ವಿಶ್ವಕ್ಕೆ ಕಲೆ,ಸಂಸ್ಕೃತಿ ಪರಿಚಯಿಸಿದವರು ವಿಶ್ವಕರ್ಮರು: ಆಸ್ಕರ್
Team Udayavani, Aug 15, 2017, 2:38 PM IST
ಮುಂಬಯಿ: ವಿಶ್ವಕ್ಕೆ ಭಾರತದ ಕಲೆ ಸಂಸ್ಕೃತಿಯನ್ನು ಪರಿಚಯಿಸಿದವರು ವಿಶ್ವಕರ್ಮರು. ಶಿಲ್ಪಕಲೆ ಇಡೀ ಜಗತ್ತಿಗೆ ಮಾದರಿಯಾಗಿದೆ, ವಿಶ್ವಕರ್ಮರಿಗೆ ಕಲೆ ಸಂಸ್ಕೃತಿ ಹುಟ್ಟಿನಿಂದಲೇ ಬಂದಿದೆ. ಯಾವುದೇ ತರಬೇತಿಯ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಹೇಳಿದರು.
ಅವರು ಹೊಸದಿಲ್ಲಿಯ ಕರ್ನಾಟಕ ಸಂಘದ ಸಭಾಂಗಣದಲ್ಲಿ ಕಲಾ ಸಂಕುಲ ಸಂಸ್ಥೆಯ ವತಿಯಿಂದ ಆ. 11ರಂದು ನಡೆದ ಅಖೀಲ ಭಾರತ 2ನೇ ವಿಶ್ವಕರ್ಮ ಸಂಸ್ಕೃತಿ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ, ಕರ್ನಾಟಕದಲ್ಲಿ ವಿಶ್ವಕರ್ಮ ಸಮುದಾಯದವರು ಅಭಿವೃದ್ಧಿಯಾಗಬೇಕು ಎಂಬ ಮಹತ್ವದ ಉದ್ದೇಶ ದಿಂದಲೇ ಕರ್ನಾಟಕ ಸರ್ಕಾರ ವಿಶ್ವಕರ್ಮ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡಿದೆ, ಕರ ಕುಶಲಕರ್ಮಿಗಳು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಲಿ. ಮಾರುತಿ ಬಡಿಗೇರ್ ದೆಹಲಿಯಲ್ಲಿ ನಡೆಸುತ್ತಿರುವ ಸಮ್ಮೇಳನ ಅತಿ ಮಹತ್ವದ್ದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಮ್ಮೇಳನ ಸಮಿತಿಯ ಅಧ್ಯಕ್ಷ ರಾದ ಕಲಾ ಸಂಕುಲ ಸಂಸ್ಥೆಯ ಅಧ್ಯಕ್ಷ
ಮಾರುತಿ ಬಡಿಗೇರ್ ಮಾತನಾಡಿ ದೆಹಲಿಯಲ್ಲಿ ವಿಶ್ವಕರ್ಮ ಭವನ ನಿರ್ಮಾಣ, ಕೇಂದ್ರ ಸರ್ಕಾರದಿಂದ ವಿಶ್ವಕರ್ಮ ಜಯಂತಿ ಘೋಷಣೆ, ಮತ್ತು ಕೇಂದ್ರ ಸರ್ಕಾರ ದೇಶದಇತರ ರಾಜ್ಯಗಳಲ್ಲೂ ವಿಶ್ವಕರ್ಮ ಜಯಂತಿ ಘೋಷಣೆ ಮಾಡಬೇಕು ಎನ್ನುವ ಉದ್ದೇಶದಿಂದ ಸಮ್ಮೇಳನ ನಡೆಸಲಾಗುತ್ತಿದೆ ಎಂದರು.
ನಿವೃತ್ತ ಐಎಎಸ್ ಅಧಿಕಾರಿ ಬೆಂಗಳೂರಿನ ಕೆ. ಎಸ್. ಪ್ರಭಾಕರ್ ಸಮ್ಮೇಳನಾಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎನ್. ನಂದಕುಮಾರ್, ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ಅಧ್ಯಕ್ಷ ಬಾಬು ಪತ್ತಾರ್, ನವದೆಹಲಿ ಜನಕಪುರಿ ಕನ್ನಡ ಕೂಟದ ಅಧ್ಯಕ್ಷ ಎನ್. ಆರ್. ಶ್ರೀನಾಥ್, ಕಲಬುರ್ಗಿ ವಿಶ್ವಕರ್ಮ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ವೀರೇಂದ್ರ ಇನಾಂದಾರ್, ದೆಹಲಿ ವಿಶ್ವಕರ್ಮ ಸಮಾಜದ ಮುಖಂಡ ಓರಿಲಾಲ್ ಶರ್ಮಾ, ದಿನೇಶ್ ವತ್ಸ, ಪರಮಾನಂದ ಜಾಂಗೀರ, ವೇದ ಪ್ರಕಾಶ್ ಪಾಂಚಾಲ್, ಪ್ರಕಾಶ್ ಪಾಂಚಾಳ್, ಒಲಿಂಪಿಕ್ ಕ್ರೀಡಾಪಟು ದೀಪಾ ಕರ್ಮಾಕರ್ ಉಪಸ್ಥಿತರಿದ್ದರು.
ಸಮ್ಮೇಳನದಲ್ಲಿ ಮಂಗಳೂರಿನ ನೃತ್ಯ ಕಲಾವಿದೆ ಕು| ರೆಮೋನಾ ಇವೆಟ್ ಪಿರೇರಾ ಅವರಿಂದ ನƒತ್ಯ ವೈಭವ, ಕಲಾವಿದರಾದ ಉಡುಪಿಯ ಸುರೇಶ್ ಆಚಾರ್ಯ ಮತ್ತು ರಾಯಚೂರಿನ ಸೌಭಾಗ್ಯ ಅವರಿಂದ ಗೀತಗಾಯನ ನಡೆಯಿತು. ವಿವಿಧ ಕ್ಷೇತ್ರಗಳ ಗಣ್ಯ ಸಾಧಕರಾದ ದಿನೇಶ್ ಕುಮಾರ್ ವತ್ಸ ವಿಶ್ವಕರ್ಮ ನವದೆಹಲಿ, ಅಜಯ್ ಕುಮಾರ್ ಶೋಬಾನೆ ಭೂಪಾಲ್, ಆಬೇìಟ್ಟು ಜ್ಞಾನದೇವಾ ಕಾಮತ್, ಹೇಮ ರೆಡ್ಡಿ, ಎನ್. ಆರ್. ಸೌಭಾಗ್ಯಾ, ಸೋಮಶೇಖರ್, ಜಿ. ಮಹೇಶ್, ಫಾತೀಮಾ ಹುಸೇನ್, ಕೃಷ್ಣ ಕುಮಾರ್ ಎಸ್. ಯಾಧವ್, ವಿಜಯ ಕುಮಾರ್ ಹಂಚಿನಾಳ್, ಮೋನಪ್ಪ ಇನಾಂದಾರ್, ಕಾಳಪ್ಪ ಇನಾಂದಾರ್, ಎಂ. ಜಿ. ಪತ್ತಾರ್ ಇವರಿಗೆ ಪ್ರಶಸ್ತಿ ಪ್ರದಾನ ಮತ್ತು ಮಂಗಳೂರಿನ ನೃತ್ಯ ಕಲಾವಿದೆ ರೆಮೋನಾ ಇವೆಟ್ ಪಿರೇರಾಗೆ ಭಾರತ ಗೌರವ ಪ್ರಶಸ್ತಿ ಪ್ರದಾನ ನಡೆಯಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ
ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ
ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.