ವಿಜಯ ಬ್ಯಾಂಕ್‌ : 87ನೇ ಸಂಸ್ಥಾಪನ ದಿನಾಚರಣೆ


Team Udayavani, Nov 7, 2017, 1:59 PM IST

05-Mum04.jpg

ಮುಂಬಯಿ: ವಿಜಯ ಬ್ಯಾಂಕ್‌ ಮುಂಬಯಿ ವಲಯದ ವತಿಯಿಂದ ವಿಜಯಾ ಬ್ಯಾಂಕಿನ 87 ನೇ ಸಂಸ್ಥಾಪನ ದಿನಾಚರಣೆಯು ನ. 3ರಂದು ವಿಲೇಪಾರ್ಲೆ ಪೂರ್ವದ ನವೀನ್‌ ಭಾಯಿ ಠಕ್ಕೇರ್‌ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಸಮಾರಂಭದಲ್ಲಿ ಮುಖ್ಯ ಅತಿಥಿ ಯಾಗಿ ಪಾಲ್ಗೊಂಡ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಮತ್ತು ದೇನಾ ಬ್ಯಾಂಕ್‌ನ ಮಾಜಿ ಮುಖ್ಯ ಆಡಳಿತ ನಿರ್ದೇಶಕ ಎಂ. ವಿ. ನಾಯರ್‌ ಅವರು ದೀಪ ಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಅತಿಥಿ ಎಂ. ವಿ. ನಾಯರ್‌ ಅವರು ಮೂಲ್ಕಿ ಸುಂದರ್‌ರಾಮ್‌ ಶೆಟ್ಟಿ ಮೆಮೋರಿಯಲ್‌ ಉಪನ್ಯಾಸ ನೀಡಿ, ಇಂದಿನ ಯಾಂತ್ರೀಕೃತ ಯುಗದಲ್ಲಿ ಗ್ರಾಹಕರ ಅನುಕೂಲತೆಗಳನ್ನು ಹಾಗೂ ಆಶಯಗಳನ್ನು ಅರ್ಥೈಯಿಸಿಕೊಂಡು ನಡೆದಾಗ ಮಾತ್ರ ಬ್ಯಾಂಕ್‌ ಅಭಿವೃದ್ಧಿಯ ಪಥದತ್ತ ಸಾಗಲು ಸಾಧ್ಯವಿದೆ. ಇನ್ನೊಂದು ಸ್ಪರ್ಧಾತ್ಮಕ ಯುಗದಲ್ಲಿ ಪಬ್ಲಿಕ್‌ ಸೆಕ್ಟರ್‌ ಬ್ಯಾಂಕ್‌ಗಳು ಬ್ಯಾಂಕ್‌ನ ಉದ್ಯೋಗಿಗಳ ನಿಸ್ವಾರ್ಥ ಹಾಗೂ ಶ್ರದ್ಧೆಯ ಕಾರ್ಯಗಳೊಂದಿಗೆ ನಿಂತಿರುತ್ತವೆ. ಗ್ರಾಹಕರಿಗೆ ವಿನೂತನ ತಂತ್ರಜ್ಞಾನಗಳ ಮುಖಾಂತರ ಕೈಗೆಟುವ ವ್ಯವಸ್ಥೆಯಲ್ಲಿ ಬ್ಯಾಂಕ್‌ಗಳು ಸ್ಪಂದಿಸುವುದು ಅನಿವಾರ್ಯವಾಗಿದೆ. ಉದ್ಯೋಗಿಗಳು ಐದು ಅಂಶಗಳನ್ನು  ಅರ್ಥೈಸಿಕೊಂಡು ಗ್ರಾಹಕರೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಂಡಾಗ ಮಾತ್ರ ಬ್ಯಾಂಕ್‌ಗಳತ್ತ ಗ್ರಾಹಕರು ಆಕರ್ಷಿತರಾಗುತ್ತಾರೆ. ವಿಜಯ ಬ್ಯಾಂಕ್‌ ಈ ನಿಟ್ಟಿನಲ್ಲಿ ಮಹತ್ತರವಾದ ಸಾಧನೆ ಮಾಡಿದೆ ಎಂದರು.

ಸಂಸ್ಥಾಪನ ದಿನಾಚರಣೆಯನ್ನು ವಿವಿಧ ವಲಯಗಳ ಸಿಎಸ್‌ಆರ್‌ ಕಾರ್ಯಕರ್ತರು ಆಯೋಜಿಸಿದ್ದು, ಇದೇ ಸಂದರ್ಭದಲ್ಲಿ ಬ್ಯಾಂಕ್‌ ವತಿಯಿಂದ ಪಾಡ್ಗಾ ಹಳ್ಳಿಯ ಜಿಲ್ಲಾ ಪರಿಷದ್‌ ಶಾಲೆಗಳಿಗೆ ನೀರು ಶುದ್ಧಿಕರಣ ಯಂತ್ರಗಳನ್ನು ವಿತರಿಸಿತು. ಅಲ್ಲದೆ ಅಂಗವಿಕಲರಿಗೆ 10 ವ್ಹೀಲ್‌ ಚೇರ್‌ಗಳನ್ನು ನಗರದ ಜೆ. ಜೆ. ಆಸ್ಪತ್ರೆಗೆ ವಿತರಿಸಲಾಯಿತು. ಗಣ್ಯರ ಸಮ್ಮುಖದಲ್ಲಿ  ಮೂವರು ಹೆಣ್ಮಕ್ಕಳು ಸೇರಿದಂತೆ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಸ್ವೀಕರಿಸಲಾಯಿತು.

ಮುಂಬಯಿಯ ಆರ್‌ಒ ಜನರಲ್‌ ಮ್ಯಾನೇಜರ್‌ ರಮೇಶ್‌ ಮಿಗ್ಲಾನಿ ಅವರು ಸ್ವಾಗತಿಸಿದರು. ಡಿಜಿಎಂ ಗಿರೀಶ್‌ ದಲ್ಕೊಟಿ ಅವರು ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಬ್ಯಾಂಕಿನ ವಿವಿಧ ಶಾಖೆಗಳ ಪ್ರತಿಭಾವಂತ ಕಲಾವಿದರಿಂದ ವಿವಿಧ ವಿನೋದಾವಳಿಗಳು ಪ್ರದರ್ಶನಗೊಂಡವು. ಮುಂಬಯಿ ವಲಯದ ವಿವಿಧ ಶಾಖೆಗಳ ಅಧಿಕಾರಿಗಳು, ಉದ್ಯೋಗಿಗಳು, ಗ್ರಾಹಕರು, ಸದಸ್ಯ ಬಾಂಧವರು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Kaup: ರಿಕ್ಷಾ ಚಾಲಕ ನೇಣಿಗೆ ಶರಣು

12

Mangaluru: ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಗುದ್ದಿದ ಕಾರು

5

Karkala: ಜಾಗದ ವಿಚಾರ; ಮಹಿಳೆಗೆ ಹಲ್ಲೆ; ಪ್ರಕರಣ ದಾಖಲು

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

complaint

Manipal: ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.