅನುಗ್ರಹ ತಮ್ಮೆಲ್ಲರಿಗೆ ಸದಾ ಇರಲಿ ಎಂದು ಹಾರೈಸಿದರು.

ಸಂಸ್ಥೆಯ ಪದಾಧಿಕಾರಿ ಶಶಿಕಾಂತ್‌ ಜೋಶಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಸಾಧನೆಗಳನ್ನು ವಿವರಿಸಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. 

ಸಂಗೀತ ಶಿಕ್ಷಕ ಸಚಿನ್‌ ಮೋರೆ ಪ್ರಾರ್ಥನೆಗೈದರು. ಸಂಸ್ಥೆಯ ಪದಾಧಿ ಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಇನ್ನಿತರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದು ಶ್ರೀಗಳಿಂದ ಆಶೀರ್ವಚನ ಪಡೆದರು.

ಎನ್‌ಕೆಇಎಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಾರ್ಥಸಾರಥಿ ನಾಯಕ್‌, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಅನಂತ ಬನವಾಸಿ, ಪದ್ಮಜಾ ಬನವಾಸಿ, ಶಂಕರ ಲಿಂಗ, ವಸಂತ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಜಸ್ಟೀಸ್‌ ಬಿ. ಎನ್‌. ಶ್ರೀಕೃಷ್ಣ, ಪೂರ್ಣಿಮಾ ಶ್ರೀಕೃಷ್ಣ, ಶಾಲಾ ಮುಖ್ಯ ಶಿಕ್ಷಕಿ ಸರೋಜಾ ರಾವ್‌, ಭವಾನಿ ಭಾರ್ಗವ, ಮೈಸೂರು ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷೆ ಕೆ. ಕಮಲಾ ಮೊದಲಾದವರು ಉಪಸ್ಥಿತರಿದ್ದರು. 

ಶ್ರೀಗಳು ಭಕ್ತರನ್ನು ಮಂತ್ರಾಕ್ಷತೆ ಯನ್ನಿತ್ತು ಹರಸಿದರು.

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.