ಪುಣೆ ಬಂಟರ ಸಂಘದ ಮಹಿಳಾ ವಿಭಾಗ: ಕಟಪಾಡಿ ಕಟ್ಟಪ್ಪೆ ಚಲನಚಿತ್ರ ಪ್ರದರ್ಶನ
Team Udayavani, Jul 5, 2019, 4:59 PM IST
ಪುಣೆ: ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ಆಶ್ರಯದಲ್ಲಿ ಜೂ. 30ರಂದು ಬಾರ್ಣೇಯ ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಬಂಟರ ಭವನದ ಲತಾ ಸುಧೀರ್ ಶೆಟ್ಟಿ ವೇದಿಕೆಯಲ್ಲಿ ಕಟಪಾಡಿ ಕಟ್ಟಪ್ಪೆ ತುಳು ಚಲನಚಿತ್ರ ಪ್ರದರ್ಶನಗೊಂಡಿತು.
ಸಂಘದ ಮಹಿಳಾ ವಿಭಾಗವು ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಸಮಿತಿಯ ಈ ಕಾರ್ಯಗಳಿಗೆ ನಿಧಿ ಸಂಚಯನದ ಪ್ರಯುಕ್ತ ಈ ಚಲನಚಿತ್ರವನ್ನು ಆಯೋಜಿಸಿದ್ದು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಚಲನಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ಅಧ್ಯಕ್ಷ ಹಾಗೂ ಶ್ರೀ ಗುರುದೇವಾ ಸೇವಾ ಬಳಗ ಪುಣೆ ಇದರ ಅಧ್ಯಕ್ಷರಾದ ಸದಾನಂದ ಕೆ. ಶೆಟ್ಟಿ, ಸಂಘದ ಮಾಜಿ ಅಧ್ಯಕ್ಷ ಜಯಂತ್ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು ದೀಪ ಪ್ರಜ್ವಲಿಸಿ ಚಲನಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ಸಂಘದ ಉಪಾಧ್ಯಕ್ಷರಾದ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ, ಗೌರವ ಕೋಶಾಧಿಕಾರಿ ಎರ್ಮಾಳ್ ಚಂದ್ರಹಾಸ ಶೆಟ್ಟಿ, ಪದಾಧಿಕಾರಿಗಳಾದ ಪ್ರಶಾಂತ್ ಎ. ಶೆಟ್ಟಿ, ಪ್ರಶಾಂತ್ ಶೆಟ್ಟಿ ಹೆರ್ಡೆಬೀಡು, ದಿನೇಶ್ ಶೆಟ್ಟಿ, ದಕ್ಷಿಣ ಪ್ರಾದೇಶಿಕ ಕಾರ್ಯಾಧ್ಯಕ್ಷ ರವಿ ಕೆ. ಶೆಟ್ಟಿ, ಚಲನಚಿತ್ರದ ಮುಂಬಯಿ ಸಂಚಾಲಕರಾದ ಪ್ರೇಮ್ ಶೆಟ್ಟಿ ಮುಂಬಯಿ, ಎರ್ಮಾಳ್ ಬಾಲಚಂದ್ರ ಶೆಟ್ಟಿ, ಪುರಂದರ ಪೂಜಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್. ಶೆಟ್ಟಿ, ಸದಸ್ಯರಾದ ಸುಚಿತ್ರಾ ಎಸ್. ಶೆಟ್ಟಿ, ದಿವ್ಯಾ ಎಸ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಯಶ್‌ರಾಜ್ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಪ್ರೇಮ್ ಶೆಟ್ಟಿ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ತುಳುಚಿತ್ರ ಕಲಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.