ವಸಾಯಿ ಶ್ರೀ ಮಣಿಕಂಠ ಸೇವಾ ಸಮಿತಿ: 19ನೇ ವಾರ್ಷಿಕ ಶ್ರೀ ಅಯ್ಯಪ ಮಹಾಪೂಜೆ
Team Udayavani, Dec 25, 2020, 12:39 PM IST
ಮುಂಬಯಿ, ಡಿ. 24: ವಸಾಯಿ ಪಶ್ಚಿಮದ ಶ್ರೀ ಮಣಿಕಂಠ ಸೇವಾ ಸಮಿತಿಯ 19ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಡಿ. 20ರಂದು ವಸಾಯಿ ಪಶ್ಚಿಮದ ಅರ್ನ ಬ್ಯಾಂಕ್ವೆಟ್ ಸಭಾಗೃಹದಲ್ಲಿ ನಡೆಯಿತು.
ಸಮಿತಿಯ ಗೌರವ ಕಾರ್ಯಾಧ್ಯಕ್ಷ ಕರ್ನೂರು ಶಂಕರ ಆಳ್ವ ಅವರ ಮಾರ್ಗದರ್ಶನದಲ್ಲಿ, ಅಧ್ಯಕ್ಷ ಯಶೋಧರ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಪದಾಧಿಕಾರಿಗಳ ಸಹಕಾರದೊಂದಿಗೆ ಪೂಜಾ ಕಾರ್ಯಕ್ರಮಗಳನ್ನು ಗುರುಸ್ವಾಮಿ ಜಯಶೀಲ ತಿಂಗಳಾಯ ನೆರವೇರಿಸಿದರು. ಪ್ರತೀ ವರ್ಷವೂ ವಸಾಯಿ ಪಶ್ಚಿಮದ ಸಾಯಿ ನಗರ ಗ್ರೌಂಡ್‌ನಲ್ಲಿ ಅತೀ ವಿಜೃಂಭಣೆಯಿಂದ ದಿನವಿಡೀ ವಿಶೇಷ ಕಾರ್ಯಕ್ರಮಗಳೊಂದಿಗೆ ಜರಗುತ್ತಿದ್ದ ಧಾರ್ಮಿಕ ಕಾರ್ಯಕ್ರಮವು ಈ ವರ್ಷ ಕೋವಿಡ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ಸರಳ ರೀತಿಯಲ್ಲಿ ಆಚರಿಸಲಾಯಿತು.
ಮಧ್ಯಾಹ್ನ ವಸಾಯಿ-ವಿರಾರ್ ಪರಿಸರದ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಪರಿಸರದ ದಾನಿಗಳು, ಸಮಿತಿಯ ಹಿತೈಷಿಗಳ ಸಮಕ್ಷಮದಲ್ಲಿ ವಿಶೇಷವಾಗಿ ಅಲಂಕೃತಗೊಂಡ ಕಲಿಯುಗದ ವರದ ಶ್ರೀ ಅಯ್ಯಪ್ಪ ಸ್ವಾಮಿ, ಜಗನ್ಮಾತೆ ಶ್ರೀ ದುರ್ಗಾಪರಮೇಶ್ವರೀ, ವಿಘ್ನವಿನಾಯಕ ಮತ್ತು ಷಣ್ಮುಖ ದೇವರಿಗೆ ಮಹಾಮಂಗಳಾರತಿ ನಡೆಯಿತು. ಬಳಿಕ ಲೋಕಕ್ಕೆ ಕಂಟಕವಾಗಿರುವ ಕೊರೊನಾ ಮಹಾಮಾರಿಯಿಂದ ಮುಕ್ತಗೊಂಡು ಸರ್ವರಿಗೂ ಸನ್ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸಲಾಯಿತು.
ಸಮಿತಿಯ ಗೌರವಾಧ್ಯಕ್ಷ ಕರ್ನೂರು ಶಂಕರ ಆಳ್ವ ಮಾತನಾಡಿ, ಕಳೆದ 19 ವರ್ಷಗಳಿಂದ ವಸಾಯಿ ಪರಿಸರದಲ್ಲಿ ವಿಜೃಂಭಣೆಯಿಂದ ಜರಗುತ್ತಿದ್ದ ಮಣಿಕಂಠ ಸೇವಾ ಸಮಿತಿಯ ವಾರ್ಷಿಕ ಮಹಾಪೂಜೆ ಪ್ರಸ್ತುತ ವರ್ಷ ಕೋವಿಡ್ ಮಹಾಮಾರಿಯಿಂದಾಗಿ ಪೂಜೆಯನ್ನು ಅದ್ದೂರಿಯಿಂದ ನಡೆಸಲು ಅನಾನುಕೂಲವಾದರೂ ವರ್ಷಂಪ್ರತಿ ಜರಗುವ ಧಾರ್ಮಿಕ ಕಾರ್ಯಕ್ರಮಕ್ಕೆ ಅಡಚಣೆಯಾಗಬಾರದೆಂದು ಸಮಿತಿಯವರೆಲ್ಲ ಸೇರಿ ಸುಮಾರು 250-300 ಭಕ್ತರಿಗೆ ಅವಕಾಶ ನೀಡಿ ಕಾರ್ಯಕ್ರಮವನ್ನು ನಡೆಸಿದ್ದೇವೆ ಎಂದು ತಿಳಿಸಿ, ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಕರ್ನೂರು ಶಂಕರ ಆಳ್ವ ಮಾತನಾಡಿ, ಕಾರ್ಯಕ್ರಮಕ್ಕೆ ಅರ್ನ ಬ್ಯಾಂಕ್ವೆಟ್‌ನ ಮಾಲಕ ಕರುಣಾಕರ ಅಮೀನ್, ದಯಾನಂದ ಪೂಜಾರಿ ಹಾಗೂ ವೈಯಕ್ತಿಕವಾಗಿ ನಾನು ಇಂದಿನ ಸಭಾ ಗೃಹವನ್ನು ಉಚಿತವಾಗಿ ನೀಡಿ ಸಹಕರಿಸಿ ದ್ದೇವೆ. ಸಮಿತಿಯ ಅಧ್ಯಕ್ಷ ಯಶೋಧರ ಕೋಟ್ಯಾನ್, ಉಪಾಧ್ಯಕ್ಷ ದಿನೇಶ್ ಎಕ್ಕಾರು, ಕಾರ್ಯದರ್ಶಿ ನಿತ್ಯಾನಂದ ಕೋಟ್ಯಾನ್, ಕೋಶಾಧಿಕಾರಿ ಹೇಮಂತ್ ಪಾರೇಖ್, ಸುಧೀರ್ ಸಾಲ್ಯಾನ್, ನಾಗರಾಜ ಶೆಟ್ಟಿ, ಅಶೋಕ್ ಶೆಟ್ಟಿ, ದೇವೇಂದ್ರ ಬುನ್ನನ್ ಮಹಾಪೂಜೆಗೆ ವಿಶೇಷವಾಗಿ ಸಹಕಾರ ನೀಡಿದ್ದು, ಅವರೆಲ್ಲರನ್ನು ಈ ಸಂದರ್ಭ ಅಭಿನಂದಿಸುತ್ತಿದ್ದೇನೆ. ಸಮಿತಿಯ ಧಾರ್ಮಿಕ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ ಸದಾಯಿರಲಿ ಎಂದು ತಿಳಿಸಿದರು.
ಭಜನ ಕಾರ್ಯಕ್ರಮದಲ್ಲಿ ಸಹಕರಿಸಿದ ಗುರುರಾಜ ಮಾನವ ಜಾಗೃತಿ ಬಳಗ ಮತ್ತು ಶ್ರೀ ಲಕ್ಷ್ಮೀನಾರಾಯಣ ಭಜನ ಮಂಡಳಿ ಮೀರಾರೋಡ್ ಇದರ ಸದಸ್ಯರಿಗೆ, ಪೂಜಾ ವಿಧಿವಿಧಾನವನ್ನು ನೆರವೇರಿಸಿದ ಗುರುಸ್ವಾಮಿ ಜಯಶೀಲ ತಿಂಗಳಾಯ ಅವರನ್ನು ಅಭಿನಂದಿಸಿ ಗೌರವಿಸಲಾಯಿತು. ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಕಾರ್ಯಕ್ರಮದಲ್ಲಿ ಮೀರಾ-ಡಹಾಣೂ ಬಂಟ್ಸ್‌ನ ಗೌರವಾಧ್ಯಕ್ಷ ಡಾ| ವಿರಾರ್ ಶಂಕರ್ ಶೆಟ್ಟಿ, ವಸಾಯಿ ಕರ್ನಾಟಕ ಸಂಘದ ಅಧ್ಯಕ್ಷ ಪಾಂಡು ಎಲ್. ಶೆಟ್ಟಿ, ಶ್ರೀ ದೇವಿ ಯಕ್ಷಕಲಾ ನಿಲಯದ ಅಧ್ಯಕ್ಷ ಶಶಿಧರ ಶೆಟ್ಟಿ, ಸ್ಥಳೀಯ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ವಿವಿಧ ಕ್ಷೇತ್ರಗಳ ಗಣ್ಯರು ಪ್ರಸಾದ ಸ್ವೀಕರಿಸಿದರು.
ಚಿತ್ರ-ವರದಿ: ರಮೇಶ್ ಉದ್ಯಾವರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.